ಕರ್ನಾಟಕ ರಾಜ್ಯ ಎಫ್‌ಐಪಿ 8ನೇ ಪಾಲುದಾರರ ಸಭೆ
ಉಡುಪಿ: ಕರ್ನಾಟಕ ರಾಜ್ಯ ಮೀನುಗಾರಿಕೆ ಸುಧಾರಣಾ ಯೋಜನೆ (ಎಫ್‌ಐಪಿ) ಅಡಿಯಲ್ಲಿ ಸ್ಮಾಲ್ ಪೆಲಾಜಿಕ್ ಪರ್ಸ್‌ಸೈನ್ ಮೀನುಗಾರಿಕೆ ಯೋಜನೆಯ 8ನೇ ಪಾಲುದಾರರ ಸಭೆ ಎರ್ಮಾಳಿನ ಪೆನಿನ್ಸುಲಾ ಡೆಲ್ ಮಾರ್ ಬೀಚ್ ರೆಸಾರ್ಟ್‌ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಅವಂತಿ ಫೀಡ್ಸ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಅಲ್ಲೂರಿ ಇಂದ್ರಕುಮಾರ್ ವಹಿಸಿದ್ದರು. ಸಭೆಯಲ್ಲಿ ಸುಸ್ಥಿರ ಹಾಗೂ ಜವಾಬ್ದಾರಿಯುತ ಮೀನುಗಾರಿಕೆ ಪದ್ಧತಿಗಳು, ಸಮುದ್ರ ಆಹಾರದ ಪತ್ತೆಹಚ್ಚುವಿಕೆ ವ್ಯವಸ್ಥೆ ಹಾಗೂ ಭಾರತದ ಸಮುದ್ರ ಆಹಾರ ಸರಬರಾಜು ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚಿಸಲಾಯಿತು….
