Headlines

ಮಸೀದಿ ಬಳಿ ನಿಲ್ಲಿಸಿದ್ದ ಬೈಕ್ ಕಳವು – ಚಂದೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

​ಕಾಸರಗೋಡು: ಮಸೀದಿಯ ಸಮೀಪ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ದೂರು ದಾಖಲಾಗಿದೆ. ನಾರ್ತ್ ತೃಕ್ಕರಿಪುರ ತಂಗಯಂ ನಿವಾಸಿ ಸಿ.ವಿ. ಅವರ ಸಂಬಂಧಿಕರಿಗೆ ಸೇರಿದ ಬೈಕ್ ಕಳುವಾಗಿದೆ. ಈ ಬಗ್ಗೆ ನೀಡಿದ ದೂರಿನ ಮೇರೆಗೆ ಚಂದೇರಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ​ಜೂನ್ 8ರ ಸಂಜೆ ತಂಗಯಂ ಪಳ್ಳಿಯ ಮುಂಭಾಗದಲ್ಲಿ ಬೈಕನ್ನು ನಿಲ್ಲಿಸಲಾಗಿತ್ತು. ವಿವಿಧ ಸ್ಥಳಗಳಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ.

Read More

ಕಾರ್ಗಿಲ್ ವಿಜಯ್ ದಿವಸ್‌ಗೆ ಸಜ್ಜಾಗುತ್ತಿರುವ ಮಂಗಳೂರಿನ ಐತಿಹಾಸಿಕ ಟಿ-55 ಯುದ್ಧ ಟ್ಯಾಂಕ್

ಮಂಗಳೂರು:ಭಾರತದ 1965 ಹಾಗೂ 1971ರ ಯುದ್ಧಗಳಲ್ಲಿ ಬಳಸಲಾಗಿದ್ದ ಐತಿಹಾಸಿಕ ಟಿ-55 ಯುದ್ಧ ಟ್ಯಾಂಕ್ ಹಾಗೂ .303 ರೈಫಲ್‌ಗೆ ಮಂಗಳೂರಿನಲ್ಲಿ ಶಾಶ್ವತ ಸ್ಥಾನ ಕಲ್ಪಿಸಲಾಗಿದೆ. ಕದ್ರಿಯ ಯುದ್ಧ ಸ್ಮಾರಕದ ಸಮೀಪ, ಸರ್ಕ್ಯೂಟ್ ಹೌಸ್ ಪಕ್ಕದಲ್ಲಿ ಮಂಗಳೂರು ಮಹಾನಗರ ಪಾಲಿಕೆ ನಿರ್ಮಿಸಿರುವ ವಿಶೇಷ ವೇದಿಕೆಯಲ್ಲಿ ಟ್ಯಾಂಕ್ ಪ್ರತಿಷ್ಠಾಪನೆಯಾಗಿದ್ದು, ಜುಲೈ 26ರ ಕಾರ್ಗಿಲ್ ವಿಜಯ್ ದಿವಸ್‌ದಂದು ಆಕರ್ಷಕ ವಿನ್ಯಾಸದೊಂದಿಗೆ ಸಾರ್ವಜನಿಕರ ವೀಕ್ಷಣೆಗೆ ಲೋಕಾರ್ಪಣೆಗೊಳ್ಳಲು ಸಜ್ಜಾಗಿದೆ. ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮನವಿಗೆ ಸ್ಪಂದಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್…

Read More

ಮಣಿಪುರದಲ್ಲಿ ‘ಆಟಿದ ನೆನಪು’: ಕರಾವಳಿ ಸಂಪ್ರದಾಯದ ಅನಾವರಣ

ಉಡುಪಿ: ಕರಾವಳಿಯ ಆಟಿ ತಿಂಗಳ ಸಂಪ್ರದಾಯ, ಹಳೆಯ ಜೀವನಶೈಲಿ, ಔಷಧೀಯ ಸಸ್ಯಗಳು ಹಾಗೂ ಸಾಂಪ್ರದಾಯಿಕ ಆಹಾರ ಸಂಸ್ಕೃತಿಯನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಮಣಿಪುರದಲ್ಲಿ ‘ಆಟಿದ ನೆನಪು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘ ಮಣಿಪುರ ಹಾಗೂ ಶ್ರೀ ನಾರಾಯಣ ಗುರು ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಮಾಜ ಸೇವಕಿ ಗೀತಾ ವಾಗ್ಲೆ ಅವರು ಆಟಿ ತಿಂಗಳಲ್ಲಿ ಬಳಸುತ್ತಿದ್ದ ಔಷಧೀಯ ಸಸ್ಯಗಳು, ವಿವಿಧ…

Read More

ಉಕ್ರೇನ್‌ನಲ್ಲಿ ರಷ್ಯಾ ಕ್ಷಿಪಣಿ ದಾಳಿ; ಕಾಸರಗೋಡು ಮೂಲದ ಅಖಿಲ್ ಸೇರಿ ನಾಲ್ವರು ಭಾರತೀಯರ ದುರ್ಮರಣ

ಕೀವ್, ಜು. 21: ಉಕ್ರೇನ್‌ನ ಪ್ರಮುಖ ಬಂದರು ನಗರವಾದ ಒಡೆಸಾ ಸಮೀಪ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಕಾಸರಗೋಡು ಮೂಲದ ಯುವಕ ಸೇರಿದಂತೆ ನಾಲ್ವರು ಭಾರತೀಯರು ಸೇರಿ ಒಟ್ಟು 10 ಮಂದಿ ಮೃತಪಟ್ಟಿದ್ದಾರೆ. ಮೃತ ಭಾರತೀಯರಲ್ಲಿ ಕಾಸರಗೋಡು ಜಿಲ್ಲೆಯ ವೆಲ್ಲರಿಕುಂಡು ಮೂಲದ ವ್ಯಾಪಾರಿ ನೌಕಾಪಡೆಯ ಉದ್ಯೋಗಿ ಅಖಿಲ್ ಜೋಯಾನ್ (26) ಗುರುತಿಸಲ್ಪಟ್ಟಿದ್ದಾರೆ. ಅವರು ಜೋಯಾನ್ ಹಾಗೂ ಸ್ಯಾಲಿ ದಂಪತಿಯ ಪುತ್ರರಾಗಿದ್ದಾರೆ. ಉಳಿದ ಮೂವರು ಭಾರತೀಯರ ಗುರುತು ಇನ್ನೂ ಬಹಿರಂಗವಾಗಿಲ್ಲ. ಮತ್ತೋರ್ವ…

Read More

‘ಮಿಥ್ಯ’ ಅಭಿನಯಕ್ಕೆ ರಾಷ್ಟ್ರೀಯ ಪ್ರಶಸ್ತಿ: ಪತ್ರಿಕಾಗೋಷ್ಠಿಯಲ್ಲಿ ಕಲಾ ಪಯಣ ಹಂಚಿಕೊಂಡ ರೂಪಶ್ರೀ ವರ್ಕಾಡಿ

ಮಂಗಳೂರು:72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ ಹಾಗೂ ಸುಮಂತ್ ಭಟ್ ನಿರ್ದೇಶನದ ‘ಮಿಥ್ಯ’ ಕನ್ನಡ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದಿರುವ ಕರಾವಳಿಯ ಹಿರಿಯ ರಂಗಭೂಮಿ ಹಾಗೂ ಚಲನಚಿತ್ರ ನಟಿ ರೂಪಶ್ರೀ ವರ್ಕಾಡಿ ಅವರು ತಮ್ಮ ಕಲಾ ಪಯಣ, ರಾಷ್ಟ್ರ ಪ್ರಶಸ್ತಿ ಹಾಗೂ ಚಿತ್ರರಂಗದ ಅನುಭವಗಳನ್ನು ನಗರದ ಪತ್ರಿಕಾಭವನದಲ್ಲಿ ನಡೆದ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿ ಗ್ರಾಮದ ಹರೀಶ್ ಹಾಗೂ…

Read More

ಅಮೃತ ಪ್ರಕಾಶ ಪತ್ರಿಕೆಯ 13ನೇ ವರ್ಷದ ವಾರ್ಷಿಕೋತ್ಸವ; ವಿಶೇಷ ಸಂಚಿಕೆ ಬಿಡುಗಡೆ

ಮಂಗಳೂರು: ಅಮೃತ ಪ್ರಕಾಶ ಪತ್ರಿಕೆಯ 13ನೇ ವರ್ಷದ ವಾರ್ಷಿಕೋತ್ಸವ ಹಾಗೂ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮವು ಮಂಗಳವಾರ ನಗರದ ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾವೂರು ಬಂಟರ ಸಂಘದ ಅಧ್ಯಕ್ಷ ಆನಂದ ಶೆಟ್ಟಿ ಅಡ್ಯಾರ್ ವಹಿಸಿ ಮಾತನಾಡಿ, ಯಾವುದೇ ಪತ್ರಿಕೆ ಕೇವಲ ಸುದ್ದಿಗಳನ್ನು ಪ್ರಕಟಿಸುವ ಮಾಧ್ಯಮವಲ್ಲ; ಅದು ಸಮಾಜದ ಧ್ವನಿ, ಸಂಸ್ಕೃತಿಯ ಪ್ರತಿಬಿಂಬ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಶಕ್ತಿಯಾಗಿದೆ. ಕಳೆದ 13 ವರ್ಷಗಳಿಂದ ಅಮೃತ ಪ್ರಕಾಶ ಪತ್ರಿಕೆ ಸಮಾಜಮುಖಿ ವಿಚಾರಗಳು, ಮಹಿಳಾ ಸಬಲೀಕರಣ,…

Read More

ಮಳೆಗಾಲದ ಸುಮಧುರ ಗೀತೆಗಳ ರಸದೌತಣ ‘ಸುಹಾನ ಸಫರ್’ ಜುಲೈ 26ರಂದು

ಮಂಗಳೂರು:ಮಳೆಗಾಲದ ನೆನಪುಗಳನ್ನು ಸಂಗೀತದ ಮೂಲಕ ಮರುಕಳಿಸುವ ಉದ್ದೇಶದಿಂದ ಕುಂಬ್ಳೆ ಬ್ರದರ್ಸ್ ಹಾಗೂ ಲಯನ್ಸ್ ಕ್ಲಬ್ ಆಫ್ ಮಂಗಳೂರು ಸಹಯೋಗದಲ್ಲಿ ‘ಸುಹಾನ ಸಫರ್’ ಹಾಗು “ರಿಮ್‍ಝಿಮ್ ಗಿರೆ ಸಾವನ್ ” ಸಂಗೀತ ಕಾರ್ಯಕ್ರಮವನ್ನು ಜುಲೈ 26 ರ ಭಾನುವಾರ ಸಂಜೆ 5 ಗಂಟೆಯಿಂದ ನಗರದ ಸುಜೀರ್ ಸಿ.ವಿ. ನಾಯಕ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್ ಮಂಗಳೂರು ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಲಯನ್ ಕುಂಬ್ಳೆ ನರಸಿಂಹ ಪ್ರಭು ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…

Read More

ಕಾಲ್ಸೇತುವೆಯಿಂದ ನದಿಗೆ ಬಿದ್ದು ಕಾಲೇಜು ವಿದ್ಯಾರ್ಥಿನಿಗೆ ಗಾಯ; ಪ್ರಾಣ ಪಣಕ್ಕಿಟ್ಟು ಜೀವ ಉಳಿಸಿದ ಉದಯ ಕುಮಾರ್; ಧ್ವಂಸಗೊಂಡ ದೇರಂಬಳಂ ಸೇತುವೆ ಪುನರ್‌ ನಿರ್ಮಿಸದಿರುವುದಕ್ಕೆ ತೀವ್ರ ಪ್ರತಿಭಟನೆ

ಉಪ್ಪಳ:ಹಲವು ವರ್ಷಗಳಿಂದ ಧ್ವಂಸಗೊಂಡಿರುವ ಜೋಡುಕಲ್ಲು ಮಡಂದೂರು –ದೇರಂಬಳಂ ಸೇತುವೆಯನ್ನು ಪುನರ್‌ನಿರ್ಮಿಸದ ಕಾರಣ ಅಪಘಾತಗಳು ಪದೇಪದೇ ಸಂಭವಿಸುತ್ತಿರುವ ನಡುವೆಯೇ, ಕಾಲ್ಸೇತುವೆ ಮೂಲಕ ತೆರಳುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನದಿಗೆ ಬಿದ್ದು ಗಾಯಗೊಂಡಿದ್ದಾಳೆ. ಸ್ಥಳೀಯ ನಿವಾಸಿ ಐತ್ತಪ್ಪ ಪೂಜಾರಿಯವರ ಪುತ್ರಿ ನಿಷ್ಮಿತಾ ಅಪಘಾತಕ್ಕೀಡಾದ ವಿದ್ಯಾರ್ಥಿನಿ. ಸಹೋದರಿ ಸುಷ್ಮಿತಾ ಅವರ ಕೈ ಹಿಡಿದು ಕಾಲ್ಸೇತುವೆ ದಾಟುತ್ತಿದ್ದ ವೇಳೆ ನಿಷ್ಮಿತಾ ನದಿಗೆ ಏಕಾಏಕಿ ಬಿದ್ದಳು. ಇದನ್ನು ಗಮನಿಸಿದ ಸ್ಥಳೀಯ ನಿವಾಸಿ ಉದಯ ಕುಮಾರ್ ನದಿಗೆ ಇಳಿದು ಸಾಹಸಮಯವಾಗಿ ವಿದ್ಯಾರ್ಥಿನಿಯನ್ನು ರಕ್ಷಿಸಿದ್ದಾರೆ . ಗಾಯಗೊಂಡ ನಿಷ್ಮಿತಾಳನ್ನು…

Read More

ಗೊಲ್ಲ ಸಮಾಜ ಸಂಘ ಮಾನ್ಯ – ಕಾರ್ಯಲಯ ಉದ್ಘಾಟನೆ

ಬದಿಯಡ್ಕ : ಗೊಲ್ಲ ಸಮಾಜ ಸಂಘ ಮಾನ್ಯದ ನೂತನ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮವು ಸಂಘದ ಸದಸ್ಯರು ಮತ್ತು ಗಣ್ಯರ ಉಪಸ್ಥಿತಿಯಲ್ಲಿ ನೆರವೇರಿತು. ಸಂಘದ ಅಧ್ಯಕ್ಷ ನವೀನ್ ಚಂದ್ರ ಮಾಸ್ತರ್ ದೀಪ ಬೆಳಗಿಸಿ ಕಾರ್ಯಾಲಯವನ್ನು ಉದ್ಘಾಟಿಸಿ, ಸಮಾಜದ ಅಭಿವೃದ್ಧಿಗೆ ಸಂಘದ ಕಾರ್ಯಾಲಯ ಕೇಂದ್ರಬಿಂದುವಾಗಲಿ ಎಂದು ಆಶಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಮಂಜುನಾಥ ಡಿ ಮಾನ್ಯ, ರಾಧಾಕೃಷ್ಣ ಎಂ.ಕೆ., ಮಣಿಕಂಠ ಮಾನ್ಯ, ಮುದ್ದುಕೃಷ್ಣ ಸಿ.ಎಚ್., ಸೀತಾರಾಮ ಎಂ., ಶ್ರೀನಿವಾಸ ಎಂ.ಎಚ್., ಈಶ್ವರ ಕೊಡಗಿ, ಕಿಶೋರ ಪುದುಕೋಳಿ, ಸುಧೀರ್ ಮೇಗಿನಡ್ಕ, ದಿನೇಶ್ ಕೊಡಗಿ,…

Read More

ಯಕ್ಷಧ್ರುವ ಪಟ್ಲ ಫೌಂಡೇಷನ್ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ರಸ್ತೆ ಅಪಘಾತದಲ್ಲಿ ದುರ್ಮರಣ

ಮಂಗಳೂರು:ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ಹಾಗೂ ಹಾಪ್‌ಕಾಮ್ಸ್ ಉದ್ಯೋಗಿ ರವಿ ಶೆಟ್ಟಿ (ಅಶೋಕ್ ನಗರ) ಅವರು ರಸ್ತೆ ಅಪಘಾತದಲ್ಲಿ ಮಂಗಳವಾರ (ಜು. 21) ಮುಂಜಾನೆ ನಿಧನರಾದರು. ತಿರುಪತಿ ಯಾತ್ರೆ ಮುಗಿಸಿ ಮಂತ್ರಾಲಯದತ್ತ ತೆರಳುತ್ತಿದ್ದ ವೇಳೆ, ಮಂತ್ರಾಲಯ ಸಮೀಪ ಕೇವಲ ಒಂದೆರಡು ಕಿಲೋಮೀಟರ್ ದೂರದಲ್ಲಿ ಅವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ರವಿ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅದೇ ಕಾರಿನಲ್ಲಿದ್ದ…

Read More
error: Content is protected !!