ಋತುಚಕ್ರ ರಜೆ ಘೋಷಣೆ ಹಿನ್ನೆಲೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರನ್ನು ಸನ್ಮಾನಿಸಿ, ಕೃತಜ್ಞತೆ ಸಲ್ಲಿಸಿದ ಮಹಿಳಾ ನೌಕರರ ಸಂಘ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ವಾರ್ಷಿಕ 12 ಋತುಚಕ್ರ ರಜೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು. ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಸಂಘದ ಅಧ್ಯಕ್ಷರಾದ ರೋಷಿನಿಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಶಶಿಕಲಾ, ಈ ನಿರ್ಧಾರಕ್ಕಾಗಿ ಧನ್ಯವಾದ ಅರ್ಪಿಸಿದರು. ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಇಂತಹ ತೀರ್ಮಾನ…

Read More

ಅಕ್ಟೋಬರ್ 31 ರಿಂದ ನವೆಂಬರ್ 2, 2025 ರವರೆಗೆ ಮಂಗಳೂರಿನಲ್ಲಿ ನಡೆಯಲಿರುವ ರೇಡಿಯೋಗ್ರಾಫರ್‌ಗಳು ಮತ್ತು ಇಮೇಜಿಂಗ್ ತಂತ್ರಜ್ಞರ ರಾಷ್ಟ್ರೀಯ ಸಮ್ಮೇಳನ

ಮಂಗಳೂರು: ಮಣಿಪಾಲ ಅಕಾಡೆಮಿ ಆಫ್ ಹೈಯ‌ರ್ ಎಜುಕೇಶನ್ (MAHE) ಅಡಿಯಲ್ಲಿ ಬರುವ ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು (KMC), ಅಕ್ಟೋಬರ್ 31 ರಿಂದ ನವೆಂಬರ್ 2, 2025 ರವರೆಗೆ ಮಂಗಳೂರಿನ ಡಾ. ಟಿ.ಎಂ.ಎ. ಪೈ ಯಲ್ಲಿ IMAGINE 2025 23 ನೇ ರಾಷ್ಟ್ರೀಯ ರೇಡಿಯೋಗ್ರಾಫರ್‌ಗಳು ಮತ್ತು ಇಮೇಜಿಂಗ್ ತಂತ್ರಜ್ಞರ ಸಮ್ಮೇಳನವನ್ನು ಆಯೋಜಿಸಲಿದೆ. ಕೆಎಂಸಿ ಮಂಗಳೂರಿನ ರೇಡಿಯೋ ಡಯಾಗೋಸಿಸ್ ಮತ್ತು ಇಮೇಜಿಂಗ್ ವಿಭಾಗವು ರಾಷ್ಟ್ರೀಯ ಭಾರತೀಯ ರೇಡಿಯೋಗ್ರಾಫರ್‌ಗಳ ಸಂಘ (SIR) ಸಹಯೋಗದೊಂದಿಗೆ ಆಯೋಜಿಸಿರುವ ಈ ಸಮ್ಮೇಳನವು ಭಾರತದಾದ್ಯಂತದ 700…

Read More

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಬೆಂಗಳೂರು : ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಮ್ಮ ಯುವ ಶಕ್ತಿ, ವಿದ್ಯಾರ್ಥಿ ಯುವಜನರ ಚೈತನ್ಯ…

Read More

ಕಾಸರಗೋಡು ಜಿಲ್ಲಾ ವಿಜ್ಞಾನೋತ್ಸವ : ಮಂಜೇಶ್ವರದ ಇಬ್ರಾಹಿಂ ಶಾಹಿದ್ ರಾಜ್ಯ ಮಟ್ಟಕ್ಕೆ ಆಯ್ಕೆ

ಮಂಜೇಶ್ವರ: ಮಂಜೇಶ್ವರ ಸಿರಾಜುಲ್ ಹುದಾ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಇಬ್ರಾಹಿಂ ಶಾಹಿದ್ ಎಚ್ 2025–26 ಶೈಕ್ಷಣಿಕ ವರ್ಷದ ಕಾಸರಗೋಡು ಜಿಲ್ಲಾ ಮಟ್ಟದ ಶಾಸ್ತ್ರೋತ್ಸವದಲ್ಲಿ ವೆಬ್‌ಪೇಜ್ ಡಿಸೈನಿಂಗ್ ವಿಭಾಗದಲ್ಲಿ ವಿಜಯ ಸಾಧಿಸಿ. ಇದೀಗ ಈ ಪೋರ ಕೇರಳ ರಾಜ್ಯ ಮಟ್ಟದ ಐಟಿ ಫೇರ್ ಗೆ ಆಯ್ಕೆಗೊಂಡಿದ್ದಾನೆ. ಮಂಜೇಶ್ವರ ಚೌಕಿ ನಿವಾಸಿ, ಸಮಾಜ ಸೇವಕ ಹಾಗೂ ದೃಶ್ಯ ಮಾಧ್ಯಮ ಕ್ಯಾಮರಾಮ್ಯಾನ್ ಮೊಹಮ್ಮದ್ ಹನೀಫ್ ಶಾರ್ಜಾ ಹಾಗೂ ಕದೀಜಾ ದಂಪತಿಗಳ ಪುತ್ರನಾದ ಇಬ್ರಾಹಿಂ ಶಾಹಿದ್, ಬಾಲ್ಯದಿಂದಲೇ ತಾಂತ್ರಿಕ ಕ್ಷೇತ್ರದ ಮೇಲೆ…

Read More

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್.ರಘುನಾಥ್ಜಿಲ್ಲಾ ಪ್ರತಿನಿಧಿ ನ್ಯಾಯವಾದಿ ಮಹೇಶ್ ಕಜೆ ಗೃಹ ಭೇಟಿ….!

ಪುತ್ತೂರು:ಕರ್ನಾಟಕ ಬ್ರಾಹ್ಮಣ ಸಮುದಾಯದ ಸಂಘಟನೆಯಾದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ಎಕೆಬಿಎಂಎಸ್)ದ ನೂತನ ಅಧ್ಯಕ್ಷ ಎಸ್.ರಘುನಾಥ್‌ರವರು ಅ.೨೫ರಂದು ಸಂಜೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಪ್ರತಿನಿಧಿ,ಪುತ್ತೂರು ಕಜೆ ಲಾ ಛೇಂಬರ‍್ಸ್‌ನ ಮುಖ್ಯಸ್ಥರಾಗಿರುವ ನ್ಯಾಯವಾದಿ ಮಹೇಶ್ ಕಜೆ ಅವರ ಮನೆಗೆ ಭೇಟಿ ನೀಡಿದರು.ಮಹೇಶ್ ಕಜೆ ಮತ್ತು ದೀಪಿಕಾ ಕಜೆ ದಂಪತಿ ಎಸ್.ರಘುನಾಥ್‌ರವರನ್ನು ಸ್ವಾಗತಿಸಿ ಶಾಲು, ಹೂಗುಚ್ಚ ನೀಡಿ ಸನ್ಮಾನಿಸಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ರಘುನಾಥ್ ಎಸ್.ಅವರು ಈ ಸಂದರ್ಭ ಮಾತನಾಡಿ, ಅಖಿಲ ಕರ್ನಾಟಕ ಮಹಾಸಭಾಕ್ಕೆ ಚುನಾವಣೆ…

Read More

ಅಡಿಕೆಗೆ ಹಳದಿ ರೋಗ ಬಾಧಿತ ಪ್ರದೇಶದಲ್ಲಿ ಪರ್ಯಾಯ ಬೆಳೆ ಬೆಳೆಸುವುದೇ ಸವಾಲು; ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಶತರುದ್ರ ಸೇವೆಯಲ್ಲಿ ಪಾಲ್ಗೊಂಡ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಅವರು,ದೇವಳದ ಹೊರಾಂಗಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ,ಅಡಿಕೆ ವಿಚಾರವಾಗಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ ಚೌಹಾಣ್‌ ಅವರು ಉನ್ನತ ಮಟ್ಟದ ಸಭೆಯನ್ನು ಈಗಾಗಲೇ ನಡೆಸಿದ್ದಾರೆ. ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗದ ಸಮಸ್ಯೆಯನ್ನೂ ಸಭೆಯಲ್ಲಿ ಉಲ್ಲೇಖಿಸಲಾಗಿದೆ. ರೋಗ ಬಾಧಿತ ಪ್ರದೇಶದಲ್ಲಿ ಮತ್ತೆ ಅಡಿಕೆ ಬೆಳೆಯುವುದಕ್ಕೆ ಸಮಸ್ಯೆಯಿದ್ದು,ಪರಿಹಾರವಾಗಿ ಒನ್ ಟೈಮ್ ಪ್ಯಾಕೇಜ್ ಘೋಷಿಸಬೇಕು ಮತ್ತು ಪರ್ಯಾಯ ಬೆಳೆಯ ಬಗ್ಗೆ ಪ್ರಯತ್ನ ನಡೆಸಬೇಕೆಂಬ ಬೇಡಿಕೆಗಳಿವೆ….

Read More

ಮಂಗಳೂರಿನಲ್ಲಿ ತುರ್ತು ವೈದ್ಯಕೀಯ ಕ್ಷೇತ್ರದ ಜಾಗತಿಕ ಸಂಗಮಕ್ಕೆ ಕಡಲನಗರಿ ಸಾಕ್ಷಿ …. !

ಮಂಗಳೂರು:ವೈದ್ಯಕೀಯ ಬಿಕ್ಕಟ್ಟುಗಳ ಸಮಯದಲಿ ಸಕಾಲಿಕ ರೋಗನಿರ್ಣಯ, ತ್ವರಿತ ಹಸ್ತಕ್ಷೇಪ ಮತ್ತು ಸಂಘಟಿತ ಆರೈಕೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ ಜೀವಗಳನ್ನು ಉಳಿಸುವಲ್ಲಿ ತುರ್ತು ಔಷಧವು ನಿರ್ಣಾಯಕ ಪಾತ್ರ ವಹಿಸುತ್ತದೆ . ತುರ್ತು ಸಂದರ್ಭದಲ್ಲಿ ಪ್ರತಿ ನಿಮಿಷಗಳು ಕೂಡ ಅಮೂಲ್ಯವಾಗಿರುತ್ತದೆ . ವೈದ್ಯಕೀಯ ಕ್ಷೇತ್ರಕ್ಕೆ ಅಗಾಧವಾಗಿ ಕೊಡುಗೆಯನ್ನು ನೀಡುವ ಮಂಗಳೂರಿನಲ್ಲಿ ಅಕ್ಟೋಬರ್ 29 ರಿಂದ ನವೆಂಬರ್ 2 ರ ತನಕ ತುರ್ತು ಔಷಧದ ಕುರಿತು ಐದು ದಿನಗಳ ಬಹುಶಿಸ್ತೀಯ ಅಂತರರಾಷ್ಟ್ರೀಯ ಸಮ್ಮೇಳನವಾದ XI ವರ್ಲ್ಡ್ ಅಕಾಡೆಮಿಕ್ ಕಾಂಗ್ರೆಸ್ ಆಫ್ ಎಮರ್ಜೆನ್ಸಿ ಮೆಡಿಸಿನ್…

Read More

ಮಂಗಳೂರಿನಲ್ಲಿ ಸಿರಿಧಾನ್ಯ ಆಹಾರ ಹಬ್ಬ – 2025

ಮಂಗಳೂರು: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ, “ಸಿರಿಧಾನ್ಯ ಆಹಾರ ಹಬ್ಬ ನವೆಂಬರ್ 1 ಮತ್ತು 2. 2025 ರಂದು ಮಂಗಳೂರು ನಗರದ ಸೇಂಟ್ ಸೆಬಾಸ್ಟಿಯನ್ ಪ್ಲಾಟಿನಮ್ ಜ್ಯೂಬಿಲಿ ಆಡಿಟೋರಿಯಂ, ಸೆಂಟ್ ಆಗ್ನೆಸ್ ಕಾಲೇಜು ಸಮೀಪ, ಬೆಂದೂರ್ವೆಲ್‌ನಲ್ಲಿ ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಉತ್ಸವದ ಸಡಗರದಲ್ಲಿ ನಡೆಯಲಿದೆ ಎಂದು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಇದರ ಅಧ್ಯಕ್ಷರಾದ ಭಾಸ್ಕರ್ ರೈ ಕಟ್ಟಾ ತಿಳಿಸಿದರು . ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಆರೋಗ್ಯಕರ ಜೀವನಶೈಲಿಗೆ ಉತ್ತೇಜನ ನೀಡುವ ಮತ್ತು ಸಿರಿಧಾನ್ಯ ಉತ್ಪಾದನೆ ಮಾಡುವ…

Read More

ಸ್ವೀಕರ್ ಖಾದರ್ ಭ್ರಷ್ಟಾಚಾರದಿಂದ ಸಭಾಪತಿ ಸ್ಥಾನಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡಿದ್ದಾರೆ ; ಶಾಸಕ ಡಾ.ವೈ. ಭರತ್ ಶೆಟ್ಟಿ ಆಕ್ರೋಶ

ಮಂಗಳೂರು: ವಿಧಾನಸಭೆಯ ಸಭಾಧ್ಯಕ್ಷರ ಕಚೇರಿಯಲ್ಲಿ ಆಡಳಿತಾತ್ಮಕ ಸುಧಾರಣೆಯ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿಗಳ ಭ್ರಷ್ಟಾಚಾರ ನಡೆದಿದ್ದಲ್ಲದೆ ಇದಕ್ಕಾಗಿ ದುಂದುವೆಚ್ಚ ಮಾಡಲಾಗಿದೆ. ಈ ಬಗ್ಗೆ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸುವಂತೆ ಮಂಗಳೂರು ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ ಒತ್ತಾಯಿಸಿದರು . ಅವರು ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ವಿಧಾನಸಭೆಯ ಆಡಳಿತವು ಆಡಳಿತಾತ್ಮಕ ಸುಧಾರಣೆ ಹೆಸರಿನಲ್ಲಿ ಭಾರೀ ಅವ್ಯವಹಾರಗಳನ್ನು ನಡೆಸಿದೆ ಎಂಬ ಸಂಶಯಗಳು ಮತ್ತು…

Read More

2011-12ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಹಣ ಸರಕಾರ ಕೂಡಲೇ ನೀಡಲಿ ; ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಜಯಲಕ್ಷ್ಮಿ ಬಿ ಆರ್

ಮಂಗಳೂರು ; ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಕರ್ನಾಟಕ ಇವರ ವತಿಯಿಂದ ನಿವೃತ್ತಿಯಾದ 20, 000ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಕಾಯ್ದೆ 1972ರ ಮತ್ತು ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಪ್ರಕಾರ ಗ್ರಾಚ್ಯುಟಿ ಹಣವನ್ನು ಕೂಡಲೇ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಅನಿರ್ದಿಷ್ಟವಾವಧಿ ಮುಷ್ಕರವನ್ನುಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನವೆಂಬರ್ ೬ ರಂದು ನಡೆಸಲಾಗುವುದೆಂದು ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷರಾದ ಜಯಲಕ್ಷ್ಮಿ ಬಿ ಆರ್ ತಿಳಿಸಿದರು . ಅವರು…

Read More
error: Content is protected !!