Headlines

ಸತ್ಯಶೋಧನೆಗೆ ಆದ್ಯತೆ ನೀಡಿ, ಉತ್ತಮ ಸಂಗತಿಗಳಿಗೂ ಪ್ರಚಾರ ಸಿಗಲಿ: ಶಾಸಕ ಅಶೋಕ್ ರೈ

ಪುತ್ತೂರು: ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಸತ್ಯಶೋಧನೆಗೆ ಹೆಚ್ಚಿನ ಒತ್ತು ನೀಡಬೇಕು. ಸಣ್ಣಪುಟ್ಟ ತಪ್ಪುಗಳನ್ನು ವೈಭವೀಕರಿಸುವುದರ ಜೊತೆಗೆ ಸಮಾಜದಲ್ಲಿರುವ ಉತ್ತಮ ಸಂಗತಿಗಳನ್ನೂ ಜನರಿಗೆ ತಲುಪಿಸುವ ಜವಾಬ್ದಾರಿ ಮಾಧ್ಯಮಗಳ ಮೇಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಉಪನ್ಯಾಸ, ಬಿ.ಟಿ. ರಂಜನ್ ಪ್ರಶಸ್ತಿ ಪ್ರದಾನ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಭಿವೃದ್ಧಿ ರಾಜಕಾರಣವೇ ಚರ್ಚೆಯಾಗಬೇಕು, ಧರ್ಮ ರಾಜಕಾರಣವಲ್ಲ. ಪುತ್ತೂರಿಗೆ…

Read More

ತ್ರಿಪುರಾ ಡಿಜಿಪಿ ಅನುರಾಗ್ ಧಂಕರ್ ಮೃತದೇಹ ಕಚೇರಿಯಲ್ಲಿ ಪತ್ತೆ; ತನಿಖೆ ಆರಂಭ

ಅಗರ್ತಲಾ: ತ್ರಿಪುರಾ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಹಾಗೂ ಹಿರಿಯ ಐಪಿಎಸ್ ಅಧಿಕಾರಿ ಅನುರಾಗ್ ಧಂಕರ್ ಅವರು ಸೋಮವಾರ ಅಗರ್ತಲಾದ ಪೊಲೀಸ್ ಪ್ರಧಾನ ಕಚೇರಿಯಲ್ಲಿರುವ ತಮ್ಮ ಕಚೇರಿಯಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಪ್ರಾಥಮಿಕ ಮಾಹಿತಿಯ ಪ್ರಕಾರ, ಇದು ಆತ್ಮಹತ್ಯೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದರೂ, ಸಾವಿನ ನಿಖರ ಕಾರಣವನ್ನು ಅಧಿಕಾರಿಗಳು ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ತ್ರಿಪುರಾ ಮುಖ್ಯಮಂತ್ರಿ ಸೇರಿದಂತೆ ಹಿರಿಯ ಸರ್ಕಾರಿ ಅಧಿಕಾರಿಗಳು ಪೊಲೀಸ್ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದಾರೆ.ಮೃತದೇಹವನ್ನು ಮರಣೋತ್ತರ…

Read More

ಬಂಟಕಲ್ ಬಳಿ ಥಾರ್ ಕಾರು ಚರಂಡಿಗೆ ಉರುಳಿ: ನಾಲ್ವರಿಗೆ ಗಾಯ

ಉಡುಪಿ: ಮಹೀಂದ್ರಾ ಥಾರ್ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಪರಿಣಾಮ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಶಿರ್ವ–ಕಟಪಾಡಿ ರಾಜ್ಯ ಹೆದ್ದಾರಿಯ ಬಂಟಕಲ್ ಸಮೀಪದ ಬಿ.ಸಿ. ರಸ್ತೆ ಬಳಿ ನಡೆದಿದೆ. ಗಾಯಾಳುಗಳನ್ನು ಚಾಲಕ ಶಿರ್ವ ನಿವಾಸಿ ಬಾಲಕೃಷ್ಣ (21), ಇಬ್ಬರು ಯುವತಿಯರು ಹಾಗೂ ಮತ್ತೋರ್ವ ಸಹ ಪ್ರಯಾಣಿಕ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನಾಲ್ವರೂ ಗಾಯಗೊಂಡಿದ್ದು, ಅವರಲ್ಲಿ ಮೂವರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.ಸ್ಥಳೀಯರು ತಕ್ಷಣ ಗಾಯಾಳುಗಳನ್ನು ರಕ್ಷಿಸಿ ಉಡುಪಿಯ ಖಾಸಗಿ ಆಸ್ಪತ್ರೆಗೆ…

Read More

ಪರ್ಕಳದಲ್ಲಿ ಮತ್ತೆ ಗೋವುಗಳಿಗೆ ಚರ್ಮ ಗಂಟು ರೋಗದ ಭೀತಿ; ಮುನ್ನೆಚ್ಚರಿಕೆ ಕ್ರಮಕ್ಕೆ ಒತ್ತಾಯ

ಉಡುಪಿ: ಪರ್ಕಳದಲ್ಲಿ ಮತ್ತೆ ಬೀಡಾಡಿ ಗೋವುಗಳಲ್ಲಿ ಚರ್ಮ ಗಂಟು ರೋಗ (Lumpy Skin Disease) ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.ಪರ್ಕಳದ ನಿವಾಸಿ ಕೆ.ಆರ್. ಅಶೋಕ್ ಅವರು ತಮ್ಮ ನಿವಾಸದ ಬಳಿ ಪ್ರತಿದಿನ ಬೀಡಾಡಿ ಗೋವುಗಳಿಗೆ ಉಚಿತವಾಗಿ ಆಹಾರ ನೀಡುತ್ತಿದ್ದಾರೆ. ನಿತ್ಯ ಬರುವ ಗೋವುಗಳ ಪೈಕಿ ಒಂದಕ್ಕೆ ಚರ್ಮ ಗಂಟು ರೋಗದ ಲಕ್ಷಣಗಳು ಕಂಡುಬಂದಿದ್ದು, ದೇಹದ ಮೇಲಿನ ಗಾಯಗಳು ಉಲ್ಬಣಗೊಂಡಿರುವುದು ಗಮನಕ್ಕೆ ಬಂದಿದೆ. ಗೋವಿನ ಸ್ಥಿತಿ ಕಂಡು ಕೆ.ಆರ್. ಅಶೋಕ್ ಅವರು ಸ್ವತಃ ಆರೈಕೆ ಮಾಡುತ್ತಿದ್ದು,…

Read More

ಮಂಗಳೂರಿನಲ್ಲಿ ಬಾವಿಯಲ್ಲಿ ಕಾರ್ಮಿಕನ ಶವ ಪತ್ತೆ; ಕೊಲೆ ಶಂಕೆ

ಮಂಗಳೂರು:ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟುವಿನ ಕೃಷ್ಣಾಪುರ ಮಠದ ಸಮೀಪದ ಬಾವಿಯಲ್ಲಿ 20 ವರ್ಷದ ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಅಣ್ಣ ಸೇರಿದಂತೆ ಮತ್ತೋರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೃತನನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಉದ್ಯೋಗ ನಿಮಿತ್ತ ಮಂಗಳೂರಿಗೆ ಬಂದಿದ್ದ ಅವರು ಚೊಕ್ಕಬೆಟ್ಟು ಮಠದ ಸಮೀಪ ರೇಖಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದು, ಕೂಲಿ ಕೆಲಸ ಮಾಡುತ್ತಿದ್ದರು. ಪೊಲೀಸರ ಪ್ರಾಥಮಿಕ ಮಾಹಿತಿಯ…

Read More

ತಡರಾತ್ರಿ ಅಗ್ನಿ ಅವಘಡ: ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆ ಭಸ್ಮ – ₹4 ಲಕ್ಷಕ್ಕೂ ಅಧಿಕ ನಷ್ಟ

ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಗೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆಗೆ ಸೋಮವಾರ ತಡರಾತ್ರಿ ಸುಮಾರು 1 ಗಂಟೆಯ ವೇಳೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಬೆಂಕಿಯ ಜ್ವಾಲೆ ಕ್ಷಣಾರ್ಧದಲ್ಲೇ ವ್ಯಾಪಿಸಿದ ಪರಿಣಾಮ ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಸ್ಥಳೀಯ ನಿವಾಸಿಗಳು ಸಮಯಪ್ರಜ್ಞೆ ಮೆರೆದು ಕೊಟ್ಟಿಗೆಯೊಳಗಿದ್ದ ದನಗಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದರಿಂದ ಯಾವುದೇ ಜಾನುವಾರುಗಳಿಗೆ ಅಪಾಯ…

Read More

CJP ಸಂಸತ್ ಮೆರವಣಿಗೆ; ಪ್ರತಿಭಟನೆಯನ್ನು ತಡೆದ ದೆಹಲಿ ಪೊಲೀಸರು, ಜಂತರ್ ಮಂತರ್‌ನಲ್ಲಿ ಲಾಠಿಚಾರ್ಜ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಕ್ಷ (CJP) ಆಯೋಜಿಸಿದ್ದ ಸಂಸತ್ ಮೆರವಣಿಗೆ ಆರಂಭವಾಗುವ ಮುನ್ನವೇ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಜಂತರ್ ಮಂತರ್‌ನಲ್ಲಿ ಜಮಾಯಿಸಿದ್ದ ನೂರಾರು ಕಾರ್ಯಕರ್ತರ ಮೇಲೆ ದೆಹಲಿ ಪೊಲೀಸರು ಲಾಠಿಚಾರ್ಜ್ ನಡೆಸಿದರು. ಸ್ಥಳದಲ್ಲಿ ಭಾರೀ ಪ್ರಮಾಣದ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ದಾಟಲು ಯತ್ನಿಸಿದಾಗ ಘರ್ಷಣೆ ಉಂಟಾಯಿತು. ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದ ಕಾರಣ ಮೆರವಣಿಗೆಯನ್ನು ಪೊಲೀಸರು ತಡೆಯುವುದಾಗಿ ಮುಂಚಿತವಾಗಿಯೇ ತಿಳಿಸಿದ್ದರು. ವಿರೋಧ ಪಕ್ಷಗಳ ಸಂಸದರೂ ಪ್ರತಿಭಟನಾ…

Read More

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ‘ಎಸ್.ಐ.ಆರ್’ (S.I.R) ಮಹಾ ಅಭಿಯಾನ: ಬಿರುಸಿನ ಮನೆ-ಮನೆ ಸಂಪರ್ಕ ನಡೆಸಿದ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ‘ಎಸ್.ಐ.ಆರ್ (S.I.R) ಮಹಾ ಅಭಿಯಾನ’ದ ಅಂಗವಾಗಿ ವಿಧಾನ ಪರಿಷತ್ ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿವಿಧ ಬೂತ್‌ಗಳಿಗೆ ತೆರಳಿ ಬಿರುಸಿನ ಮನೆ-ಮನೆ ಸಂಪರ್ಕ ಹಾಗೂ ಪಕ್ಷದ ಪ್ರಮುಖರ ಭೇಟಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದರು. ಪ್ರಮುಖರ ಮನೆಗೆ ಭೇಟಿ ಹಾಗೂ ಸಮಾಲೋಚನೆ:ಅಭಿಯಾನದ ಅಂಗವಾಗಿ ಅದ್ಯಪಾಡಿ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 174 ಹಾಗೂ 175 ರಲ್ಲಿ ಶಾಸಕರು ವ್ಯಾಪಕ ಸಂಚಾರ…

Read More

ಲಾವಣ್ಯ ಹತ್ಯೆ ಪ್ರಕರಣ: ಆರೋಪಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆ ವಿಧಿಸಬೇಕು – ಕಾಂಗ್ರೆಸ್ ಮುಖಂಡೆ ಎಸ್. ಅಪ್ಪಿ

ಮಂಗಳೂರು:ಬಿ.ಸಿ.ರೋಡ್‌ನಲ್ಲಿ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣದ ಆರೋಪಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷರಾದ ಎಸ್ ಅಪ್ಪಿ ಆಗ್ರಹಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರ ಮೇಲಿನ ನಿರಂತರ ಹಿಂಸಾಚಾರ ಮತ್ತು ದೌರ್ಜನ್ಯ ಪ್ರಕರಣಗಳು ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿವೆ. ಲಾವಣ್ಯ ಹತ್ಯೆ ಪ್ರಕರಣ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದು, ಮಹಿಳೆಯರು ಹಾಗೂ ಪೋಷಕರಲ್ಲಿ ತೀವ್ರ…

Read More

ಉದ್ಯಾವರ ಮಾಡದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಆರಂಭ

ಮಂಜೇಶ್ವರ : ತೀಯಾ ಸಮಾಜ ಸಭಾ ಭವನ (ರಿ ) ಉದ್ಯಾವರ ಮಾಡ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್‌ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ 134ನೇ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರವು ಇಂದು ತೀಯಾ ಸಮಾಜ ಸಭಾ ಭವನದಲ್ಲಿ ಆರಂಭಗೊಂಡಿತು. ಶಿಬಿರವನ್ನು ಉದ್ಯಾವರ ಮಾಡದ ಅಣ್ಣ ದೈವದ ಪಾತ್ರಿ ಶ್ರೀ ರಾಜ ಬೆಳ್ಚಪ್ಪಾಡರು ಮತ್ತು ತಮ್ಮ ದೈವದ ಪಾತ್ರಿ ತಿಮಿರಿ ಬೆಲ್ಚಾಪ್ಪಾಡರು ಒಟ್ಟಿಗೆ ಸೇರಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ನೀಲಯ್ಯ ಪುಮಣ್ಣು ವಹಿಸಿದ್ದರು….

Read More
error: Content is protected !!