Headlines

2027ರ ಜನಗಣತಿ: ಕೇಂದ್ರ ಸರ್ಕಾರದಿಂದ 40 ಪ್ರಶ್ನೆಗಳ ಪ್ರಶ್ನಾವಳಿ ಬಿಡುಗಡೆ

ನವದೆಹಲಿ: ಜನಗಣತಿಗಾಗಿ ಕೇಂದ್ರ ಸರ್ಕಾರವು 40 ಪ್ರಶ್ನೆಗಳನ್ನು ಒಳಗೊಂಡ ಪ್ರಶ್ನಾವಳಿಯನ್ನು ಬಿಡುಗಡೆ ಮಾಡಿದೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಜನಗಣತಿಯಲ್ಲಿ ಜಾತಿ ಮಾಹಿತಿಯನ್ನೂ ಸಂಗ್ರಹಿಸಲಾಗುತ್ತಿದೆ. ಕೋವಿಡ್ ಲಸಿಕೆ ಪಡೆದ ಸ್ಥಳ, ಬ್ಯಾಂಕ್ ಖಾತೆಗಳು ಹಾಗೂ ಡಿಜಿಟಲ್ ಸಾಕ್ಷರತೆ ಸೇರಿದಂತೆ ಹಲವು ಮಾಹಿತಿಗಳನ್ನು ಪ್ರಶ್ನಾವಳಿಯಲ್ಲಿ ಸೇರಿಸಲಾಗಿದೆ. ಆಧಾರ್, ಮತದಾರರ ಗುರುತಿನ ಚೀಟಿ, ಪಾಸ್‌ಪೋರ್ಟ್, ಚಾಲನಾ ಪರವಾನಗಿ ಸೇರಿದಂತೆ ವಿವಿಧ ಗುರುತಿನ ದಾಖಲೆಗಳ ಮಾಹಿತಿಯನ್ನೂ ಸಂಗ್ರಹಿಸಲಾಗುತ್ತದೆ. ಸ್ವಾತಂತ್ರ್ಯಾನಂತರ ನಡೆಯುತ್ತಿರುವ ಎಂಟನೇ ಜನಗಣತಿ ಪ್ರಕ್ರಿಯೆ ನಾಳೆಯಿಂದ ಆರಂಭವಾಗಲಿದೆ. ಜನಗಣತಿ ಮಾಹಿತಿ ಸಂಗ್ರಹಿಸಲು…

Read More

ಯುಪಿಎಸ್‌ಟಿ ಅಭ್ಯರ್ಥಿಗಳ ಪ್ರತಿಭಟನೆ ಅಂತ್ಯ: ಶಿಕ್ಷಣ ಸಚಿವರೊಂದಿಗೆ ಮಾತುಕತೆಯಲ್ಲಿ ಒಮ್ಮತ

ಸಚಿವಾಲಯದ ಮುಂಭಾಗದಲ್ಲಿ ಯುಪಿಎಸ್‌ಟಿ (UPST) ಅಭ್ಯರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಅಂತ್ಯಗೊಳಿಸಿದ್ದಾರೆ. ಶಿಕ್ಷಣ ಸಚಿವ ಎನ್. ಶಂಸುದ್ದೀನ್ ಅವರೊಂದಿಗೆ ನಡೆದ ಚರ್ಚೆಯ ಬಳಿಕ ಪ್ರತಿಭಟನೆ ಹಿಂಪಡೆಯಲು ಅಭ್ಯರ್ಥಿಗಳು ನಿರ್ಧರಿಸಿದರು. ಸಮಸ್ಯೆ ಪರಿಹರಿಸಲು ಸರ್ಕಾರವು 45 ದಿನಗಳ ಕಾಲಾವಕಾಶ ಕೋರಿದೆ. ಖಾಲಿ ಹುದ್ದೆಗಳಿಲ್ಲದೆ ಪಿಎಸ್‌ಸಿ ಅಧಿಸೂಚನೆ ಹೊರಡಿಸುವುದನ್ನೂ ತಪ್ಪಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ಮಾಡೆಲ್ ರೆಸಿಡೆನ್ಶಿಯಲ್ ಶಾಲೆಗಳು ಮತ್ತು ಮೀನುಗಾರಿಕಾ ಶಾಲೆಗಳಲ್ಲಿ ಯುಪಿ ಶಿಕ್ಷಕರ ನೇಮಕಾತಿ ಕುರಿತು ಪರಿಶೀಲನೆ ನಡೆಸುವಂತೆ ಸಾರ್ವಜನಿಕ ಶಿಕ್ಷಣ ನಿರ್ದೇಶಕರಿಗೆ (DGE) ಸೂಚನೆ ನೀಡಲಾಗಿದೆ. ಪ್ರಸ್ತುತ…

Read More

ಆ.16ರಂದು ಪಿಲಿಕುಳದಲ್ಲಿ ‘ಆಟಿಕೂಟ’ ಕಾರ್ಯಕ್ರಮ ನಶಿಸಿಹೋಗುತ್ತಿರುವ ‘ಹೌಂದೇರಾಯನ ಓಲಗ’ ಜಾನಪದ ನೃತ್ಯ ಪ್ರದರ್ಶನ

ಮಂಗಳೂರು: ಪಿಲಿಕುಳ ಸಂಸ್ಕೃತಿ ಗ್ರಾಮದ ಗುತ್ತು ಮನೆಯಲ್ಲಿ ಆ.16ರಂದು ಸಾಂಪ್ರದಾಯಿಕ ‘ಆಟಿಕೂಟ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಅಂದು ಬೆಳಗ್ಗೆ 11ರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಉಡುಪಿ ಜಿಲ್ಲೆಯ ಸಾಲಿಗ್ರಾಮದ ಪಾರಂಪಳ್ಳಿ ಶ್ರೀ ಗುರು ಮಾರುತಿ ಹೌಂದೇರಾಯನ ಜನಪದ ನೃತ್ಯ ತಂಡದಿಂದ ನಶಿಸಿಹೋಗುತ್ತಿರುವ ವಿಶಿಷ್ಟ ಜಾನಪದ ನೃತ್ಯ ಪ್ರಕಾರವಾದ ‘ಹೌಂದೇರಾಯನ ಓಲಗ’ವನ್ನು ಪ್ರಸ್ತುತಪಡಿಸಲಾಗುವುದು. ಜನಪದ ಕಲೆ, ಆಚರಣೆ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಈ…

Read More

ಆ.20ರಂದು ಮಂಗಳೂರಿನಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆ

ಮಂಗಳೂರು:ಯುವಜನತೆಯಲ್ಲಿ ಕೊಂಕಣಿ ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕೊಂಕಣಿ ಮಾನ್ಯತಾ ದಿವಸದ ಅಂಗವಾಗಿ ಆ.20ರಂದು ಬೆಳಗ್ಗೆ 9ಕ್ಕೆ ವಿಶ್ವ ಕೊಂಕಣಿ ಕೇಂದ್ರದಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆ ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಡಾ. ಕಸ್ತೂರಿ ಮೋಹನ್ ಪೈ ತಿಳಿಸಿದ್ದಾರೆ. ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನ ಸುತ್ತಮುತ್ತಲಿನ ಪ್ರೌಢಶಾಲೆಗಳ 6ರಿಂದ 10ನೇ ತರಗತಿಯ ವಿದ್ಯಾರ್ಥಿಗಳನ್ನು ಒಳಗೊಂಡ 10…

Read More

ಮಂಗಳೂರಿನಲ್ಲಿ ಸ್ಯಾಟಲೈಟ್‌ ಫೋನ್‌ಗೆ ಉತ್ತಮ ಸ್ಪಂದನೆ

ಮಂಗಳೂರು: ಭಾರತ್‌ ಸಂಚಾರ ನಿಗಮ್‌ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌) ಇತ್ತೀಚೆಗೆ ಪರಿಚಯಿಸಿರುವ ವಿಶೇಷ ಸ್ಯಾಟಲೈಟ್‌ ಫೋನ್‌ ಸೇವೆಗೆ ಮಂಗಳೂರಿನಲ್ಲೂ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಬಿಎಸ್‌ಎನ್‌ಎಲ್‌ ಮಂಗಳೂರು ವಿಭಾಗದ ಮಹಾ ಪ್ರಬಂಧಕ ಹೇಮಂತ್‌ ಸದಾಶಿವ ಬೊರಲೆ ತಿಳಿಸಿದ್ದಾರೆ. ಬಿಎಸ್‌ಎನ್‌ಎಲ್‌ ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಂಪ್ರದಾಯಿಕ ಮೊಬೈಲ್‌ ಜಾಲ, ಬ್ರಾಡ್‌ಬ್ಯಾಂಡ್‌ ಅಥವಾ ಭೂಆಧಾರಿತ ಸಂವಹನ ಸೌಲಭ್ಯಗಳಿಲ್ಲದ ಪ್ರದೇಶಗಳಲ್ಲಿಯೂ ಸ್ಯಾಟಲೈಟ್‌ ಫೋನ್‌ ಸೇವೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ. ದುರ್ಗಮ ಪ್ರದೇಶಗಳು, ವಿಪತ್ತು ನಿರ್ವಹಣೆ, ತುರ್ತು ಪ್ರತಿಕ್ರಿಯೆ ಹಾಗೂ ಪ್ರಮುಖ…

Read More

ಮಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಪೊಲೀಸ್ ಬಿಸಿ

ಮಂಗಳೂರು, ಆ.14: ರಸ್ತೆ ಅಪಘಾತಗಳನ್ನು ತಡೆಗಟ್ಟುವ, ಸಂಚಾರ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಹಾಗೂ ವಾಹನಗಳ ಸುಗಮ ಸಂಚಾರವನ್ನು ಖಚಿತಪಡಿಸುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ವಿಶೇಷ ಸಂಚಾರ ಕಾರ್ಯಾಚರಣೆಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಈ ಕಾರ್ಯಾಚರಣೆಯ ಭಾಗವಾಗಿ ಪಾದಚಾರಿಗಳ ಸುರಕ್ಷತೆ ಮತ್ತು ಸಾರ್ವಜನಿಕ ವಾಹನಗಳ ನಿರ್ಬಂಧರಹಿತ ಸಂಚಾರಕ್ಕೆ ಅಡ್ಡಿಯಾಗುವ ನೋ-ಪಾರ್ಕಿಂಗ್, ಫುಟ್‌ಪಾತ್ ಪಾರ್ಕಿಂಗ್, ಅನಧಿಕೃತ ಪಾರ್ಕಿಂಗ್, ಎರಡು ಬದಿಗಳಲ್ಲಿ ವಾಹನ ನಿಲುಗಡೆ ಸೇರಿದಂತೆ ವಿವಿಧ ಪಾರ್ಕಿಂಗ್ ನಿಯಮ ಉಲ್ಲಂಘನೆಗಳ ವಿರುದ್ಧ ಜೂನ್ 2026ರಿಂದ ಇದುವರೆಗೆ ಒಟ್ಟು…

Read More

ಉಡುಪಿ ಜಿಲ್ಲೆಯಲ್ಲಿ ಹಿಂದೂಗಳ ಧ್ವನಿ ಅಡಗಿಸುವ ಪ್ರಯತ್ನ ಖಂಡನೀಯ : ಶ್ರೀಮತಿ ರಮಿತಾ ಸೂರ್ಯವಂಶಿ

ಹಿಂದೂ ಸಂಘಟನೆಯ ವತಿಯಿಂದ ನಡೆಯುವ ಅಖಂಡ ಭಾರತ ಪಂಜಿನ ಮೆರವಣಿಗೆ ಕಾರ್ಯಕ್ರಮಕ್ಕೆ ಪ್ರಮುಖ ಭಾಷಣಕಾರರಾಗಿ ಬರಬೇಕಾಗಿದ್ದ ಬಜರಂಗದಳದ ಮುಖಂಡ ಪುನೀತ್ ಅತ್ತಾವರ ಹಾಗೂ ಹಿಂದೂ ಜಾಗರಣ ವೇದಿಕೆಯ ಮುಖಂಡ ನರಸಿಂಹ ಮಾಣಿ ಅವರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿರುವ ಜಿಲ್ಲಾಡಳಿತದ ನಡೆ ತೀವ್ರ ಖಂಡನೀಯ. ರಾಜ್ಯ ಸರ್ಕಾರವು ಜಿಲ್ಲಾಡಳಿತವನ್ನು ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದ್ದು, ತನ್ನ ಹಿಂದೂ ವಿರೋಧಿ ನೀತಿಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತಿದೆ. ಸರ್ಕಾರವು ಪದೇ ಪದೇ ನಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದು, ಇಂತಹ…

Read More

ಪಿಂಚಣಿದಾರರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಉಡುಪಿ: ಭವಿಷ್ಯ ನಿಧಿ ಪಿಂಚಣಿದಾರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಭವಿಷ್ಯ ನಿಧಿ ಪಿಂಚಣಿದಾರರ ಉಡುಪಿ ವಲಯ ಸಮಿತಿ (ಸಿಐಟಿಯು) ನೇತೃತ್ವದಲ್ಲಿ ಗುರುವಾರ ನಗರದ ಭವಿಷ್ಯ ನಿಧಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.ಪ್ರತಿಭಟನಾಕಾರರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು. ಬಳಿಕ ಪಿಂಚಣಿದಾರರು ಎದುರಿಸುತ್ತಿರುವ ಸ್ಥಳೀಯ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಪ್ರತಿಭಟನಾ ಸಭೆಯಲ್ಲಿ ಸೌತ್ ಕೆನರಾ ಬೀಡಿ ವರ್ಕರ್ಸ್ ಫೆಡರೇಶನ್ ಜಿಲ್ಲಾ ಅಧ್ಯಕ್ಷ ಸುಕುಮಾರ್ ತೊಕ್ಕೊಟ್ಟು ಹಾಗೂ ಉಡುಪಿ ಜಿಲ್ಲಾ ಹಂಚು ಕಾರ್ಮಿಕರ…

Read More

ವಿಶ್ವವಿದ್ಯಾಲಯ ಕಾಲೇಜು ಮಂಗಳೂರಿನಲ್ಲಿ ಕಾಲೇಜಿನಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು:ನಗರದ ಪ್ರತಿಷ್ಠಿತ ಯುನಿವರ್ಸಿಟಿ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15ರಂದು ಸಂಭ್ರಮದಿಂದ ಆಚರಿಸಲಾಗುವುದು. ಆ.15ರಂದು ಬೆಳಿಗ್ಗೆ 9 ಗಂಟೆಗೆ ಕಾಲೇಜು ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯವಂತ ನಾಯಕ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ನಿವೃತ್ತ ಭಾರತೀಯ ಸೇನೆಯ ಕರ್ನಲ್ ಮನೋಜ್ ಆರ್. ಅವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಎನ್‌ಸಿಸಿ ಆರ್ಮಿ ವಿಭಾಗದ ಎಎನ್‌ಒ *ಮೇಜರ್ ಡಾ. ಜಯರಾಜ್ ಎನ್., ದೈಹಿಕ ಶಿಕ್ಷಣ ವಿಭಾಗದ **ಡಾ. ಹರಿದಾಸ ಕೂಳೂರು, ಎನ್‌ಸಿಸಿ ನೌಕಾ ವಿಭಾಗದ ಎಎನ್‌ಒ…

Read More

ಯಕ್ಷಗಾನ ಅಕಾಡೆಮಿಯ ಯಕ್ಷಸಿರಿ ಪ್ರಶಸ್ತಿಗೆ ಬಂಟ್ವಾಳ ತಾಲೂಕಿನ ದುರ್ಗಾಪರಮೇಶ್ವರಿ ಕುಕ್ಕಿಲ ಆಯ್ಕೆ

ಈ ಬಾರಿ ಯಕ್ಷಗಾನ ಅಕಾಡೆಮಿ ಘೋಷಿಸಿರುವ ಯಕ್ಷಸಿರಿ ಪ್ರಶಸ್ತಿಗೆ ಬಂಟ್ವಾಳ ತಾಲೂಕಿನ ಕೋಡಪದವು ಕುಕ್ಕಿಲ ನಿವಾಸಿ ಪರಂಪರೆಯ ಶೈಲಿಯ ಹವ್ಯಾಸಿ ಭಾಗವತೆ ದುರ್ಗಾಪರಮೇಶ್ವರಿ ಕುಕ್ಕಿಲ ಆಯ್ಕೆಗೊಂಡಿದ್ದಾರೆ. ಸುಮಾರು 39 ವರ್ಷಗಳಿಂದ ಯಕ್ಷಗಾನದಲ್ಲಿ ತೊಡಗಿಸಿಕೊಂಡಿರುವ 55 ವರ್ಷದ ಹವ್ಯಾಸಿ ಮಹಿಳಾ ಭಾಗವತೆ ದುರ್ಗಾಪರಮೇಶ್ವರಿ ಕುಕ್ಕಿಲ ಅವರು ಪ್ರಸಿದ್ಧ ಭಾಗವತ ಮಾಂಬಾಡಿ ನಾರಾಯಣ ಭಾಗವತರ ಮೊಮ್ಮಗಳು (ಮಗಳ ಮಗಳು). ಹಾಗೂ ಬಂಟ್ವಾಳ ತಾಲೂಕಿನ ಕೋಡಪದವು ನಿವಾಸಿ ಪ್ರಗತಿಪರ ಕೃಷಿಕ ಪುರಂದರವಿಠಲ ಕುಕ್ಕಿಲ ಅವರ ಪತ್ನಿ.ಕಾಸರಗೋಡು ಜಿಲ್ಲೆಯ ಬಾಯಾರು ಗ್ರಾಮದ ಕೆರೆಮೂಲೆ…

Read More
error: Content is protected !!