ಮಳೆಗಾಲಕ್ಕೆ ಪೂರ್ವಸಿದ್ಧತೆ: ಅವಘಡ ತಡೆಗೆ ಸಮನ್ವಯ ಕ್ರಮ ಕೈಗೊಳ್ಳಲು ಶಾಸಕ ವೇದವ್ಯಾಸ ಕಾಮತ್ ಸೂಚನೆ

ಮುಂಬರಲಿರುವ ಮಳೆಗಾಲದಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಅವಘಡಕ್ಕೆ ಆಸ್ಪದವಿಲ್ಲದಂತೆ ಸಕಲ ಸಿದ್ದತೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಪಾಲಿಕೆಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯು ನಡೆಯಿತು. ಕಳೆದ ಮಳೆಗಾಲದಲ್ಲಿ ಮ.ನ.ಪಾ ವ್ಯಾಪ್ತಿಯ ಹಲವೆಡೆ ಅಪಾರ ಪ್ರಮಾಣದ ಹಾನಿಯುಂಟಾಗಿದ್ದನ್ನು ಗಮನದಲ್ಲಿಟ್ಟುಕೊಂಡು ನೆರೆ ಪರಿಸ್ಥಿತಿಗೆ ಕಾರಣ, ಪ್ರವಾಹ ಮರುಕಳಿಸದಂತೆ ತುರ್ತಾಗಿ ನಡೆಯಬೇಕಿರುವ ಕಾರ್ಯ ಇತ್ಯಾದಿ ವಿಷಯಗಳ ಬಗ್ಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು….

Read More

ಕೊಳ್ನಾಡು ಕುಳಾಲು ಆರೋಗ್ಯ ಉಪಕೇಂದ್ರಕ್ಕೆ ₹65 ಲಕ್ಷ ನೂತನ ಕಟ್ಟಡ ಮಂಜೂರು

ಬಂಟ್ವಾಳ: ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಶಿಫಾರಸ್ಸಿನಲ್ಲಿ ಕೊಳ್ನಾಡು ಕುಳಾಲು ಆರೋಗ್ಯ ಉಪಕೇಂದ್ರಕ್ಕೆ(ಆರೋಗ್ಯ ಮತ್ತು ಕ್ಷೇಮಕೇಂದ್ರ) ₹65 ಲಕ್ಷದ ನೂತನ ಕಟ್ಟಡ ಮಂಜೂರು ಶ್ರೀ‌.ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ಬೇಡಿಕೆಗೆ ಸ್ಪಂದಿಸಿ ಕೊಳ್ನಾಡು ಗ್ರಾಮಕ್ಕೆ ಆರೋಗ್ಯ ಸೇವೆಗಳ ಬಲವರ್ಧನೆಗೆ ಮಹತ್ವದ ಹೆಜ್ಜೆಯಾಗಿ ಪ್ರಾಥಮಿಕ ಆರೋಗ್ಯ ಉಪಕೇಂದ್ರದ ನೂತನ ಕಟ್ಟಡಕ್ಕೆ ₹65 ಲಕ್ಷ ಮಂಜೂರಾಗಿದೆ. ವಿಧಾನಪರಿಷತ್ ಶಾಸಕರಾದ ಮಂಜುನಾಥ ಭಂಡಾರಿಯವರ ಶಿಪಾರಸ್ಸಿನ ಮೇರೆಗೆ ಈ ಯೋಜನೆಗೆ ವೇಗ ಸಿಕ್ಕಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ನಿರ್ಮಾಣ…

Read More

ರೈಲಿನಲ್ಲೇ ಹೆರಿಗೆ ನೋವಿನಿಂದ ಬಳಲಿದ ಗರ್ಭಿಣಿಗೆ ಮಹಿಳೆಯರ ನೆರವು: ಬಂಟ್ವಾಳ ಸಮೀಪ ತಾಯಿ-ಮಗು ರಕ್ಷಣೆ

ಕಾರವಾರ ಮಂಗಳೂರು ಬೆಂಗಳೂರು ಮಧ್ಯೆ ಚಲಿಸುತ್ತಿದ್ದ ರೈಲಲ್ಲಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಅದೇ ರೈಲಲ್ಲಿ ಪ್ರಯಾಣಿಸುತ್ತಿದ್ದ ಕೆಲವು ಮಹಿಳೆಯರು ಸೇರಿ ಹೆರಿಗೆ ಮಾಡಿಸಿದ ಘಟನೆ ಮಂಗಳೂರಿನ ಬಂಟ್ವಾಳ ಸಮೀಪದ ಬಿಸಿರೋಡ್ ಬಳಿ ನಡೆದಿದೆ. ಮಂಗಳೂರು ಜಂಕ್ಷನ್‌ನಿಂದ ಹೊರಟ ರೈಲಿನಲ್ಲಿ ಮೈಸೂರು ಮೂಲದ ತುಂಬು ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿತ್ತು. ರೈಲು ಬಿ.ಸಿ.ರೋಡ್ ತಲುಪಿದಾಗ ಗರ್ಭಿಣಿಗೆ ತೀವ್ರ ರಕ್ತಸ್ರಾವವಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ರೈಲು ಸಂಚಾರವನ್ನು ಸ್ಥಗಿತಗೊಳಿಸಿ ಸುಮಾರು 30 ನಿಮಿಷಗಳ ಕಾಲ ವೈದ್ಯರಿಗಾಗಿ ಕಾಯಲಾಯಿತು. ಆದರೆ…

Read More

ಕನಿಲ ಶ್ರೀ ಭಗವತೀ ಕ್ಷೇತ್ರದಲ್ಲಿ ಅದ್ದೂರಿಯಾಗಿ ನಡೆದ ಬ್ರಹ್ಮಕಲಶಾಭಿಷೇಕೋತ್ಸವ – ಭರಣಿ ಮಹೋತ್ಸವಕ್ಕೆ ಸಜ್ಜು

ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕೇಂದ್ರ ಕನಿಲ ಶ್ರೀ ಭಗವತೀ ಕ್ಷೇತ್ರದಲ್ಲಿ ಶ್ರೀ ಭಗವತೀ ಮಾತೆ ಹಾಗೂ ಪರಿವಾರ ದೈವಗಳ ಪುನರ್‌ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕೋತ್ಸವವು ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ನೆರವೇರಿತು.ಬಡಾಜೆ ಬೂಡು ಶ್ರೀ ಮಹಾಗಣಪತಿ ದೇವರ ಅನುಗ್ರಹದಿಂದ ಹಾಗೂ ಬ್ರಹ್ಮಶ್ರೀ ಬಡಾಜೆ ಗೋಪಾಲಕೃಷ್ಣ ತಂತ್ರಿ ಅವರ ದಿವ್ಯಹಸ್ತದಿಂದ, ಡಾ ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ಏಪ್ರಿಲ್ 18ರಿಂದ 23ರವರೆಗೆ ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವವು ಜರುಗಿತು ಏಪ್ರಿಲ್ 18ರಂದು ಹಸಿರು ಹೊರೆಕಾಣಿಕೆ…

Read More

ಸಹ್ಯಾದ್ರಿ ಕಾಲೇಜು–ಕ್ರೈಸ್ಟ್ ವಿಶ್ವವಿದ್ಯಾಲಯ ನಡುವೆ ಒಪ್ಪಂದ – ಹೊಸ ಕೋರ್ಸ್‌ಗಳ ಆರಂಭ

ಕ್ರೈಸ್ಟ್ ವಿಶ್ವವಿದ್ಯಾಲಯ ಮತ್ತು ಅದರ ಅಂಗ ಸಂಸ್ಥೆಯಾದ ಕ್ರೈಸ್ಟ್ ಇಂಕ್ಯುಬೇಷನ್ ಅಂಡ್ ಕನ್ಸಲ್ಟೆನ್ಸಿ ಫೌಂಡೇಶನ್ (CICF) ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ನಡುವೆ ಕನ್ಸಲ್ಟೆನ್ಸಿ ಒಪ್ಪಂದ (MoU) ನಗರದ ಅಡ್ಯಾರ್ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಇಂದು ನಡೆಯಿತ್ತು . ಈ ಸಂದರ್ಭದಲ್ಲಿ ಸಹ್ಯಾದ್ರಿ ಕಾಲೇಜಿನ ಅಧ್ಯಕ್ಷರಾದ ಮಂಜುನಾಥ್ ಭಂಡಾರಿ ಮಾತನಾಡಿ , ಶೈಕ್ಷಣಿಕ ವರ್ಷ 2026-27ನೇ ಸಾಲಿನಿಂದ ಹೊಸ ಕೋರ್ಸ್‌ಗಳಾದ ಬ್ಯಾಚುಲರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಶನ್ (BBA) , ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ (BCA) ,ಮಾಸ್ಟರ್…

Read More

ಅಕ್ರಮ ಮರಳು ದಂಧೆ: ಇಬ್ಬರ ಬಂಧನ – ಲಾರಿ ವಶಕ್ಕೆ

ಕಾಸರಗೋಡು ಜಿಲ್ಲೆಯ ಮಂಜೇಶ್ವರ ವ್ಯಾಪ್ತಿಯಲ್ಲಿ ಅಕ್ರಮವಾಗಿ ನದಿಯಿಂದ ಮರಳು ಕದ್ದೊಯ್ಯುತ್ತಿದ್ದ ಇಬ್ಬರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಅಮೀನಡ್ಕ ಕಲ್ಲಿಗೆ ಹೌಸ್‌ನ ಸದಾನಂದ (55) ಹಾಗೂ ಟಿಪ್ಪರ್ ಲಾರಿ ಚಾಲಕ ಬಡಾಜೆ ಕನಿಲ ಹೌಸ್‌ನ ಸಾಕೀರ್ (31) ಬಂಧಿತರು. ಪೊಲೀಸ್ ಉಪನಿರೀಕ್ಷಕ ವೈಷ್ಣವ್ ರಾಮಚಂದ್ರ ಅವರ ನೇತೃತ್ವದಲ್ಲಿ ಶುಕ್ರವಾರ ಮಧ್ಯರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ಮರಳು ಸಾಗಣೆಗೆ ಬಳಸಿದ್ದ ಟಿಪ್ಪರ್ ಲಾರಿಯನ್ನೂ ವಶಪಡಿಸಿಕೊಳ್ಳಲಾಗಿದೆ. ಪೊಲೀಸರ ಪ್ರಕಾರ, ಅಕ್ರಮ ಮರಳು ದಂಧೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಹಲವು ಬಾರಿ ಎಚ್ಚರಿಕೆ…

Read More

ಡಿಪ್ಲೊಮಾ ಸಿವಿಲ್ ಇಂಜಿನಿಯರ್‌ಗಳ ಹೋರಾಟ ಯಶಸ್ವಿ – ಏಪ್ರಿಲ್ 27ರಂದು ಕೃತಜ್ಞತಾ ಸಮಾರಂಭ

ಎಂ.ಸಿ.ಸಿ ರಿಜಿಸ್ಟರ್ ಡಿಪ್ಲೊಮಾ ಸಿವಿಲ್ ಇಂಜಿನಿಯರ್ಸ್ ಹಾಗೂ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್‌ ಇಂಜಿನಿಯ‌ರ್ಸ್ (ಇಂ) ಮಂಗಳೂರು ಕೇಂದ್ರ ಇದರ ಸಹಯೋಗದೊಂದಿಗೆ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನೋಂದಾಯಿತ ವೃತ್ತಿಪರ ಡಿಪ್ಲೊಮಾ ಸಿವಿಲ್ ಇಂಜಿನಿಯರ್‌ಗಳ ಮೇಲಿನ ನಿರ್ಬಂಧಗಳಿಗೆ ತಿದ್ದುಪಡಿ ತರಲು ನಡೆದ ಹೋರಾಟ ಯಶಸ್ವಿ ಸಿಕ್ಕಿದ್ದು ಇದಕ್ಕೆ ಕಾರಣಕರ್ತರಾದ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಹಾಗೂ ಶಾಸಕ ಡಿ ವೇದವ್ಯಾಸ ಕಾಮತ್ ಗೆ ಕೃತಜ್ಞತಾ ಸಮರ್ಪಣಾ ಸಮಾರಂಭವು ಎಪ್ರಿಲ್ 27 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂಜೆ…

Read More

ಭಂಡಾರ ಮೆರವಣಿಗೆಯಲ್ಲಿ ಅವಘಡ – ಎಂಟು ಮಂದಿಗೆ ಗಾಯ

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರಿ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಪ್ರದೇಶದಲ್ಲಿ ದೈವದ ಭಂಡಾರ ಮೆರವಣಿಗೆಯ ವೇಳೆ ಕಾಲು ಸಂಕ ಮುರಿದು ಭಾರೀ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಟ್ಟು ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಕೋಡೆ ಬರ್ಕೆ ಧರ್ಮನೇಮಕ್ಕೆ ದೈವದ ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆಯಲ್ಲಿ ಸಾಗಿಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಕೊಂಬು ಹಾಗೂ ಬ್ಯಾಂಡ್ ವಾದ್ಯಗಳೊಂದಿಗೆ ಭಂಡಾರದ ಮೆರವಣಿಗೆ ನಡೆಯುತ್ತಿದ್ದು, ಏಕಾಏಕಿ ಕಾಲು ಸಂಕ ಮುರಿದು ಪಲ್ಲಕ್ಕಿ ಉರುಳಿ ಬಿದ್ದಿದೆ. ಪರಿಣಾಮವಾಗಿ…

Read More

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಯಿಸಿದ ಪ್ರಕರಣ – ಮೂವರು ಅಧಿಕಾರಿಗಳು ಅಮಾನತು

ಬೆಂಗಳೂರುನಲ್ಲಿ ನಡೆದ ಸಿಇಟಿ ಪರೀಕ್ಷೆಯ ವೇಳೆ ಬ್ರಾಹ್ಮಣ ವಿದ್ಯಾರ್ಥಿಯೊಬ್ಬರಿಂದ ಜನಿವಾರ ತೆಗೆಯಿಸಿದ ಘಟನೆ ಬೆಳಕಿಗೆ ಬಂದಿದ್ದು, ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ಬಗ್ಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಪಿ ಎಂ ಮಾಲತೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿ ತಕ್ಷಣ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ. ಸುಧಾಕರ್ ಅವರನ್ನು ಸಂಪರ್ಕಿಸಿ ಘಟನೆಯ ವಿವರಗಳನ್ನು ತಿಳಿಸಲಾಗಿದ್ದು, ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಸೂಕ್ತ ಮತ್ತು ಕಠಿಣ ಕ್ರಮ…

Read More

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಮಂಗಳೂರು: ಕರಾವಳಿಯ ವಾಣಿಜ್ಯ ಚಟುವಟಿಕೆಗಳಿಗೆ ಹೊಸ ಆಯಾಮ ನೀಡುವ ಮಹತ್ವದ ಬೆಳವಣಿಗೆಯೊಂದರಲ್ಲಿ, ರೋಹನ್ ಕಾರ್ಪೊರೇಷನ್ ಹಾಗೂ ‘ರೇನ್ ಮೇಕರ್ಸ್ ವರ್ಕ್‌ಸ್ಪೇಸ್’ ನಡುವೆ ಕಾರ್ಯಾಲಯ (Work Space) ಸ್ಥಾಪನೆಗಾಗಿ ಸಂಯುಕ್ತ ಒಕ್ಕೂಟ (Joint Venture) ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಒಪ್ಪಂದದ ಅನ್ವಯ ರೋಹನ್ ಸ್ಕ್ವೇರ್ ಕಟ್ಟಡದ 4ನೇ ಮಹಡಿಯಲ್ಲಿ ಅತ್ಯಾಧುನಿಕ ವರ್ಕ್‌ಸ್ಪೇಸ್ ಶೀಘ್ರದಲ್ಲೇ ಕಾರ್ಯಾರಂಭಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ರೋಹನ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೆರೋ ಮತ್ತು ನಿರ್ದೇಶಕ ಡಿಯೋನ್ ಮೊಂತೆರೋ ಅವರು, ರೇನ್ ಮೇಕರ್ಸ್…

Read More
error: Content is protected !!