ನಂಬಿ ಕೆಡಬೇಡಿ …. ನಂಬಿ ಮೂರ್ಖನಾಗಬೇಡಿ….!

ಮೋಸ ಹೋಗುವ ಮನಸಿನವರು ಪ್ರತಿ ಬಾರಿ ಮೋಸ ಹೋಗ್ತಾನೇ ಇರುತ್ತಾರೆ. ಅದು ತಿಳಿಯದೆ, ಅರಿಯದೆ, ಎಂಬುದಕ್ಕಿಂದ ಅತಿಯಾದ ವಿಶ್ವಾಸದಿಂದಲೇ ಆಗಿರುತ್ತದೆ. ಅದು ಅರಿವಿಗೆ ಬಂದಾಗ ಮನಸ್ಸಿಗೆ ತೀವ್ರ ಘಾಸಿಯಾಗುತ್ತದೆ. ಅದು ಕನಸಿನ ಕೋರಿಕೆಗೆ, ಮನಸ್ಸಿನ ಬೇಡಿಕೆಗೆ, ತನುವಿನ ಉಲ್ಲಾಸಕ್ಕೆ ತಣ್ಣೀರು ಎರಚುವುದಂತೂ ಖಂಡಿತಾ. ಕೆಲವು ಸಾರಿ ಅರಿಯದೆ, ಯಾರನ್ನೋ ಅರಿತುಕೊಳ್ಳಬೇಕೆನ್ನುವ ಮಹದಾಸೆಯಿಂದ ಗೆಳೆತನ ಮಾಡಿಬಿಡುತ್ತೇವೆ. ಆದರೆ ಮುಂದೆ ಗೊತ್ತಾಗುವಾಗ ತಡವಾಗುತ್ತದೆ, ಆ ಪರಿಚಯವೇ ಬಾಳಿಗೆ ಮುಳುವಾಗಿರುತ್ತದೆ. ಪ್ರತಿ ಬಾರಿಯೂ ಹಾಗೆಂದಲ್ಲ, ಆದರೆ ಅನೇಕರಿಗೆ ಇದರ ಅನುಭವ ಆಗಿಯೇ…

Read More

ಯಕ್ಷಗಾನ ರಂಗದ ಶ್ರೇಷ್ಠ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಕುಂದಾಪುರ: ಯಕ್ಷಗಾನ ರಂಗದ ಶ್ರೇಷ್ಠ ಸಾಧಕ, ಪ್ರಸಂಗಕರ್ತ, ಖ್ಯಾತ ಶಿಕ್ಷಕ ಕಂದಾವರ ರಘುರಾಮ ಶೆಟ್ಟಿ (89) ಬುಧವಾರ ಬೆಳಗ್ಗೆ (ನ.26) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ, ನಾಟಕ ಕಲಾವಿದರಾಗಿ ರಘುರಾಮ ಶೆಟ್ಟಿ ಯಕ್ಷಗಾನ ವಲಯದಲ್ಲಿ ಕಂದಾವರದವರು ಎಂಬ ಹೆಸರಿನಿಂದಲೇ ಪ್ರಸಿದ್ಧರಾಗಿದ್ದರು.ಕಂದಾವರ ರಘುರಾಮ ಶೆಟ್ಟಿಯವರು ದಕ್ಷಿಣ ಕನ್ನಡದ ಕುಂದಾಪುರ ತಾಲೂಕಿನ ಬಳ್ಳೂರು ಗ್ರಾಮದ…

Read More

ಅನಾಮಿಕ ಮಹಿಳೆಯೋರ್ವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ…. !

ಬಂಟ್ವಾಳ: ಅನಾಮಿಕ ಮಹಿಳೆಯೋರ್ವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿ ಹಾಕಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್. ಐ.ಸಂದೀಪ್ ಶೆಟ್ಟಿ ತಿಳಿಸಿದ್ದಾರೆ. ಸುಮಾರು (60) ವರ್ಷ ವಯಸ್ಸಿನ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಅಂದಾಜು ಪ್ರಕಾರ ಇಂದು ಬೆಳಿಗ್ಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ.ಅಪರಿಚಿತ ಮಹಿಳೆಯ ಮೃತದೇಹದ ಪತ್ತೆಗಾಗಿ ಬಂಟ್ವಾಳ ಪೋಲೀಸರು ತಿಳಿಸಿದ್ದು, ಮಹಿಳೆಯ ಸಂಬಂಧಿಕರು ಬಂಟ್ವಾಳ ನಗರ ಪೋಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.

Read More

ಸ್ಕೂಟರಿನ ಚಕ್ರಕ್ಕೆ ಸೀರೆ ಸಿಲುಕಿ ಮಹಿಳೆ ಸ್ಕೂಟರಿನಿಂದ ಬಿದ್ದು ಗಂಭೀರ ಗಾಯ

ಮಂಗಳೂರು : ಸ್ಕೂಟರಿನ ಚಕ್ರಕ್ಕೆ ಸೀರೆ ಸಿಲುಕಿ ಮಹಿಳೆ ಸ್ಕೂಟರಿನಿಂದ ಬಿದ್ದು ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ಬಳಿ ಸಂಭವಿಸಿದೆ. ಮಂಗಳೂರು ಹೊರವಲಯದ ಸುರತ್ಕಲ್ ಕಾನಾ ಬಳಿ ಈ ಘಟನೆ ನಡೆದಿದೆ. ಸ್ಕೂಟರಿನಿಂದ ಮಹಿಳೆ ಬೀಳುವ ದೃಶ್ಯ ಹಿಂದೆ ಇದ್ದ ಬಸ್ಸಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಬಸ್ಸನ್ನು ನಿಲ್ಲಿಸಿ ಸ್ಕೂಟರಿನಿಂದ ಬಿದ್ದ ಮಹಿಳೆಯನ್ನ ಬಸ್ ಚಾಲಕ ಆಸ್ಪತ್ರೆಗೆ ಕೊಂಡೊಯ್ದರು.ಮೊಯಿದೆ ಎಂಬವರು ಮಾನವೀಯತೆ ಮೆರೆದ ಬಸ್ಸಿನ ಚಾಲಕ.ಕಾನಾ ಬಳಿ ಮಗ ಮತ್ತು ಅಮ್ಮ ಸ್ಕೂಟರಿನಲ್ಲಿ ಹೋಗುವ ಸಂದರ್ಭ ಈ ಘಟನೆ…

Read More

ರೋಲ್ಡ್ ಗೋಲ್ಡ್ ಗ್ಯಾಂಗ್ ಅಂಧರ್ …. !

ಮಂಗಳೂರು :ತೊಕ್ಕೊಟ್ಟಿನ ಫೈನಾನ್ಸ್ ಒಂದರಲ್ಲಿ 916 ಹಾಲ್ ಮಾರ್ಕ್ ಇರುವ ಅಸಲಿ ಚಿನ್ನವನ್ನೇ ಹೋಲುವ ನಕಲಿ ಆಭರಣಗಳನ್ನ ಅಡವಿರಿಸಿ ಲಕ್ಷಾಂತರ ರೂಪಾಯಿ ವಂಚನೆಗೈದಿರುವ ಗ್ಯಾಂಗ್ ನ ಆರು ಮಂದಿ ಆರೋಪಿಗಳನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಓರ್ವ ತಲೆಮರೆಸಿಕೊಂಡಿದ್ದಾನೆ. ಮಹಾರಾಷ್ಟ್ರ ಮೂಲದ ವಿಕ್ರಮ್, ಹರೇಕಳದ ಇಸ್ಮಾಯಿಲ್ ಮತ್ತು ಮಿಸ್ಟಾ ಸುರತ್ಕಲ್ ಕಾಟಿಪಳ್ಳದ ಉಮರ್ ಫಾರೂಕ್, ಉಳ್ಳಾಲ ಮೇಲಂಗಡಿಯ ಇಮ್ಮಿಯಾಝ್, ಮಂಚಿಲದ ಝಹೀಮ್ ಅಹ್ಮದ್ ರನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದು, ಹೆಜಮಾಡಿಯ ನೌಫಾಲ್ ಎಂಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ತೊಕ್ಕೊಟ್ಟು ಕೇಂದ್ರ…

Read More

ಪ್ರಧಾನಿ ಮೋದಿ ಸ್ವಾಗತಕ್ಕೆ ಉಡುಪಿ ಶ್ರೀಕೃಷ್ಣ ಮಠ ಸಂಪೂರ್ಣ ಸಿದ್ದ ; ಪುತ್ತಿಗೆ‌ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

ಉಡುಪಿ: ಪ್ರಧಾನಿ ಮೋದಿ ಸ್ವಾಗತಕ್ಕೆ ಸಿದ್ಧತೆ ಪೂರ್ಣಗೊಂಡಿದೆ ಎಂದು ಉಡುಪಿ ಪರ್ಯಾಯ ಪುತ್ತಿಗೆ‌ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.ಉಡುಪಿ ಶ್ರೀಕೃಷ್ಣ ಮಠಕ್ಕೆ ನಾಳೆ, ಶುಕ್ರವಾರ ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಗೀತಾಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ‘ಮಧ್ಯಾಹ್ನ 12 ಗಂಟೆಗೆ ಪ್ರಧಾನಿಯವರು ಕೃಷ್ಣಮಠಕ್ಕೆ ಬರಲಿದ್ದು, ಮೊದಲು ಕನಕದಾಸರಿಗೆ ಪುಷ್ಪಾರ್ಚನೆ ಮಾಡುವರು ಬಳಿಕ ಕನಕನ…

Read More

ನ.30ರಂದು ರೋಟರಿ ಮಂಗಳೂರು ಸೆಂಟ್ರಲ್ನಿಂದ ರೋಟರಿ ಚಿಣ್ಣರ ಉತ್ಸವ , ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ

ಮಂಗಳೂರು:ರೋಟರಿಯ ಸಮಾಜ ಸೇವಾ ಚಟುವಟಿಕೆಗಳ ಅಂಗವಾಗಿ ರೋಟರಿ ಮಂಗಳೂರು ಸೆಂಟ್ರಲ್, ರೋಟರ್ಯಾಕ್ಟ್, ಮಂಗಳೂರು ಸಿಟಿ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ’25ನೇ ವಾರ್ಷಿಕ ರೋಟರಿ ಚಿಣ್ಣರ ಉತ್ಸವ’ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ ನ.30ರಂದು ಬೆಳಗ್ಗೆ 9:00 ಗಂಟೆಗೆ ನಗರದ ಉರ್ವದ ಕೆನರಾ ಹೈಸ್ಕೂಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ರೋಟರಿ ಸಭಾಪತಿ ಡಾ.ಬಿ.ದೇವದಾಸ ರೈ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಒಂದು ದಿನದ ಕ್ರೀಡಾ ಸ್ಪರ್ಧಾಕೂಟ ಮತ್ತು ಮನೋರಂಜನಾ ಉತ್ಸವದಲ್ಲಿ ಜಿಲ್ಲೆಯ ವಿವಿಧ…

Read More

ಪ್ರಧಾನಿ ಉಡುಪಿ ಭೇಟಿ ಹಿನ್ನಲೆಯಲ್ಲಿ ಕೃಷ್ಣನಗರಿ ಉಡುಪಿಯಲ್ಲಿ ಪೊಲೀಸ್ ಭದ್ರತೆ

ಪ್ರಧಾನಿ ಉಡುಪಿ ಭೇಟಿ ಹಿನ್ನೆಲೆಯಲ್ಲು ಕೃಷ್ಣನಗರಿ ಉಡುಪಿಯಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿಗೆ ಆಗಮಿಸುತ್ತಿದ್ದು ಅಕ್ಷರಶಃ ಉಡುಪಿ ಖಾಕಿ ಕೋಟೆಯಾಗಿ ಮಾರ್ಪಾಡಾಗಿದೆ. ಶುಕ್ರವಾರದಂದು ಬನ್ನಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪದಿಂದ ಕಲ್ಸಂಕದ ವರೆಗೂ ಪ್ರಧಾನಿ ರೋಡ್‌ಶೋ ನಡೆಯಲಿದ್ದು ಇದಕ್ಕಾಗಿ ಎರಡು ಕಡೆಗಳಲ್ಲೂ ಬ್ಯಾರಿಕೇಡ್ ನಿರ್ಮಾಣ ಮಾಡಲಾಗಿದೆ. ಅಲ್ಲದೆ ಈ ರಸ್ತೆಯ ಎರಡೂ ಬದಿಗಳಲ್ಲಿರುವ ಅಂಗಡಿ ಮಾಲಕರಿಗೆ ಅಂದು ಅಂಗಡಿ ತೆರೆಯದಂತೆ ಸೂಚನೆಯನ್ನು ಜಿಲ್ಲಾಡಳಿತ ರವಾನಿಸಿದೆ. ಪ್ರಧಾನಿಯವರ ಆಗಮನದ ಹಿನ್ನೆಲೆಯಲ್ಲಿ ಶಿಷ್ಟಾಚಾರ ಪರಿಪಾಲನೆಗೆ…

Read More

ಅರುವತ್ತು ಸಾವಿರ ಕೋಟಿ ಗ್ರಾಹಕರ ಠೇವಣಿ ತುಂಬಿದ ಕೇರಳ ಗ್ರಾಮೀಣ ಬ್ಯಾಂಕ್

ಮಂಜೇಶ್ವರ :ಕೃಷಿಕರ ಬ್ಯಾಂಕ್ ಎಂದು ಪ್ರಸಿದ್ದಿ ಪಡೆದಿರುವ ಕೇರಳ ಗ್ರಾಮೀಣ ಬ್ಯಾಂಕಿನಲ್ಲಿ ಸುಮಾರು 635 ಶಾಖೆ ಹೊಂದಿರುವ ಬ್ಯಾಂಕಿನಲ್ಲಿ ಅರುವತ್ತು ಸಾವಿರ ಕೋಟಿ ಗ್ರಾಹಕರ ಠೇವಣಿ ತುಂಬಿದ ಈ ಸಂದರ್ಭದಲ್ಲಿ ಗ್ರಾಹಕರು ಕೃಷಿಕರು ಬ್ಯಾಂಕ್ ಸಿಬ್ಬಂದಿಗಳು ಸೇರಿ ಕೇಕ್ ಕತ್ತರಿಸುವ ಮೂಲಕ ಪಾವೂರು ಕೇರಳ ಗ್ರಾಮೀಣ ಬ್ಯಾಂಕಿನನಲ್ಲಿ ಸಂತೋಷ ಕೂಟ ಆಚರಣೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾವೂರು ಶಾಖೆಯ ಮೆನೇಜರ್ ಶ್ರುತಿ C. ವಹಿಸಿದ್ದರು ಕಾರ್ಯಕ್ರಮದ ಉದ್ಘಾಟನೆಯನ್ನು ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು ನೆರವೇರಿಸಿದರು…

Read More

ಮಂಜೇಶ್ವರದಲ್ಲಿ ಬಿಸಿಯೇರುತ್ತಿರುವ ಸ್ಥಳೀಯಾಡಳಿತ ಚುನಾವಣಾ ಚಟುವಟಿಕೆ : ಯುಡಿಎಫ್ ಮಂಜೇಶ್ವರ ಎರಡನೇ ವಾರ್ಡ್ ಕಚೇರಿ ಉದ್ಘಾಟನೆ

ಮಂಜೇಶ್ವರ: ಸ್ಥಳೀಯಾಡಳಿತ ಚುನಾವಣಾ ಕಣ ದಿನದಿಂದ ದಿನಕ್ಕೆ ಬಿಸಿಯೇರುತ್ತಿರುವ ಹಿನ್ನೆಲೆಯಲ್ಲಿ ಮಂಜೇಶ್ವರ ಗ್ರಾಮ ಪಂಚಾಯತು ಎರಡನೇ ವಾರ್ಡಿನ ಯು ಡಿ ಎಫ್ ಚುನಾವಣಾ ಕಚೇರಿಯನ್ನು ವಡಗರ ಸಂಸದ ಶಾಫಿ ಪರಂಬಿಲ್ ಉದ್ಘಾಟಿಸಿದರು.ಉದ್ಘಾಟನಾ ಸಮಾರಂಭವು ಉತ್ಸಾಹಭರಿತ ವಾತಾವರಣದಲ್ಲಿ ನಡೆದಿದ್ದು, ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರ ದೊಡ್ಡ ಉಪಸ್ಥಿತಿ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್, ಎರಡನೇ ವಾರ್ಡ್ ಯುಡಿಎಫ್ ಅಭ್ಯರ್ಥಿ ಇಲ್ಯಾಸ್ ತೂಮಿನಾಡು, ಜಿಲ್ಲಾ ಪಂಚಾಯತ್ ವರ್ಕಾಡಿ ಡಿವಿಷನ್ ಅಭ್ಯರ್ಥಿ ಹರ್ಷಾದ್ ವರ್ಕಾಡಿ ಸೇರಿದಂತೆ…

Read More
error: Content is protected !!