ಪುತ್ತೂರು: ಯುವ ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು; ವಿಚ್ಛೇದನಕ್ಕೆ ಅರ್ಜಿ
ಪುತ್ತೂರು, ಜೂ. 21: ಯುವ ಗಾಯಕಿ ಅಖಿಲಾ ಪಜಿಮಣ್ಣು ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ. ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮಾ ಇಬ್ಬರು ಪರಸ್ಪರ ಒಪ್ಪಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಖಿಲಾ ಪಜಿಮಣ್ಣು ಮೂರು ವರ್ಷಗಳ ಹಿಂದೆ ಬೆಳಗಾವಿ ಮೂಲದ ಅಮೆರಿಕ ನಿವಾಸಿ ಸಾಫ್ಟ್‌ವೇರ್ ಇಂಜಿನಿಯರ್ ಧನಂಜಯ್ ಶರ್ಮಾ ಅವರೊಂದಿಗೆ ವಿವಾಹವಾಗಿದ್ದರು. ಆದರೆ ಈಗ ಇವರಿಬ್ಬರ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನ ಪಡೆಯಲು ನಿರ್ಧರಿಸಿದ್ದಾರೆ.ದಿಢೀರನೇ ಅಖಿಲಾ ಹಾಗೂ ಧನಂಜಯ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ. ಅವರಿಬ್ಬರು ಪುತ್ತೂರು…