ಕೇರಳ ಸಿಎಂ ಆಯ್ಕೆ ಕುತೂಹಲ: ಯುಡಿಎಫ್ ಭರ್ಜರಿ ಗೆಲುವಿನ ಬಳಿಕವೂ ಕಾಂಗ್ರೆಸ್‌ನಲ್ಲಿ ಮುಂದುವರಿದ ಸಸ್ಪೆನ್ಸ್
ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಯುಡಿಎಫ್ ಅಧಿಕಾರಕ್ಕೇರಿದರೂ, ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕುರಿತ ಕಾಂಗ್ರೆಸ್‌ನ ಅಂತಿಮ ನಿರ್ಧಾರ ಇನ್ನೂ ಪ್ರಕಟವಾಗದೆ ರಾಜಕೀಯ ವಲಯದಲ್ಲಿ ಕುತೂಹಲ ಮುಂದುವರಿದಿದೆ. ಫಲಿತಾಂಶ ಪ್ರಕಟವಾಗಿ ಒಂದು ವಾರ ಕಳೆದರೂ ಸಿಎಂ ಘೋಷಣೆಯಲ್ಲಿ ಆಗುತ್ತಿರುವ ವಿಳಂಬ ಹಲವು ಚರ್ಚೆಗಳಿಗೆ ಕಾರಣವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶೀಘ್ರದಲ್ಲೇ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸಿಎಂ…
