‘ಭಾರತೀಯ ರೆಡ್ ಕ್ರಾಸ್ ಸೊಸೈಟಿ ಶತಮಾನೋತ್ಸವ ಕಟ್ಟಡ’ದ ಉಧ್ಘಾಟನೆ: ಜು.26ರಂದು
ಮಂಗಳೂರು :ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ‘ಭಾರತೀಯ ರೆಡ್ ಕ್ರಾಸ್ ಸೊಸೈಟಿ ಶತಮಾನೋತ್ಸವ ಕಟ್ಟಡ’ದ ಉದ್ಘಾಟನಾ ಸಮಾರಂಭ ಜು.26ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ ಎಂದು ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ತಿಳಿಸಿದರು . ಅವರು ಮಂಗಳೂರಿನ ಪಾಂಡೇಶ್ವರದಲ್ಲಿರುವ ರೆಡ್ ಕ್ರಾಸ್ ಪ್ರೇರಣ ಹಾಲ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, . ಕರ್ನಾಟಕದ…