ಪ್ರಧಾನಿ ಅಧಿಕಾರ ತ್ಯಜಿಸಿದರೆ ಜನರಿಗೆ ಸುಖ ಸಿಗುತ್ತದೆ: ಬಿ.ರಮಾನಾಥ ರೈ
ಮಂಗಳೂರು:ಸಂಕಷ್ಟದ ಸಮಯದಲ್ಲಿ ದೇಶದ ಜನರು ತ್ಯಾಗ ಮಾಡಬೇಕು ಎಂದು ಹೇಳುವ ಕೇಂದ್ರ ಸರ್ಕಾರಕ್ಕೆ ಸಾಮಾನ್ಯ ಜನರ ನೋವು ಅರ್ಥವಾಗುತ್ತಿಲ್ಲ. ಜನರು ತ್ಯಾಗ ಮಾಡುವುದಕ್ಕಿಂತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ದೇಶದ ಜನರಿಗೆ ಸುಖ ಸಿಗುತ್ತದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ತೀವ್ರ ವಾಗ್ದಾಳಿ ನಡೆಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆರ್ಥಿಕ ಹಾಗೂ ಶೈಕ್ಷಣಿಕ ನೀತಿಗಳನ್ನು ತೀವ್ರವಾಗಿ ಟೀಕಿಸಿದರು. “ಅಚ್ಚೇ…
