Headlines

ನಿಟ್ಟೆ ಶಾಲೆಯಲ್ಲಿ ಮಾದಕ ದ್ರವ್ಯ ಜಾಗೃತಿ ಅಭಿಯಾನ: ವಿದ್ಯಾರ್ಥಿಗಳಿಗೆ ಪೊಲೀಸ್ ಅರಿವು

ಡಾ ll. ಎನ್. ಎಸ್. ಎ. ಎಂ. ಕನ್ನಡ ಮಾಧ್ಯಮ ಪ್ರೌಢ ಶಾಲೆ, ನಿಟ್ಟೆ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಇವರ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು  ಸಂಭ್ರಮ ಶನಿವಾರ ( ಬ್ಯಾಗ್ ರಹಿತ ದಿನ) ವಾಗಿ ಶಾಲೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮಮವನ್ನು ಉದ್ಘಾಟನೆ ಮಾಡಿದ ಕಾರ್ಕಳ ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಪ್ರಸನ್ನ ಎಂ. ಎಸ್. ರವರು ಮಾತನಾಡಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು, ಹಾಗೂ…

Read More

ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ. ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ ಕೋರ್ಸ್ಗೆ ಚಾಲನೆ

ಬೆಂಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಶಾಲೆಯ ಕಂಪ್ಯೂಟರ್ ವಿಜ್ಞಾನ ವಿಭಾಗವು ಹೊಸ ಎಂ.ಎಸ್ಸಿ. ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ (Cybersecurity and Artificial Intelligence) ಸ್ನಾತಕೋತ್ತರ ಕೋರ್ಸ್ಗೆ ಶನಿವಾರ ಚಾಲನೆ ನೀಡಿತು. ವಿಶ್ವವಿದ್ಯಾಲಯದ ಪಿಜಿ ಬ್ಲಾಕ್ನ ಕ್ಸೇವಿಯರ್ ಸಭಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಹೆವ್ಲೆಟ್ ಪ್ಯಾಕರ್ಡ್ ಎಂಟರ್ಪ್ರೈಸ್ (HPE) ಸಂಸ್ಥೆಯ ಭಾರತ, ಏಷ್ಯಾ-ಪೆಸಿಫಿಕ್ ಮತ್ತು ಜಪಾನ್ ವಿಭಾಗದ ಉಪಾಧ್ಯಕ್ಷ ಹಾಗೂ ಪ್ರಾದೇಶಿಕ ಮಾನವ ಸಂಪನ್ಮೂಲ ಮುಖ್ಯಸ್ಥ ಸೈಲೇಶ್ ಎ. ಜೆ. ಮಿನೆಜಸ್ ಮುಖ್ಯ…

Read More

ದಕ್ಷಿಣ ಕನ್ನಡ ಜಿಲ್ಲಾ ಖಾಝಿಯಾಗಿ ಪಾಣಕ್ಕಾಡ್ ಸಯ್ಯದ್ ನಾಸಿರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್ ನೇಮಕ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಅವರ ನಿಧನದಿಂದ ತೆರವಾದ ಜಿಲ್ಲಾ ಖಾಝಿ ಸ್ಥಾನಕ್ಕೆ ಪಾಣಕ್ಕಾಡ್ ಸಯ್ಯದ್ ನಾಸಿರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್ ಬಾ-ಅಲವಿ ಅವರನ್ನು ನೂತನ ಜಿಲ್ಲಾ ಖಾಝಿಯಾಗಿ ನೇಮಕ ಮಾಡಲಾಗಿದೆ ಎಂದು ಸ್ವಾಗತ ಸಮಿತಿಯ ಉಪಾಧ್ಯಕ್ಷ ಹಾಗೂ ಮಾಜಿ ಮೇಯರ್ ಕೆ. ಅಶ್ರಫ್ ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಜಿಲ್ಲಾ ಖಾಝಿಯವರ ಸ್ವೀಕಾರ ಸಮಾರಂಭವು…

Read More

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ – ರೂಪಶ್ರೀ ವರ್ಕಾಡಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಇಂದು ಅಧಿಕೃತವಾಗಿ ಘೋಷಿಸಲಾಗಿದ್ದು, ಈ ಬಾರಿಯೂ ದಕ್ಷಿಣ ಭಾರತದ ಸಿನಿಮಾಗಳು ಪ್ರಮುಖ ವಿಭಾಗಗಳಲ್ಲಿ ಮೇಲುಗೈ ಸಾಧಿಸಿವೆ. ಅದರಲ್ಲೂ ಕನ್ನಡ ಚಿತ್ರರಂಗಕ್ಕೆ ಹೆಮ್ಮೆಯ ಕ್ಷಣ ಸಿಕ್ಕಿದ್ದು, ರಕ್ಷಿತ್ ಶೆಟ್ಟಿ ಹಾಗೂ ಕೆಆರ್‌ಜಿ ಸ್ಟುಡಿಯೋಸ್ ನಿರ್ಮಿಸಿರುವ ‘ಮಿಥ್ಯ’ ಸಿನಿಮಾ ಬರೋಬ್ಬರಿ ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಈ ವರ್ಷದ ಪ್ರಶಸ್ತಿ ಪಟ್ಟಿಯಲ್ಲಿ ‘ಮಿಥ್ಯ’ ಮೂರು ಪ್ರಮುಖ ವಿಭಾಗಗಳಲ್ಲಿ ಗೆಲುವು ಸಾಧಿಸಿದೆ. ಚಿತ್ರದಲ್ಲಿನ ಅದ್ಭುತ ಅಭಿನಯಕ್ಕಾಗಿ ಬಾಲನಟ ಆತಿಶ್ ಶೆಟ್ಟಿ ಅವರಿಗೆ ಅತ್ಯುತ್ತಮ ಬಾಲನಟ…

Read More

ಆಟ ಮರೆತ ಅರ್ಜೆಂಟಿನಾ, ದಾಳಿ ಸಂಪೂರ್ಣ ವಿಫಲ; ಫೈನಲ್‌ನಲ್ಲಿ ಮೆಸ್ಸಿ ಪಡೆ ಏಕೆ ಸೋತಿತು?

ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ವಿರುದ್ಧ ಸೋಲು ಅನುಭವಿಸಿದ ಅರ್ಜೆಂಟಿನಾದ ಪ್ರಶಸ್ತಿ ಕನಸು ಅಂತ್ಯಗೊಂಡಿತು. ಹೆಚ್ಚುವರಿ ಸಮಯದವರೆಗೆ ಸಾಗಿದ ರೋಚಕ ಹೋರಾಟದ ಬಳಿಕ ಅರ್ಜೆಂಟಿನಾ ಸೋಲನ್ನು ಒಪ್ಪಿಕೊಳ್ಳಬೇಕಾಯಿತು. “ಒತ್ತಡವಿಲ್ಲದ ಅರ್ಜೆಂಟಿನಾ” — ವಿಶ್ವಕಪ್‌ಗೂ ಮುನ್ನ ತಂಡದ ಬಗ್ಗೆ ಇದ್ದ ಪ್ರಮುಖ ಅಭಿಪ್ರಾಯ ಇದೇ. ಅಲ್ಜೀರಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಅದಕ್ಕೆ ತಕ್ಕ ಪ್ರದರ್ಶನವನ್ನೂ ತಂಡ ನೀಡಿತ್ತು. ಆಸ್ಟ್ರಿಯಾ ಮತ್ತು ಜೋರ್ಡನ್ ತಂಡಗಳನ್ನು ಸೋಲಿಸಿ ಗುಂಪು ಚಾಂಪಿಯನ್‌ಗಳಾಗಿ ನಾಕೌಟ್ ಹಂತಕ್ಕೇರಿದ ಅರ್ಜೆಂಟಿನಾ, ನಂತರದ ಪಂದ್ಯಗಳಲ್ಲಿ ತನ್ನ ಲಯ ಕಳೆದುಕೊಂಡಿತು….

Read More

ಅವಗಣನೆಯ ಅಂಚಿನಲ್ಲಿ ಒಂದು ಬದುಕು: ನಾಗರಿಕ ಸೌಲಭ್ಯಗಳಿಂದ ವಂಚಿತವಾಗಿರುವ ಪಾವೂರು ಗೇರುಕಟ್ಟೆಯ ಜಿಮ್ಮಿ ಕೊನೇರಿಯ ಕುಟುಂಬದ ನೈಜ ಸ್ಥಿತಿಗತಿ

​ಮಂಜೇಶ್ವರ: ಕೇರಳ ರಾಜ್ಯವು ಅಭಿವೃದ್ಧಿ ಸೂಚ್ಯಂಕಗಳಲ್ಲಿ ಅಗ್ರಸ್ಥಾನದಲ್ಲಿದೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ಹೊತ್ತಿನಲ್ಲೇ, ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಪಾವೂರು ಗೇರುಕಟ್ಟೆಯ ಅರಣ್ಯ ಪ್ರದೇಶದಲ್ಲಿ ನೆಲೆಸಿರುವ ಜಿಮ್ಮಿ ಕೊನೇರಿಯ (37) ಎಂಬುವವರ ಕುಟುಂಬವು ಕನಿಷ್ಠ ನಾಗರಿಕ ಸೌಕರ್ಯಗಳಿಗೂ ಪರದಾಡುತ್ತಿರುವುದು ವ್ಯವಸ್ಥೆಯ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಕಳೆದ ಒಂದು ದಶಕದಿಂದ ಈ ಕುಟುಂಬವು ಕಾಡಿನೊಳಗಿನ ಒಂದು ಮುರುಕು ಗುಡಿಸಲಿನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದೆ. ಬಾಲ್ಯದಲ್ಲೇ ಹೆತ್ತವರನ್ನು ಕಳೆದುಕೊಂಡು ಅನಾಥವಾಗಿ ಬೆಳೆದ ಜಿಮ್ಮಿ, ಇಂದು ಪತ್ನಿ ಲೀಲಾವತಿ ಮತ್ತು ಆರು ವರ್ಷದ…

Read More

ಹಿರಿಯ ಸಾಹಿತಿ ಸತ್ಯವತಿ ಭಟ್ ಕೊಳಚಪ್ಪು ರೀಗೆ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಸಾಹಿತ್ಯ ರತ್ನ “ಪ್ರಶಸ್ತಿ 2026.ಕ್ಕೆ ಆಯ್ಕೆ

ಜೂಲೈ 26ರ ಕನ್ನಡ ಭವನದ “ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಪ್ರಯುಕ್ತ ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಈ ಮೇಲಿನ ಪ್ರಶಸ್ತಿ ನೀಡಲಿದ್ದೆವೆಂದು ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ. ಕೆ. ಏನ್ ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ಕೆ ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸಮಯಪ್ರಜ್ಞೆಯಿಂದ ಜೀವ ಉಳಿಸಿದ ವಿಟ್ಲ ಎಸ್‌ಐ ರಾಮಕೃಷ್ಣ; ಮಾನವೀಯ ಪೊಲೀಸ್ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ

ಬಂಟ್ವಾಳ: ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ ವೇಳೆ ಬೆಳಕಿಗೆ ಬಂದಿದೆ. ಸೂರಿಕುಮೇರ್ ಪೆಟ್ರೋಲ್ ಬಂಕ್ ಬಳಿಯ ಹೋಟೆಲ್ ಮುಂಭಾಗದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿತು. ಕಾರಿನೊಳಗೆ ಮಗು, ಮಹಿಳೆ ಹಾಗೂ ಚಾಲಕ ಸಿಲುಕಿಕೊಂಡಿದ್ದರು. ಕ್ಷಣಾರ್ಧದಲ್ಲಿ ನೆರವು ಸಿಗದಿದ್ದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇತ್ತು. ಅದೇ ಸಮಯದಲ್ಲಿ ಸಮೀಪದಲ್ಲೇ ಮತ್ತೊಂದು ಪ್ರಮುಖ ಪ್ರಕರಣದ ಸಂಬಂಧ ಕರ್ತವ್ಯ ನಿರ್ವಹಿಸುತ್ತಿದ್ದ…

Read More

ಬಿಸಿರೋಡಿನ ಎನ್.ಜಿ. ಸರ್ಕಲ್ ಬಳಿ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ – ಗಂಟೆಗಟ್ಟಲೆ ಪರದಾಡಿದ ವಾಹನ ಸವಾರರು

ಬಂಟ್ವಾಳ: ಬಿಸಿರೋಡಿನ ಎನ್.ಜಿ. ಸರ್ಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾದ ಗುಂಡಿಯಿಂದಾಗಿ ಸೋಮವಾರ ಬೆಳಿಗ್ಗೆ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ. ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ತೀವ್ರ ಸಂಕಷ್ಟ ಅನುಭವಿಸಿದರು. ಕೆ.ಎನ್.ಆರ್.ಸಿ. ಕಂಪನಿ ನಡೆಸುತ್ತಿರುವ ಕಾಮಗಾರಿಯ ಪರಿಣಾಮ ರಸ್ತೆಯಲ್ಲಿ ಗುಂಡಿ ನಿರ್ಮಾಣವಾಗಿದ್ದು, ಇದೇ ಟ್ರಾಫಿಕ್ ದಟ್ಟಣೆಗೆ ಪ್ರಮುಖ ಕಾರಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಹೆದ್ದಾರಿಯ ಮಧ್ಯಭಾಗದಲ್ಲಿ ವಾಹನಗಳ ವೇಗ ಕುಂಠಿತಗೊಂಡ ಪರಿಣಾಮ ಕೆಲವೇ ಕ್ಷಣಗಳಲ್ಲಿ ಉಭಯ…

Read More

ಪುರುಷರಕಟ್ಟೆ ಪ್ರಕರಣ: ಬಿಜೆಪಿ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ

ಪುತ್ತೂರು: ಪುರುಷರಕಟ್ಟೆ ಘಟನೆಯನ್ನು ಇಟ್ಟುಕೊಂಡು ಬಿಜೆಪಿಯು ಕೋಮು ಗಲಭೆ ಸೃಷ್ಟಿಸಲು ನಡೆಸಿದ ಹುನ್ನಾರವು ಜಿಲ್ಲಾ ಎಸ್ಪಿ ಡಾ.ಅರುಣ್ ಅವರ ಕಟ್ಟುನಿಟ್ಟಿನ ಕ್ರಮದಿಂದ ವಿಫಲಗೊಂಡಿದ್ದು, ಗಲಭೆ ಎಬ್ಬಿಸಲು ಹುನ್ನಾರ ನಡೆಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಬಿಜೆಪಿ ಮುಖಂಡರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ(ಗ್ರಾಮಾಂತರ) ಅಧ್ಯಕ್ಷ ಎಚ್.ಮಹಮ್ಮದ್ ಆಲಿ ಆಗ್ರಹಿಸಿದರು.ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಯಾವುದೇ ವಿಚಾರಗಳ ಕುರಿತು ಮಾತನಾಡದ ಸಂಸದರು ಪ್ರಸ್ತುತ ಜಿಲ್ಲೆಯಲ್ಲಿ ತನ್ನ ಅಸ್ತಿತ್ವವನ್ನು ತೋರಿಸುವ ದೃಷ್ಟಿಯಿಂದ ಪುರುಷರಕಟ್ಟೆಯ ಪ್ರಕರಣದ…

Read More
error: Content is protected !!