ಆ.21ರಿಂದ ‘ಸಮಾಧಾನ ಸಮಾರೋಹ್-2026’ ವಿಶೇಷ ಲೋಕ ಅದಾಲತ್

ಮಂಗಳೂರು:ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ರಾಜಿ ಸಂಧಾನ ಮಾಡಿಕೊಳ್ಳಬಹುದಾದ ಪ್ರಕರಣಗಳನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿಯೇ ಇತ್ಯರ್ಥಪಡಿಸುವ ಉದ್ದೇಶದಿಂದ ಆ.21ರಿಂದ 23ರವರೆಗೆ ‘ಸಮಾಧಾನ ಸಮಾರೋಹ್-2026’ ಹೆಸರಿನಲ್ಲಿ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ತಿಳಿಸಿದ್ದಾರೆ. ಮಂಗಳವಾರ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ 43 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು. ಅಗತ್ಯವಿದ್ದರೆ…

Read More

ಕಾನ-ಜೋಕಟ್ಟೆ ರಸ್ತೆ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆ ಪ್ರತಿಭಟನೆ

ಸುರತ್ಕಲ್ :ಕಾನ -ತೋಕೂರು -ಜೋಕಟ್ಟೆ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕೂಡಲೇ ಕಾಮಗಾರಿ ನಡೆಸಿ ದುರಸ್ಥಿ ಮಾಡುವಂತೆ ಒತ್ತಾಯಿಸಿ ಇಂದು ಕಾನ ಜಂಕ್ಷನ್ ಬಳಿ ಡಿವೈಎಫ್ಐ ಕಾನ ಘಟಕ, ಆಟೋ ರಿಕ್ಷಾ ಚಾಲಕರ ಸಂಘ (ಸಿಐಟಿಯು) ನಾಗರಿಕ ಹೋರಾಟ ಸಮಿತಿ ಕಾನ ನೇತೃತ್ವದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್ ಮಾತನಾಡಿ ಎಂ.ಎಸ್.ಇ.ಝಡ್‌ ಮತ್ತು ಎಂ.ಆರ್.ಪಿ.ಎಲ್. ಕಂಪೆನಿಗಳು ನಿರ್ವಹಿಸಬೇಕಾದ ಮುಖ್ಯ ರಸ್ತೆ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಜನಪ್ರತಿನಿದಿನಗಳು ಕಂಪೆನಿಯವರ ಕಿವಿ…

Read More

ಕೋಳಿಮಾಂಸ ದರ ಏರಿಕೆಯಿಂದ ಗ್ರಾಹಕರಿಗೆ ಶಾಕ್: ಹೋಟೆಲ್ ದರವೂ ಗಗನಕ್ಕೇರಿ ಜನರ ಆಕ್ರೋಶ

ಕೇರಳ : ಕೋಳಿಮಾಂಸದ ಬೆಲೆ ಏರಿಕೆಯಿಂದ ಕೇರಳದಲ್ಲಿ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲ ತಿಂಗಳುಗಳ ಹಿಂದೆ ₹90ರಷ್ಟಿದ್ದ ಚಿಕನ್ ದರ ಇದೀಗ ₹180ರಿಂದ ₹185ಕ್ಕೆ ಏರಿಕೆಯಾಗಿ ಸಾಮಾನ್ಯ ಜನರಿಗೆ ಹೊರೆ ತಂದಿದೆ. ಮಾರುಕಟ್ಟೆಯಲ್ಲಿ ದರ ಏರಿಕೆಯಿಂದ ಹೋಟೆಲ್‌ಗಳಲ್ಲಿ ಚಿಕನ್ ಖಾದ್ಯಗಳ ಬೆಲೆಯೂ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೋಟೆಲ್‌ಗಳಿಗೆ ತೆರಳುವುದೇ ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಡುಗೆ ಅನಿಲದ ದರ ಏರಿಕೆ, ಕೋಳಿಮಾಂಸದ ಬೆಲೆ ಹೆಚ್ಚಳ ಸೇರಿದಂತೆ ವಿವಿಧ ಕಾರಣಗಳಿಂದ ಆಹಾರ ಪದಾರ್ಥಗಳ ದರ ಗಗನಕ್ಕೇರಿದೆ ಎಂದು ಹೋಟೆಲ್ ಮಾಲೀಕರು…

Read More

ಪಶ್ಚಿಮ ಏಷ್ಯಾದ ಉದ್ವಿಗ್ನತೆ ಮತ್ತಷ್ಟು ತೀವ್ರ.ಯುಎಇಯಿಂದ ಇರಾನ್ ಮೇಲೆ ರಹಸ್ಯ ಸೈನಿಕ ದಾಳಿ

ದುಬೈ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಳ್ಳುತ್ತಿರುವ ನಡುವೆಯೇ, ಯುನೈಟೆಡ್ ಅರಬ್ ಎಮಿರೇಟ್ಸ್‌ (ಯುಎಇ) ಇರಾನ್‌ ವಿರುದ್ಧ ರಹಸ್ಯ ಸೈನಿಕ ದಾಳಿ ನಡೆಸಿದೆ ಎಂಬ ಅಚ್ಚರಿಯ ಮಾಹಿತಿ ಬಹಿರಂಗವಾಗಿದೆ. ಈ ಮೂಲಕ ಇದುವರೆಗೆ ನೇರ ಮಿಲಿಟರಿ ಭಾಗವಹಿಸುವಿಕೆಯನ್ನು ನಿರಾಕರಿಸಿದ್ದ ಯುಎಇ, ಈಗ ಸಂಘರ್ಷದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದೆ ಎಂದು ಅಮೆರಿಕದ ಪ್ರತಿಷ್ಠಿತ ಮಾಧ್ಯಮ The Wall Street Journal ವರದಿ ಮಾಡಿದೆ.ವರದಿ ಪ್ರಕಾರ, ಏಪ್ರಿಲ್‌ ಆರಂಭದಲ್ಲಿ ಪರ್ಷಿಯನ್ ಕೊಲ್ಲಿಯಲ್ಲಿರುವ ಇರಾನ್‌ನ ಲಾವನ್ ದ್ವೀಪದ ತೈಲ ಸಂಸ್ಕರಣಾಗಾರವನ್ನು ಗುರಿಯಾಗಿಸಿಕೊಂಡು ಯುಎಇ…

Read More

NEET ಪರೀಕ್ಷೆ ರದ್ದು: 22.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರದ ಆಟ – ಸುಹಾನ್ ಆಳ್ವ ಆಕ್ರೋಶ

ಮೇ 3 ರಂದು ದೇಶಾದ್ಯಂತ ನಡೆದಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ (NEET-UG 2026) ಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರದ್ದುಗೊಳಿಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ NSUI ಅಧ್ಯಕ್ಷ ಸುಹಾನ್ ಆಳ್ವ ತೀವ್ರವಾಗಿ ಖಂಡಿಸಿದ್ದಾರೆ. ಈ ವರ್ಷ ಸುಮಾರು 22.5 ಲಕ್ಷ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸು ಹೊತ್ತು ಈ ಪರೀಕ್ಷೆಯನ್ನು ಬರೆದಿದ್ದರು. ಆದರೆ, ಪತ್ರಿಕೆ ಸೋರಿಕೆಯಂತಹ ಗಂಭೀರ ಲೋಪದೋಷಗಳಿಂದಾಗಿ ಇಡೀ ಪರೀಕ್ಷಾ ವ್ಯವಸ್ಥೆಯೇ ಕುಸಿದುಬಿದ್ದಿದೆ. ಕೇಂದ್ರ ಸರ್ಕಾರದ ಈ ವೈಫಲ್ಯವು ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳನ್ನು…

Read More

ಕೇರಳ ಸಿಎಂ ಆಯ್ಕೆ ಕುತೂಹಲಕ್ಕೆ ಅಂತಿಮ ತೆರೆ? ಕೆ.ಸಿ. ವೇಣುಗೋಪಾಲ್ ಹೆಸರು ಮುಂಚೂಣಿಯಲ್ಲಿ

ತಿರುವನಂತಪುರಂ: 2026ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಭರ್ಜರಿ ಜಯ ಸಾಧಿಸಿ ಅಧಿಕಾರಕ್ಕೆ ಮರಳಿದ ಬಳಿಕ ಮುಖ್ಯಮಂತ್ರಿ ಆಯ್ಕೆ ಕುರಿತ ಕುತೂಹಲಕ್ಕೆ ಇದೀಗ ಅಂತಿಮ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಚುನಾವಣಾ ಫಲಿತಾಂಶ ಪ್ರಕಟವಾಗಿ ಒಂದು ವಾರಕ್ಕೂ ಹೆಚ್ಚು ಕಾಲ ಕಳೆದಿದ್ದರೂ ಮುಖ್ಯಮಂತ್ರಿ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಿಸಿರಲಿಲ್ಲ. ಇದರಿಂದ ರಾಜ್ಯ ರಾಜಕೀಯದಲ್ಲಿ ಹಲವು ಊಹಾಪೋಹಗಳು ಹರಿದಾಡುತ್ತಿದ್ದವು. ಈ ಹಿನ್ನೆಲೆ ಇಂದು ದೆಹಲಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಕಾಂಗ್ರೆಸ್‌ನ…

Read More

ಮಣ್ಣಿನ ಮಗನ ಬೆವರು ಮತ್ತು ನಗರದ ‘ಬೈ-ಬೈ’ ಸಂಸ್ಕೃತಿ: ಒಂದು ಕಟು ವಾಸ್ತವ

​ದೂರದ ಕಾಂಕ್ರೀಟ್ ಕಾಡಿನಿಂದ, ಎಸಿ ಕಾರುಗಳ ಸದ್ದಿನ ನಡುವೆ ಬರುವ ಪಟ್ಟಣದ ಮಂದಿಗೆ ಹಳ್ಳಿ ಎಂಬುದು ಕೇವಲ ಒಂದು ವಾರಾಂತ್ಯದ ಆಕರ್ಷಕ ತಾಣ. ನಗರದ ಉಸಿರುಗಟ್ಟಿಸುವ ವಾತಾವರಣ, ಯಾಂತ್ರಿಕ ಬದುಕಿನ ಜಂಜಾಟದಿಂದ ಬೇಸತ್ತವರಿಗೆ ಹಳ್ಳಿಯ ಹಸಿರು ಹೊದಿಕೆ ಮತ್ತು ಶುದ್ಧ ಗಾಳಿ ಒಂದು ‘ಲಕ್ಸುರಿ’. ಬೇಸಿಗೆಯ ರಜೆ ಆರಂಭವಾಯಿತೆಂದರೆ ಸಾಕು, ಮೆಟ್ರೋಪಾಲಿಟನ್ ಮಂದಿ ತಮ್ಮ ಮಕ್ಕಳನ್ನು ಕರೆದುಕೊಂಡು ತಮ್ಮ ಮೂಲವನ್ನರಸಿ ಹಳ್ಳಿಯತ್ತ ಹೆಜ್ಜೆ ಹಾಕುತ್ತಾರೆ. ಅಲ್ಲಿನ ಹೊಸ ತಲೆಮಾರಿನ ಮಕ್ಕಳಿಗೆ ಮಣ್ಣಿನ ಸೊಗಡು ಆಪ್ತವಾಗುತ್ತದೆ. ಆದರೆ, ಈ…

Read More

ಕಬ್ಬೂರು ಗ್ರಾಮದಲ್ಲಿ ಕ್ಷುಲ್ಲಕ ವಿಚಾರಕ್ಕೆ ಭೀಕರ ಕೊಲೆ.ಕಲ್ಲಿನಿಂದ ಜಜ್ಜಿ ವ್ಯಕ್ತಿ ಹತ್ಯೆ; ಆರೋಪಿ ಪೊಲೀಸರಿಗೆ ಶರಣು

ಹಾವೇರಿ, ಮೇ 12: ಜಿಲ್ಲೆಯ ಕಬ್ಬೂರು ಗ್ರಾಮದಲ್ಲಿ ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದ್ದು, ವ್ಯಕ್ತಿಯೊಬ್ಬರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.ನಿಂಗಪ್ಪ ಚನ್ನಬಸಪ್ಪ ಕರಿಗಾರ್ (40) ಕೊಲೆಯಾದ ವ್ಯಕ್ತಿಯಾಗಿದ್ದು, ಶಿವು ನಿಂಗಪ್ಪ ಪಟ್ಟೇದ ಎಂಬಾತನನ್ನು ಪ್ರಕರಣದ ಆರೋಪಿ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮೃತ ನಿಂಗಪ್ಪ ಹಾಗೂ ಆರೋಪಿ ಶಿವು ಮನೆಗಳು ಅಕ್ಕಪಕ್ಕದಲ್ಲಿದ್ದು, ಇಬ್ಬರಿಗೂ ಮದ್ಯಪಾನದ ಚಟವಿತ್ತು ಎನ್ನಲಾಗಿದೆ. ಹಳೆಯ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.ಸುಮಾರು ಒಂದು ತಿಂಗಳ…

Read More

ದಕ್ಷಿಣ ಕನ್ನಡ ಸೇರಿ ಕರಾವಳಿಯಲ್ಲಿ ನಾಲ್ಕು ದಿನ ಭಾರೀ ಮಳೆ ಸಾಧ್ಯತೆಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಣೆ; ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸೂಚನೆ

ಮಂಗಳೂರು, ಮೇ 12: ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ. ಕರಾವಳಿ ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶದ ನಿವಾಸಿಗಳು,…

Read More

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸತತ 2ನೇ ಬಾರಿಗೆ ಅಧಿಕಾರ ಸ್ವೀಕಾರ; ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿ ಹಲವು ಗಣ್ಯರ ಉಪಸ್ಥಿತಿ

ದಿಸ್ಪುರ, ಮೇ 12: Himanta Biswa Sharma ಅವರು ಇಂದು ಅಸ್ಸಾಂ ರಾಜ್ಯದ ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದರು. ಖಾನಾಪಾರಾದ ವೆಟರಿನರಿ ಕಾಲೇಜು ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ Lakshman Prasad Acharya ಅವರು ಹಿಮಂತ ಬಿಸ್ವಾ ಶರ್ಮ ಅವರಿಗೆ ಹುದ್ದೆ ಮತ್ತು ಗೌಪ್ಯತಾ ಪ್ರಮಾಣವಚನ ಬೋಧಿಸಿದರು. ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ Narendra Modi, ಕೇಂದ್ರ ಗೃಹ ಸಚಿವ Amit Shah, ರಕ್ಷಣಾ ಸಚಿವ Rajnath Singh, ಕೇಂದ್ರ ಸಚಿವ Nitin Gadkari,…

Read More
error: Content is protected !!