ಎನ್.ಎಂ.ಪಿ.ಎ. ಶಾಲೆ ವಿಲೀನ ಯತ್ನಕ್ಕೆ ಬಿ.ಎ. ಮೊಯ್ದೀನ್ ಬಾವಾ ಆಕ್ರೋಶ: ಹೋರಾಟದ ಎಚ್ಚರಿಕೆ
ನವಮಂಗಳೂರು ಬಂದರು ಮಂಡಳಿ (NMPA) ಆಡಳಿತಕ್ಕೆ ಒಳಪಟ್ಟಿರುವ ಹಾಗೂ ಕಳೆದ ನಾಲ್ಕು ದಶಕಗಳಿಂದ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣದ ದಾರಿದೀಪವಾಗಿರುವ ಎನ್.ಎಂ.ಪಿ.ಎ. ಆಂಗ್ಲ ಮಾಧ್ಯಮ ಶಾಲೆಯನ್ನು ವಿಲೀನಗೊಳಿಸುವ ಅಥವಾ ಮುಚ್ಚುವ ಯತ್ನಕ್ಕೆ ಮಾಜಿ ಶಾಸಕ ಬಿ.ಎ. ಮೊಯ್ದೀನ್ ಬಾವಾ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಅಗತ್ಯವಿದ್ದಲ್ಲಿ ಬೀದಿಗಿಳಿದು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ನಡೆದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಶಾಲೆ ಕೇವಲ ಕಟ್ಟಡವಲ್ಲ; ನವಮಂಗಳೂರು ಬಂದರಿಗಾಗಿ ತಮ್ಮ ಭೂಮಿಯನ್ನು ತ್ಯಾಗ…
