ಗಾಂಧಿ ಹೆಸರಿನಲ್ಲಿ ಬಿಜೆಪಿ ರಾಜಕೀಯ, ಚಿಂತನೆಗಳನ್ನು ನಿತ್ಯ ಕೊಲ್ಲುತ್ತಿದೆ: ರಮಾನಾಥ ರೈ ಆರೋಪ
ಮಂಗಳೂರು: ಪ್ರಧಾನಿ ಮೋದಿ ಅವರು ವಿದೇಶಗಳಿಗೆ ಹೋದಾಗ ಮಹಾತ್ಮ ಗಾಂಧಿ ಅವರನ್ನು ಕೊಂಡಾಡುತ್ತಾರೆ. ಆದರೆ ತಮ್ಮದೇ ದೇಶದಲ್ಲಿ ಗಾಂಧಿ ಹೆಸರಿಗೆ ಅಪಚಾರ ಮಾಡುತ್ತಾರೆ. ಇದು ಹಿಪೊಕ್ರೆಸಿಯ ಒಂದು ಭಾಗ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.ಶುಕ್ರವಾರ ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಬಳಿಕ ಅವರು ಮಾತನಾಡುತ್ತಿದ್ದರು. ಗಾಂಧೀಜಿಯವರು ಅಹಿಂಸಾ ಮಾರ್ಗದ ಮೂಲಕ ಬ್ರಿಟಿಷರ ವಿರುದ್ಧ ಹೋರಾಡಿದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ…