ಮಳೆಗೆ ಜೀವಂತಗೊಂಡ ನೇತ್ರಾವತಿ; ಎ.ಎಂ.ಆರ್ ಡ್ಯಾಂನಿಂದ ನೀರು ಬಿಡುಗಡೆ ಹಿನ್ನೆಲೆ ನದಿ ಭರ್ತಿ

ಬಂಟ್ವಾಳ: ಉರಿ ಬಿಸಿಲಿನ ತಾಪಕ್ಕೆ ಬತ್ತಿ ಹೋಗಿ ಕಲ್ಲು ಬಂಡೆಗಳು ಕಾಣಿಸುತ್ತಿದ್ದ ನೇತ್ರಾವತಿ ನದಿ ಇದೀಗ ಮತ್ತೆ ಜಲಾವೃತಗೊಂಡು ತುಂಬಿ ಹರಿಯುತ್ತಿರುವ ದೃಶ್ಯ ಜನರಲ್ಲಿ ನಿರಾಳತೆ ಮೂಡಿಸಿದೆ. ಕೆಲವು ವಾರಗಳ ಹಿಂದೆ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ತೀವ್ರ ಕುಸಿತ ಕಂಡಿದ್ದು, ಒಳಹರಿವು ಕೂಡ ಕ್ಷೀಣವಾಗಿತ್ತು. ಇದರ ಪರಿಣಾಮ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜನರಿಗೆ ಕುಡಿಯುವ ನೀರಿನ ಅಭಾವ ಎದುರಾಗುವ ಭೀತಿ ಉಂಟಾಗಿತ್ತು. ಆದರೆ ಕಳೆದ ಮೂರು–ನಾಲ್ಕು ದಿನಗಳಿಂದ ಘಟ್ಟ ಪ್ರದೇಶ ಹಾಗೂ ತಾಲೂಕಿನ ವಿವಿಧ…

Read More

ಬೆದ್ರಾಳದಲ್ಲಿ ಮಲತ್ಯಾಜ್ಯ ಘಟಕ ಆಗಿಯೇ ಆಗುತ್ತದೆ: ಮಹಮ್ಮದ್ ಆಲಿ ಸ್ಪಷ್ಟನೆ

ಪುತ್ತೂರು :ಪುತ್ತೂರಿನ ಬೆದ್ರಾಳದ ಬಡಾವಣೆಯ ಬಗ್ಗೆ ಪುತ್ತೂರಿನ ನಗರಸಭೆ ಮಾಜಿ ವಿಪಕ್ಷ ನಾಯಕ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದ್ ಆಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಬೆದ್ರಾಳದಲ್ಲಿ ಮಲತ್ಯಾಜ್ಯ ಘಟಕ ಅಲ್ಲಿ ಅಗಿಯೇ ಆಗುತ್ತದೆ. ಯಾರು ಏನು ಬೇಕಾದರೂ ಮಾಡಲಿ. ಆದರೆ ಸರಕಾರ ವಿರುದ್ದ ಹೋಗಲು ಯಾರಿಗೂ ಸಾಧ್ಯವಿಲ್ಲ. ಮಲತ್ಯಾಜ್ಯ ಘಟಕಕ್ಕೆ ರಸ್ತೆ ನಿರ್ಮಾಣಕ್ಕೆ ಖಾಸಗಿ ಉದ್ಯಮಿ ಭೂ ಸ್ವಾಧೀನಕ್ಕೆ ನಗರ ಸಭೆಗೆ ಆದೇಶವಾಗಿದ್ದು ಇದರ ಪ್ರಕ್ರಿಯ ಆರಂಭವಾಗಿದೆ. ಕಾನೂನು ಬಾಹಿರ ಬಡಾವಣೆ ನಿರ್ಮಾಣಕ್ಕೆ ಮಾತ್ರ ನನ್ನ…

Read More

ಕಿನ್ನಿಮಜಲಿನಲ್ಲಿ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ನಾಲ್ವರು ಅಪಾಯದಿಂದ ಪಾರು

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ಉಳ್ಳಾಲ ತಾಲೂಕಿನ ಇರಾ ಗ್ರಾಮದ ಕಿನ್ನಿಮಜಲು ಎಂಬಲ್ಲಿ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಹಾಗೂ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ರಿಕ್ಷಾದಲ್ಲಿ ಚಾಲಕ ಸಹಿತ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದು, ರಾತ್ರಿ ಸುಮಾರು 2 ಗಂಟೆ ವೇಳೆ ಘಟನೆ ‌ನಡೆದಿದೆ ಎಂದು ಹೇಳಲಾಗಿದೆ.ಉದ್ಯಾವರ ಮಾಡ ಕ್ಷೇತ್ರದಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಹೋಗಿ ವಾಪಸು ಚಟ್ಟೆಕಲ್ಲು ಮನೆಗೆ ಬರುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ಕಳೆದ ರಿಕ್ಷಾ ರಸ್ತೆಯಿಂದ ಪಕ್ಕದ ತೋಟಕ್ಕೆ…

Read More

ಮಂಗಳೂರು ವಿವಿಯಲ್ಲಿ ‘ಸಂಭ್ರಮ-2026’ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ‘ಸಂಭ್ರಮ-2026’ ಸಾಂಸ್ಕೃತಿಕ ಸ್ಪರ್ಧೆಗೆ ಮಂಗಳವಾರ ಮಂಗಳ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಸಿನಿಮಾ ಹಾಗೂ ನಾಟಕ ಕಲಾವಿದ ಸತೀಶ್ ಬಂದಲೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಾಗಿರುವುದು ಹೆಮ್ಮೆಯ ಸಂಗತಿ. ಸಾಂಸ್ಕೃತಿಕ ಕಾರ್ಯಕ್ರಮಗಳು ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಜೀವನದ ಬೆಳವಣಿಗೆಗೆ ಪೂರಕವಾಗುತ್ತವೆ ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿವಿ ಕುಲಪತಿ…

Read More

ಸಿಟಿ ಸೆಂಟರ್‌ನಲ್ಲಿ ಮೂರು ದಿನಗಳ ಐತಿಹಾಸಿಕ ವಸ್ತು ಪ್ರದರ್ಶನ

ಮಂಗಳೂರು : ಸಿಟಿ ಸೆಂಟರ್ ಪ್ರಸ್ತುತಪಡಿಸುವ ದಕ್ಷಿಣ ಕನ್ನಡ ಜಿಲ್ಲಾ ಫಿಲಾಟೆಲಿಕ್ಸ್ ಮತ್ತು ನುಮಿಸ್ಮ್ಯಾಟಿಕ್ಸ್ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಮೂರು ದಿನಗಳ ಅಪರೂಪದ “ವಿಂಟೇಜ್ ವೈಬ್ಸ್” ವಸ್ತು ಪ್ರದರ್ಶನವು ಮೇ 15ರಿಂದ 17ರವರೆಗೆ ಮಂಗಳೂರಿನ ಸಿಟಿ ಸೆಂಟರ್ ಮಾಲ್ ನ ನೆಲ ಅಂತಸ್ತಿನಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಫಿಲಾಟೆಲಿಕ್ಸ್ ಮತ್ತು ನುಮಿಸ್ಮ್ಯಾಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಪ್ರಭಾಕರ್ ಕಾಮತ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರದರ್ಶನವು ಪ್ರತಿದಿನ ಬೆಳಿಗ್ಗೆ 11 ಗಂಟೆಯಿಂದ ರಾತ್ರಿ…

Read More

ಬಡಗುಶಬರಿಮಲೆಯಲ್ಲಿ ಹಿತ್ತಾಳೆ ಕವಚದ 18 ಮೆಟ್ಟಿಲುಗಳ ಲೋಕಾರ್ಪಣೆ; ಭವ್ಯ ಮಹೋತ್ಸವ ಸಂಭ್ರಮ

ಕುಂಬ್ಡಾಜೆ ಬಡಗುಶಬರಿಮಲೆ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಹಿತ್ತಾಳೆ ಕವಚದ 18 ಮೆಟ್ಟಿಲುಗಳ ಲೋಕಾರ್ಪಣೆ ಹಾಗೂ ಶ್ರೀ ದೇವರ ಭವ್ಯ ಮಹೋತ್ಸವ ಬಡಗುಶಬರಿಮಲೆ ಪರಮಪವಿತ್ರ ಧಾರ್ಮಿಕ ಕೇಂದ್ರ – ಪಂದಳA ಅರಮನೆಯ ನಾರಾಯಣ ವರ್ಮಬದಿಯಡ್ಕ: ಕುಂಬ್ಡಾಜೆ ಬಡಗುಶಬರಿಮಲೆ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಹಿತ್ತಾಳೆ ಕವಚದ 18 ಮೆಟ್ಟಿಲುಗಳ ಲೋಕಾರ್ಪಣೆ ಹಾಗೂ ಶ್ರೀ ದೇವರ ಭವ್ಯ ಮಹೋತ್ಸವ ಸೋಮವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಈ ಸಂದರ್ಭದಲ್ಲಿ ಧಾರ್ಮಿಕ…

Read More

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ

ತಿರುವನಂತಪುರಂ: ಕೇರಳದಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್‌ (ಯುಡಿಎಫ್) ಭರ್ಜರಿ ಗೆಲುವಿನ ಬಳಿಕ ಕಳೆದ ಹತ್ತು ದಿನಗಳಿಂದ ಮುಂದುವರಿದಿದ್ದ ಮುಖ್ಯಮಂತ್ರಿ ಆಯ್ಕೆ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ಕೇರಳದ ನೂತನ ಮುಖ್ಯಮಂತ್ರಿಯಾಗಿ ಹಿರಿಯ ನಾಯಕ ಹಾಗೂ ಮಾಜಿ ಪ್ರತಿಪಕ್ಷ ನಾಯಕ ವಿ.ಡಿ. ಸತೀಶನ್ ಅವರನ್ನು ಆಯ್ಕೆ ಮಾಡಿದೆ. ಮೇ 4ರಂದು ಪ್ರಕಟವಾದ ಕೇರಳ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಭೂತಪೂರ್ವ ಗೆಲುವು ಸಾಧಿಸಿತ್ತು. ಆದರೆ ಮುಖ್ಯಮಂತ್ರಿ ಹುದ್ದೆಗಾಗಿ ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್…

Read More

ಯುಎಇಗೆ ಪ್ರಧಾನಿ ಮೋದಿ ಭೇಟಿ: ಇಂಧನ ಭದ್ರತೆ ಮೇಲೆ ಮಹತ್ವದ ಮಾತುಕತೆ

ನವದೆಹಲಿ: ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಜಾಗತಿಕ ತೈಲ ಮಾರುಕಟ್ಟೆಯ ಅಸ್ಥಿರತೆಯ ನಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಯುಎಇ ರಾಜಧಾನಿ ಅಬುಧಾಬಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೇದ್ ಅಲ್ ನಹ್ಯಾನ್ ಅವರೊಂದಿಗೆ ಇಂಧನ ಭದ್ರತೆ, ವ್ಯಾಪಾರ ಹಾಗೂ ಹೂಡಿಕೆ ಕುರಿತ ಮಹತ್ವದ ಮಾತುಕತೆ ನಡೆಯಲಿದೆ. ಭಾರತ ಮತ್ತು ಯುಎಇ ನಡುವೆ ಎಲ್‌ಪಿಜಿ ಪೂರೈಕೆ ಹಾಗೂ ತಂತ್ರಾತ್ಮಕ ಪೆಟ್ರೋಲಿಯಂ ಸಂಗ್ರಹಕ್ಕೆ ಸಂಬಂಧಿಸಿದ ಎರಡು ಪ್ರಮುಖ ಒಪ್ಪಂದಗಳಿಗೆ ಸಹಿ ಮಾಡುವ…

Read More

ವಿ.ಡಿ. ಸತೀಶನ್ vs ಕೆ.ಸಿ. ವೇಣುಗೋಪಾಲ್: ಅಂತಿಮ ಘಟ್ಟದಲ್ಲಿ ಸಿಎಂ ಪೈಪೋಟಿ

ಚರ್ಚೆಗಳಿಗೆ ಇಂದು ಅಂತ್ಯ ಸಿಗುವ ಸಾಧ್ಯತೆ ಇದೆ. ಗುರುವಾರ ತಿರುವನಂತಪುರಂನ ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೊಸ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಿಸಲಾಗಲಿದೆ. ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಈ ಮಹತ್ವದ ಸಭೆಯಲ್ಲಿ ಎಐಸಿಸಿ ರಾಜ್ಯ ಉಸ್ತುವಾರಿ ದೀಪಾ ದಾಸ್ ಮುನ್ಷಿ, ವೀಕ್ಷಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ.ಹಿರಿಯ ನಾಯಕರಾದ ವಿ.ಡಿ. ಸತೀಶನ್, ರಮೇಶ್ ಚೆನ್ನಿತ್ತಲ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್…

Read More

ಮಣಿಪಾಲ: ಭಗ್ನ ಪ್ರೇಮಿಯಿಂದ ಯುವತಿಗೆ ಚೂರಿ ಇರಿತ.ಶಾಂತಿನಗರ ಸಮೀಪದ ಮಹಿಳಾ ಪಿಜಿಯಲ್ಲಿ ಘಟನೆ

ಉಡುಪಿ: ಭಗ್ನ ಪ್ರೇಮಿಯಿಂದ ಯುವತಿಗೆ ಚೂರಿಯಿಂದ ಇರಿದ ಘಟನೆ ಮಣಿಪಾಲ- ಅಲೆವೂರು ರಸ್ತೆಯ ಶಾಂತಿನಗರ ಸಮೀಪದ ಐಡಿಯಲ್ ಬಿಲ್ಡಿಂಗ್ ನಲ್ಲಿರುವ ಮಹಿಳಾ ಪಿಜಿಯಲ್ಲಿ ನಡೆದಿದೆ.ಅಂಕೋಲ ಮೂಲದ ಯೋಗಿತಾ(23) ಮಾರಣಾಂತಿಕ ಹಲ್ಲೆಗೊಳಗಾದ ಯುವತಿ. ಈಕೆ ಮಣಿಪಾಲ- ಅಲೆವೂರು ರಸ್ತೆಯ ಶಾಂತಿನಗರ ಸಮೀಪದ ಐಡಿಯಲ್ ಬಿಲ್ಡಿಂಗ್ ನಲ್ಲಿರುವ ಮಹಿಳಾ ಪಿಜಿಯಲ್ಲಿ ವಾಸವಾಗಿದ್ದಳು. ಮಂಗಳವಾರ ರಾತ್ರಿ ಆಕೆಗೆ ಚೂರಿ ಇರಿಯಲಾಗಿದೆ. ಯುವತಿಯು ಪ್ರೀತಿ ನಿರಾಕರಿಸಿರುವುದಕ್ಕೆ ಭಗ್ನ ಪ್ರೇಮಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಗಂಭೀರ ಗಾಯಗೊಂಡಿರುವ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ,…

Read More
error: Content is protected !!