ಸ್ವಚ್ಛ ಮಂಗಳೂರು ಅಭಿಯಾನಕ್ಕೆ ಚಾಲನೆ: ಶ್ರಮದಾನದಲ್ಲಿ 3000 ಕೆಜಿ ತ್ಯಾಜ್ಯ ತೆರವು
ರಾಮಕೃಷ್ಣ ಮಿಷನ್ – ಸ್ವಚ್ಛ ಮಂಗಳೂರು ಅಭಿಯಾನದ ಮೇ ತಿಂಗಳ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ರೋಸಾರಿಯೋ ಚರ್ಚ್ ಮುಖ್ಯಸ್ಥರಾದ ಫಾ. ವಲೇರಿಯನ್ ಡಿ’ಸೋಜಾ ಹಾಗೂ ಎಂ.ಆರ್.ಪಿ.ಎಲ್ ಸಂಸ್ಥೆಯ ನಿರ್ದೇಶಕರಾದ ಶ್ರೀ ಬಿ.ಎಚ್.ವಿ. ಪ್ರಸಾದ್ ಅವರು ಹಸಿರು ನಿಶಾನೆಯ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಕೇಶವ ಪಟ್ಟಾಳಿ, ನಿವೃತ್ತ ಸೇನಾನಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಡಾ. ದನೇಶ್ ಕುಮಾರ್, ಕಮಲಾಕ್ಷ ಪೈ, ದಿಲ್‌ರಾಜ್ ಆಳ್ವ ಹಾಗೂ ಶ್ರೀ ರಂಜನ್ ಬೆಳ್ಳರ್ಪಾಡಿ ಉಪಸ್ಥಿತರಿದ್ದು, ಸ್ವಯಂಸೇವಕರನ್ನು ಪ್ರೋತ್ಸಾಹಿಸಿದರು….
