ಮಟಪಾಡಿಯಲ್ಲಿ ನೂತನ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ

ಉಡುಪಿ: ಉಡುಪಿ–ಕೊಕ್ಕರ್ಣೆ ಮಾರ್ಗದಲ್ಲಿ ಬ್ರಹ್ಮಾವರ, ಮಟಪಾಡಿ–ನೀಲಾವರ ಮೂಲಕ ಸಂಚರಿಸಲಿರುವ ನೂತನ ಸರ್ಕಾರಿ ಸಾರಿಗೆ ಬಸ್ಸಿಗೆ ಮಟಪಾಡಿ ಗ್ರಾಮದಲ್ಲಿ ಸಂಭ್ರಮದ ಸ್ವಾಗತ ಕೋರಲಾಯಿತು. ಫ್ರೆಂಡ್ಸ್ ಮಟಪಾಡಿ ಯೂಥ್ ಕ್ಲಬ್ ವತಿಯಿಂದ ಗ್ರಾಮಕ್ಕೆ ಆಗಮಿಸಿದ ಬಸ್ಸಿಗೆ ಹೂವಿನ ಹಾರ ಹಾಕಿ, ಆರತಿ ಬೆಳಗಿ, ತೆಂಗಿನಕಾಯಿ ಒಡೆದು ಹಾಗೂ ಪಟಾಕಿ ಸಿಡಿಸಿ ಭವ್ಯ ಸ್ವಾಗತ ನೀಡಲಾಯಿತು. ಇದೇ ವೇಳೆ ಬಸ್ಸಿನಲ್ಲಿ ಪ್ರಯಾಣಿಸಿದ ಪ್ರಯಾಣಿಕರಿಗೆ ತಂಪು ಪಾನೀಯ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಮಟಪಾಡಿ ಯೂಥ್ ಕ್ಲಬ್ ಅಧ್ಯಕ್ಷ ಚೇತನ್ ಜಿ ಪೂಜಾರಿ, ಪ್ರಧಾನ…

Read More

ಬಿಜೆಪಿ ಕಾರ್ಯಕರ್ತರ ಮಧ್ಯೆ ಗೊಂದಲ ಸೃಷ್ಟಿಸಲು ಯತ್ನ : ಎಂ. ಎಲ್. ಅಶ್ವಿನಿ

​ಕಾಸರಗೋಡು: ಚುನಾವಣಾ ಫಲಿತಾಂಶ ಹೊರಬಂದ ನಂತರ ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಬಿಜೆಪಿ ಕಾರ್ಯಕರ್ತರ ಮಧ್ಯೆ ಗೊಂದಲ ಮೂಡಿಸಲು ಮತ್ತು ಅವರನ್ನು ಪ್ರಚೋದಿಸಿ ನಾಡಿನ ಸಾಮುದಾಯಿಕ ಸೌಹಾರ್ದತೆಯನ್ನು ಹಾಳುಮಾಡಲು ವ್ಯವಸ್ಥಿತ ಸಂಚು ನಡೆಯುತ್ತಿದೆ ಎಂದು ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಎಂ. ಎಲ್. ಅಶ್ವಿನಿ ಪ್ರತಿಕ್ರಿಯಿಸಿದ್ದಾರೆ. ​ಕಾಸರಗೋಡು ಮತ್ತು ಮಂಜೇಶ್ವರ ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಹೊಂದಿದ್ದ ಕರ್ನಾಟಕದ ಶಾಸಕರ ನೇತೃತ್ವದಲ್ಲಿ ಈ ಬಾರಿ ಅತ್ಯುತ್ತಮ ಚುನಾವಣಾ ಕಾರ್ಯ ಚಟುವಟಿಕೆಗಳು ನಡೆದಿವೆ. ಮಂಜೇಶ್ವರದಲ್ಲಿ ಬಿಜೆಪಿ ಇತಿಹಾಸದಲ್ಲೇ ಅತಿ ಹೆಚ್ಚಿನ…

Read More

ಬಿಜೆಪಿ ಪ್ರಶಿಕ್ಷಣ ಮಹಾಭಿಯಾನ ಸಮಾಪ್ತಿ: ‘ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ಮುಖ್ಯ’ – ನಳಿನ್ ಕುಮಾರ್ ಕಟೀಲ್

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಒಡ್ಡೂರು ಪಾರ್ಮ್ಸ್ ನಲ್ಲಿ ನಡೆದ ಎರಡು ದಿನಗಳ ಪಂ.ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ-2026 ವರ್ಗವು ಯಶಸ್ವಿಯಾಗಿ ಸಮಾಪ್ತಿಗೊಂಡಿತು. ಸಮಾರೋಪ ಸಮಾರಂಭದಲ್ಲಿ ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರು, ಅಭ್ಯಾಸ ವರ್ಗ, ಕಾರ್ಯಕಾರಿಣಿ ಸಭೆ, ಪದಾಧಿಕಾರಿಗಳ ಸಭೆ, ಪ್ರಶಿಕ್ಷಣ, ಹೀಗೆ ನಿರಂತರ ಕಾರ್ಯ ಚಟುವಟಿಕೆಗಳೇ ಬಿಜೆಪಿ ಜಗತ್ತಿನ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆಯಲು ಕಾರಣ. ವ್ಯಕ್ತಿಗಿಂತ ಪಕ್ಷ,ಮುಖ್ಯ, ಪಕ್ಷಕ್ಕಿಂತ…

Read More

ಕೇರಳ ಸಿಎಂ ಪಟ್ಟಕ್ಕಾಗಿ ಕಾಂಗ್ರೆಸ್‌ನಲ್ಲಿ ತ್ರಿಕೋನ ಸ್ಪರ್ಧೆ : ಸತೀಶನ್–ವೇಣುಗೋಪಾಲ್–ಚೆನ್ನಿತ್ತಲ ನಡುವೆ ಪೈಪೋಟಿ

ಕೇರಳದಲ್ಲಿ ಮುಖ್ಯಮಂತ್ರಿ ಗಾದಿಗಾಗಿ ಕಾಂಗ್ರೆಸ್ ಒಳಗಿನ ಪೈಪೋಟಿ ತೀವ್ರಗೊಂಡಿದ್ದು, ಪ್ರಮುಖವಾಗಿ ವಿ.ಡಿ. ಸತೀಶನ್, ಕೆ.ಸಿ. ವೇಣುಗೋಪಾಲ್ ಹಾಗೂ ರಮೇಶ್ ಚೆನ್ನಿತ್ತಲ ನಡುವಿನ ಸ್ಪರ್ಧೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಮೂವರು ನಾಯಕರ ಬೆಂಬಲಿಗರು ಮುಖ್ಯಮಂತ್ರಿ ಹುದ್ದೆಗಾಗಿ ತೀವ್ರ ಲಾಬಿ ಆರಂಭಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ತಮ್ಮ ಆಕಾಂಕ್ಷಿ ನಾಯಕರ ಪರವಾಗಿ ಅಭಿನಂದನಾ ಸಂದೇಶಗಳು ಹಾಗೂ ಪ್ರಚಾರ ಅಭಿಯಾನಗಳು ಜೋರಾಗಿವೆ. ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆ ಸಂದರ್ಭದಲ್ಲಿ ಧರ್ಮ ಹಾಗೂ ಜಾತಿ ಸಮೀಕರಣಗಳು ಮಹತ್ವದ ಪಾತ್ರವಹಿಸುವ…

Read More

ಇಂಧನ ದರ ಏರಿಕೆ ವಿರೋಧಿಸಿ ಕಾಸರಗೋಡು ಜಿಲ್ಲೆಯಲ್ಲಿ ಹೋಟೆಲ್ ಬಂದ್ ಮುಷ್ಕರ ಯಶಸ್ವಿ

ಮಂಜೇಶ್ವರ :ವಾಣಿಜ್ಯ ಬಳಕೆಯ ಇಂಧನ ದರವನ್ನು ಸತತವಾಗಿ ಏರಿಸುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಕೇರಳ ಹೋಟೆಲ್ ಆಂಡ್ ರೆಸ್ಟೋರೆಂಟ್ ಅಸೋಸಿಯೇಷನ್ ಕರೆ ನೀಡಿದ್ದ 24 ಗಂಟೆಗಳ ರಾಜ್ಯವ್ಯಾಪಿ ಹೋಟೆಲ್ ಬಂದ್ ಮುಷ್ಕರ ಕಾಸರಗೋಡು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು ಜಿಲ್ಲೆಯಾದ್ಯಂತ ಹೋಟೆಲ್, ಬೇಕರಿ ಹಾಗೂ ಗೂಡಂಗಡಿಗಳು ಮುಚ್ಚಿದ್ದವು. ​ಪ್ರತಿಭಟನೆಯ ಅಂಗವಾಗಿ ಜಿಲ್ಲಾ ಘಟಕದ ವತಿಯಿಂದ ನಗರದ ಹೊಸ ಬಸ್ ನಿಲ್ದಾಣದವರೆಗೆ ಬೃಹತ್ ಮೆರವಣಿಗೆ ನಡೆಸಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು. ಮುಷ್ಕರಕ್ಕೆ ಚಾಲನೆ ನೀಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷ…

Read More

ಮಹಿಳಾ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಅಪಪ್ರಚಾರ: ಕಾಂಗ್ರೆಸ್ ಆರೋಪ

ಮಹಿಳಾ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯು ಕಾಂಗ್ರೆಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡುತ್ತಿದೆ, ಮಹಿಳೆಯರ ಪರವಾಗಿ ಪಕ್ಷವಿದ್ದು, ವಿರೋಧಿಯಾಗಲು ಸಾಧ್ಯವೇ ಇಲ್ಲ ಎಂದು ದ.ಕ.ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಮಹಮ್ಮದ್ ಆಲಿ ಹೇಳಿದರು.ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಜರಾತ್, ಮಣಿಪುರ ಸಹಿತ ನಾನಾ ಕಡೆಗಳಲ್ಲಿ ಮಹಿಳೆಯರಿಗೆ ದೌರ್ಜನ್ಯ ಎಸಗಿದ ಪ್ರಕರಣಗಳಲ್ಲಿ ಆರೋಪಿಗಳ ಕೃತ್ಯ ಖಂಡಿಸುವ ಪ್ರಯತ್ನವನ್ನು ಬಿಜೆಪಿ ಮಾಡಿರಲಿಲ್ಲ ಎಂದರು. ಬಿಜೆಪಿಗೆ ಮಹಿಳೆಯರ ಕುರಿತು ಎಳ್ಳಷ್ಟೂ ಗೌರವವಿಲ್ಲ ಆದರೆ ಕಾಂಗ್ರೆಸ್…

Read More

2014ರ ಮಹಿಳೆ ಕೊಲೆ ಪ್ರಕರಣ: 6 ವರ್ಷ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

2014ರಲ್ಲಿ ಮಂಗಳೂರಿನ ಹೊಸಬೆಟ್ಟುವಿನಲ್ಲಿ ನಡೆದಿದ್ದ ಮಹಿಳೆಯ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಗಳನ್ನು ರಾಜಸ್ಥಾನದ ಶಿವರಾಮ್ ಹಾಗೂ ಬಹುದ್ದೂರ್ ಸಿಂಗ್ @ ಬಹುದ್ದುರ @ ಬುಯ್ಯ ಎಂದು ಗುರುತಿಸಲಾಗಿದೆ.8.02.2014 ರ ಸಂಜೆ 4ರಿಂದ ರಾತ್ರಿ 8 ಗಂಟೆ ಮಧ್ಯೆ ಕುಳಾಯಿ ಹೊಸಬೆಟ್ಟುವಿನ ಕೋರ್ದಬ್ಬು ‘ಕಲ’ದ ಬಳಿಯ ನಿವಾಸಿಯಾದ ಸುಮತಿ ಪ್ರಭು ಎಂಬವರನ್ನು ಕುತ್ತಿಗೆಗೆ ಚೂರಿಯಿದ ಕೊಯ್ದು ಕೊಲೆ ಮಾಡಿ ಮೈಮೇಲಿದ್ದ ಸುಮಾರು 3,80,000 ಬೆಲೆಬಾಳುವ 192 ಗ್ರಾಂ (24 ಪವನ್) ತೂಕದ ಬಂಗಾರದ…

Read More

ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನಾಶೀರ್ವಾದ: ಸಿಎಂ ಸಿದ್ದರಾಮಯ್ಯ ಹೇಳಿಕೆ

ಮೈಸೂರು:ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು, ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮೆಚ್ಚಿಕೊಂಡಿರುವುದನ್ನು ಸೂಚಿಸುತ್ತದೆ .ವಿಪಕ್ಷಗಳ ಯಾವುದೇ ತಂತ್ರಗಾರಿಕೆ ನಡೆಯುವುದಿಲ್ಲ. ಅವರು ಕೇವಲ ಕುತಂತ್ರಗಳನ್ನಷ್ಟೇ ಮಾಡುತ್ತಾರೆ ಎಂದರು. ಮುಖ್ಯಮಂತ್ರಿ ಬದಲಾವಣೆ ವಿಷಯದ ಬಗ್ಗೆ ಪತ್ರಕರ್ತರ…

Read More

ಮಂಗಳೂರಿನ ಬಂದರಿನ ಜೈನ ಬಸದಿ

ತುಳುನಾಡು ಬಹು ಭಾಷೆಗಳ ಗೂಡು , ವಿವಿಧ ಧರ್ಮಗಳನ್ನು ಪೊರೆಯುವ ತೊಟ್ಟಿಲು , ಇಲ್ಲಿನ ಸಂಸ್ಕೃತಿ ಆಚಾರ ವಿಚಾರಗಳು ವೈಶಿಷ್ಟಗಳಿಂದ ಕೂಡಿದೆ . ಕಲೆಯನ್ನು ಆರಾಧಿಸುವ ಪರಂಪರೆ , ವೈಧಿಕ ವಿಚಾರಗಳನ್ನು ಪರಸ್ಪರ ಗೌರವಿಸುವ ನಡೆ , ದೇವಾಲಯಗಳಲ್ಲಿ ಶ್ರೀಮಂತವಾಗಿರುವ ವಾಸ್ತು ಶೈಲಿ ಎಲ್ಲವೂ ಈ ಮಣ್ಣಿನ ಅಸ್ಮಿತೆಗೆ ಹಿಡಿದ ಕೈ ಗನ್ನಡಿಯಾಗಿದೆ . ಇತಿಹಾಸವನ್ನು ತನ್ನ ಒಡಲಲ್ಲಿ ಇಟ್ಟು ವಾಸ್ತು ಶಿಲ್ಪ ಶೈಲಿಯಿಂದ ಕಣ್ಮನವವನ್ನು ಸೆಳೆಯುವ ಬಸದಿ ಮಂಗಳೂರಿನ ಬಜಿಲಕೇರಿಯಲ್ಲಿದ್ದು ಇದನ್ನು ಶ್ರೀ ಆದೀಶ್ವರ ಸ್ವಾಮಿ…

Read More

ಕಾಣೆಯಾದವರ ಪತ್ತೆಗೆ ಮನವಿ

ಮಂಗಳೂರು:- ಶಕ್ತಿನಗರ ಕ್ಲಾಸಿಕ್ ಪರ್ಲ್ ಅಪಾರ್ಟ್‍ಮೆಂಟ್‍ನಲ್ಲಿ ವಾಸವಿದ್ದ ಸುನೀಲ್ ಶಂಕರ್ ಬೇಕಲ್ (48) ಎಂಬವರಿಗೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಅಪಘಾತವಾಗಿದ್ದು, ಸರಕಾರಿ ವೆನ್‍ಲಾಕ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆದು, ಎಪ್ರಿಲ್ 2 ರಂದು ಆಸ್ಪತ್ರೆಯಿಂದ ಮನೆಗೆ ಬಂದವರು ಅಲ್ಲಿಂದ ನೇರವಾಗಿ ಯಾರಿಗೂ ತಿಳಿಸದೇ ಮನೆ ಬಿಟ್ಟು ಹೋಗಿರುತ್ತಾರೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ: ಎತ್ತರ 5.9 ಅಡಿ, ಗೋಧಿ ಮೈಬಣ್ಣ, ಕಪ್ಪು ಕೂದಲು, ಸಾಧಾರಣ ಶರೀರ, ಕನ್ನಡ, ಹಿಂದಿ,…

Read More
error: Content is protected !!