ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಂದ ಮಹತ್ವದ ಆದೇಶ

ತಮಿಳುನಾಡಿನ ಮುಖ್ಯಮಂತ್ರಿ Joseph Vijay ನೇತೃತ್ವದ ಸರ್ಕಾರ ಕೈಗೊಂಡಿರುವ 717 TASMAC ಮದ್ಯದಂಗಡಿಗಳನ್ನು ಮುಚ್ಚುವ ನಿರ್ಧಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ದೇವಸ್ಥಾನಗಳು, ಶಾಲೆಗಳು ಹಾಗೂ ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯೊಳಗಿನ ಮದ್ಯದಂಗಡಿಗಳನ್ನು ಬಂದ್ ಮಾಡುವ ಮೂಲಕ “ವ್ಯಸನಮುಕ್ತ ತಮಿಳುನಾಡು” ನಿರ್ಮಾಣದ ಸಂದೇಶವನ್ನು ಸರ್ಕಾರ ನೀಡಲು ಮುಂದಾಗಿದೆ. ಮಹಿಳಾ ಸಂಘಟನೆಗಳು ಹಾಗೂ ವಿವಿಧ ಸಾಮಾಜಿಕ ಕಾರ್ಯಕರ್ತರು ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದು, ಸಾರ್ವಜನಿಕ ವಲಯದಲ್ಲಿ ಮದ್ಯದ ಪ್ರಭಾವ ಕಡಿಮೆ ಮಾಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆ…

Read More

“ಜಲ ಕಂಟಕ” ಎಚ್ಚರಿಕೆ: ಮತ್ತೆ ಚರ್ಚೆಗೆ ಗ್ರಾಸವಾದ ಕೋಡಿ ಮಠದ ಶ್ರೀಗಳ ಭವಿಷ್ಯವಾಣಿ

ಬೆಂಗಳೂರು, ಮೇ 12: ಭವಿಷ್ಯವಾಣಿಗಳು ಹಾಗೂ ಅಪಶಕುನ ನುಡಿಗಳ ಮೂಲಕ ಸಾಕಷ್ಟು ಚರ್ಚೆಗೆ ಗ್ರಾಸವಾಗುವ ಕೋಡಿ ಮಠದ ಶ್ರೀಗಳು ಮತ್ತೆ ತಮ್ಮ ಹೇಳಿಕೆಗಳ ಮೂಲಕ ಗಮನ ಸೆಳೆದಿದ್ದಾರೆ. ಮಳೆಗಾಲ ಆರಂಭಕ್ಕೂ ಮುನ್ನವೇ ಅವರು ನೀಡಿರುವ ಹೊಸ ಭವಿಷ್ಯ ನುಡಿಗಳು ಸಾಮಾಜಿಕ ಜಾಲತಾಣಗಳು ಹಾಗೂ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿವೆ. ಈ ಬಾರಿ “ಮಳೆ ಬಂದರೂ ಕಷ್ಟ, ಬರದಿದ್ದರೂ ನಷ್ಟ” ಎಂಬ ತಮ್ಮ ಹಿಂದಿನ ಹೇಳಿಕೆಗಳಿಗೆ ‘ಜಲ ಕಂಟಕ’ ಎಂಬ ಹೊಸ ಪದವನ್ನು ಸೇರಿಸಿರುವುದು ವಿಶೇಷ ಗಮನ…

Read More

ಭಾವಿ ಪತಿಯ ಸಮಾಧಿ ಪಕ್ಕದಲ್ಲೇ ಯುವತಿಯ ಅಂತ್ಯಕ್ರಿಯೆ:ಸಾವಿನಲ್ಲೂ ಒಂದಾದ ಪ್ರೇಮಿಗಳು; ಅಂತಿಮ ಆಸೆ ಈಡೇರಿಸಿದ ಕುಟುಂಬ

​ಮಂಜೇಶ್ವರ: ಅಪಘಾತದಲ್ಲಿ ಮೃತಪಟ್ಟ ತನ್ನ ಭಾವಿ ಪತಿಯ ಪಕ್ಕದಲ್ಲೇ ತನ್ನನ್ನೂ ಹೂಳಬೇಕೆಂಬ ಯುವತಿಯ ಅಂತಿಮ ಬಯಕೆಯನ್ನು ಕುಟುಂಬಸ್ಥರು ಈಡೇರಿಸಿದ್ದಾರೆ. ತಮಿಳುನಾಡಿನ ತಿರುನಲ್ವೇಲಿಯಲ್ಲಿ ಮೃತ ಯುವಕ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರತಿಶ್ರುತ ವಧು ಪ್ರಫುಲ್ಲಾ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಈ ಪ್ರೇಮಿಗಳು ಸಾವಿನಲ್ಲೂ ಒಂದಾಗಿದ್ದಾರೆ. ​ಮಂಜೇಶ್ವರದ ಕಿದೂರು ಕುಂಡಂಗೇರಡುಕ ನಿವಾಸಿ ಜಯಾನಂದ ಅವರ ಪುತ್ರಿ ಪ್ರಫುಲ್ಲಾ (26), ಕಳೆದ ಭಾನುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಬ್ಯಾಂಕ್ ಉದ್ಯೋಗಿಯಾಗಿದ್ದ ತಮಿಳುನಾಡು ಮೂಲದ ಮಣಿ ಮತ್ತು ಪ್ರಫುಲ್ಲಾ ಅವರ…

Read More

ಭಾವಿ ಪತಿಯ ಸಮಾಧಿ ಪಕ್ಕದಲ್ಲೇ ಯುವತಿಯ ಅಂತ್ಯಕ್ರಿಯೆ: ಸಾವಿನಲ್ಲೂ ಒಂದಾದ ಪ್ರೇಮಿಗಳು; ಅಂತಿಮ ಆಸೆ ಈಡೇರಿಸಿದ ಕುಟುಂಬ

​ಮಂಜೇಶ್ವರ: ಅಪಘಾತದಲ್ಲಿ ಮೃತಪಟ್ಟ ತನ್ನ ಭಾವಿ ಪತಿಯ ಪಕ್ಕದಲ್ಲೇ ತನ್ನನ್ನೂ ಹೂಳಬೇಕೆಂಬ ಯುವತಿಯ ಅಂತಿಮ ಬಯಕೆಯನ್ನು ಕುಟುಂಬಸ್ಥರು ಈಡೇರಿಸಿದ್ದಾರೆ. ತಮಿಳುನಾಡಿನ ತಿರುನಲ್ವೇಲಿಯಲ್ಲಿ ಮೃತ ಯುವಕ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರತಿಶ್ರುತ ವಧು ಪ್ರಫುಲ್ಲಾ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಈ ಪ್ರೇಮಿಗಳು ಸಾವಿನಲ್ಲೂ ಒಂದಾಗಿದ್ದಾರೆ. ​ಮಂಜೇಶ್ವರದ ಕಿದೂರು ಕುಂಡಂಗೇರಡುಕ ನಿವಾಸಿ ಜಯಾನಂದ ಅವರ ಪುತ್ರಿ ಪ್ರಫುಲ್ಲಾ (26), ಕಳೆದ ಭಾನುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಬ್ಯಾಂಕ್ ಉದ್ಯೋಗಿಯಾಗಿದ್ದ ತಮಿಳುನಾಡು ಮೂಲದ ಮಣಿ ಮತ್ತು ಪ್ರಫುಲ್ಲಾ ಅವರ…

Read More

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಎಚ್.ಎಂ. ಪೆರ್ನಾಲ್‌ಗೆ ಮೇ 15ರಂದು ಮಂಗಳೂರಿನಲ್ಲಿ ಅದ್ದೂರಿ ಸನ್ಮಾನ

ಮಂಗಳೂರು: 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ಮೇ 15ರಂದು ಸಂಜೆ 5:45ಕ್ಕೆ ನಗರದ ಟೌನ್ ಹಾಲ್‌ನಲ್ಲಿ ಅದ್ದೂರಿ ಸಮಾರಂಭ ಆಯೋಜಿಸಲಾಗಿದೆ ಎಂದು ಅಭಿನಂದನಾ ಸಮಿತಿಯ ಸಂಚಾಲಕ ಮೆಲ್ವಿನ್ ರೋಡ್ರಿಗಸ್ ತಿಳಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್.ಎಂ. ಪೆರ್ನಾಲ್ ಅವರ ಸಾಹಿತ್ಯ ವಿಮರ್ಶೆ ಕೃತಿ ‘ಕೊಂಕಣಿ ಕಾವ್ಯಂ: ರೂಪಾಂ ಅನಿ ರೂಪಕಾಂ’ಗೆ…

Read More

ಮಂಗಳೂರಿನಲ್ಲಿ ಮೇ 15–16ರಂದು ICAI ರಾಷ್ಟ್ರೀಯ ಸಮ್ಮೇಳನ

ಮಂಗಳೂರು: ಭಾರತೀಯ ಚಾರ್ಟಡ್ ಅಕೌಂಟೆಂಟ್ಸ್ ಸಂಸ್ಥೆ (ICAI) ಮಂಗಳೂರು ಶಾಖೆಯ ವತಿಯಿಂದ ಚಾರ್ಟಡ್ ಅಕೌಂಟೆಂಟ್ ಸದಸ್ಯರಿಗಾಗಿ ‘ಅಧಿಗಮ – ಜ್ಞಾನ ಬಲವರ್ಧನೆ’ ಶೀರ್ಷಿಕೆಯಡಿ ರಾಷ್ಟ್ರೀಯ ಸಮ್ಮೇಳನವನ್ನು ಮೇ 15 ಮತ್ತು 16ರಂದು ನಗರದ ಪಾಲೆಮಾರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಗಿದೆ ಎಂದು ಶಾಖೆಯ ಅಧ್ಯಕ್ಷ ಸಿಎ ಡ್ಯಾನಿಯಲ್ ಮಾರ್ಷ್ ಪೆರಿಯರಾ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿವಿಧ ಭಾಗಗಳಿಂದ ಸುಮಾರು 500ಕ್ಕೂ ಅಧಿಕ ಚಾರ್ಟಡ್ ಅಕೌಂಟೆಂಟ್‌ಗಳು ಹಾಗೂ ವೃತ್ತಿಪರರು ಸಮ್ಮೇಳನದಲ್ಲಿ ಭಾಗವಹಿಸುವ…

Read More

ಬೆದ್ರಂಪಳ್ಳ ಬನ ಪಾಟ್ಲದಳ ರಸ್ತೆ ಅಭಿವೃದ್ಧಿಯಲ್ಲಿ ಕಳಪೆ ಕಾಮಗಾರಿ : ನಾಗರಿಕರಿಂದ ತಡೆ

ಪೆರ್ಲ : ಎಣ್ಮಕಜೆ ಪಂಚಾಯತಿನ 16ನೇ ವಾರ್ಡಿನ ಬೆದ್ರಂಪಳ್ಳ ಬನ -ಬಲ್ತಕಲ್ಲು- ಪಾಟ್ಲದಳ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿ ಕಳಪೆ ಮಟ್ಟದ್ದಾಗಿದ್ದು ಗುತ್ತಿಗೆದಾರನ ಅವ್ಯವಹಾರ ಆರೋಪಿಸಿ ನಾಗರಿಕರು ಕಾಮಗಾರಿಗೆ ತಡೆಯೊಡ್ಡಿದರು. ಮಂಜೇಶ್ವರ ಶಾಸಕ ಎಕೆಎಂ ಆಶ್ರಫ್ 2023-24 ರರಾಜ್ಯ ಸರಕಾರದ ಬಜೆಟ್ ನಲ್ಲಿ ಸುಮಾರು 70 ಲಕ್ಷ ರೂ ಯೋಜನೆ ಮೀಸಲಿರಿಸಿ ಉತ್ತಮ ರಸ್ತೆ ನಿರ್ಮಾಣಕ್ಕೆ ಹಸೈನಾರ್ ಪೆರ್ಲ ಎಂಬವರ ಮಾಲಕತ್ವದ ಕಂಪೆನಿಯೊಂದಕ್ಕೆ ಗುತ್ತಿಗೆ ನೀಡಲಾಗಿತ್ತು. ಇದೀಗ ಕಳಪೆ ಮಟ್ಟದ ಡಾಮರು, ಜಲ್ಲಿ ಕಲ್ಲುಗಳನ್ನು ಉಪಯೋಗಿಸಿ ಯೋಜನೆಯಲ್ಲಿ…

Read More

ಮಂಗಳೂರು: “ಅಪೆಕ್ಸ್ ರನ್ 2026” ಯಶಸ್ವಿ: 1500ಕ್ಕೂ ಅಧಿಕ ಓಟಗಾರರ ಭಾಗಿ

ಮಂಗಳೂರು: ಮಿಲಾಗ್ರಿಸ್ ಕಾಲೇಜು, ICYM Mangalore Diocese ಹಾಗೂ Mangalore Runners Club ಸಹಯೋಗದಲ್ಲಿ “ಅಪೆಕ್ಸ್ ರನ್ 2026” ನಗರ ಮಟ್ಟದ ಮ್ಯಾರಥಾನ್ ಭಾನುವಾರ ಕಾಲೇಜು ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಬೆಳಗ್ಗೆ 5:30ಕ್ಕೆ ಆರಂಭವಾದ ಓಟಕ್ಕೆ ಮಿಲಾಗ್ರಿಸ್ ಸಮೂಹ ಸಂಸ್ಥೆಗಳ ಸಂಚಾಲಕರಾದ ರೆ. ಫಾ. ಬೊನವೆಂಜರ್ ನಜರತ್, ರೆ. ಫಾ. ಮ್ಯಾಕ್ಸಿಮ್ ಮೋಂತೆರೋ ಹಾಗೂ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಲ್ವಿನ್ ಸೆರಾವೋ ಚಾಲನೆ ನೀಡಿದರು. ದೈಹಿಕ ಕ್ಷಮತೆ, ಆರೋಗ್ಯ ಜಾಗೃತಿ ಮತ್ತು ಸಮುದಾಯದ ಒಗ್ಗಟ್ಟನ್ನು…

Read More

ಬಂಟರ ಯಾನೆ ನಾಡವರ ಮಾತೃ ಸಂಘ : 2026 -29 ರ ಸಾಲಿನ ಪದಾಧಿಕಾರಿಗಳ ಅವಿರೋಧ ಆಯ್ಕೆ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ 2026 -29 ಸಾಲಿನ ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು, ಉಪಾಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಎಮ್ ಕರುಣಾಕರ ಶೆಟ್ಟಿ, ಕೋಶಾಧಿಕಾರಿಯಾಗಿ ಸಿಎ ರಾಮ್ ಮೋಹನ್ ರೈ ಹಾಗೂ ಜೊತೆ ಕಾರ್ಯದರ್ಶಿಯಾಗಿ ಪುಂಚಮೆ ಪದ್ಮನಾಭ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು ಸೇರಿ 83 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ಚುನಾವಣಾ ಆಯೋಗ ಅಧಿಕೃತವಾಗಿ ಘೋಷಿಸಿದೆ. ಮುಖ್ಯ ಚುನಾವಣಾಧಿಕಾರಿಯಾಗಿದ್ದ ವಕೀಲರಾದ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ…

Read More

ಕರ್ನಾಟಕ ರಾಜ್ಯ ಎಫ್‌ಐಪಿ 8ನೇ ಪಾಲುದಾರರ ಸಭೆ

ಉಡುಪಿ: ಕರ್ನಾಟಕ ರಾಜ್ಯ ಮೀನುಗಾರಿಕೆ ಸುಧಾರಣಾ ಯೋಜನೆ (ಎಫ್‌ಐಪಿ) ಅಡಿಯಲ್ಲಿ ಸ್ಮಾಲ್ ಪೆಲಾಜಿಕ್ ಪರ್ಸ್‌ಸೈನ್ ಮೀನುಗಾರಿಕೆ ಯೋಜನೆಯ 8ನೇ ಪಾಲುದಾರರ ಸಭೆ ಎರ್ಮಾಳಿನ ಪೆನಿನ್ಸುಲಾ ಡೆಲ್ ಮಾರ್ ಬೀಚ್ ರೆಸಾರ್ಟ್‌ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಅವಂತಿ ಫೀಡ್ಸ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಅಲ್ಲೂರಿ ಇಂದ್ರಕುಮಾರ್ ವಹಿಸಿದ್ದರು. ಸಭೆಯಲ್ಲಿ ಸುಸ್ಥಿರ ಹಾಗೂ ಜವಾಬ್ದಾರಿಯುತ ಮೀನುಗಾರಿಕೆ ಪದ್ಧತಿಗಳು, ಸಮುದ್ರ ಆಹಾರದ ಪತ್ತೆಹಚ್ಚುವಿಕೆ ವ್ಯವಸ್ಥೆ ಹಾಗೂ ಭಾರತದ ಸಮುದ್ರ ಆಹಾರ ಸರಬರಾಜು ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚಿಸಲಾಯಿತು….

Read More
error: Content is protected !!