ಸುರತ್ಕಲ್ ಚೂರಿ ಇರಿತ ಪ್ರಕರಣ.ನಾಲ್ವರು ಆರೋಪಿಗಳ ಗುರುತು ಪತ್ತೆ .
ಸುರತ್ಕಲ್: ದೀಪಕ್ ಬಾರ್ ಬಳಿ ಗುರುವಾರ ರಾತ್ರಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಸಂಘ ಪರಿವಾರದ ಕಾರ್ಯಕರ್ತ ಗುರುರಾಜ್, ಆತನ ಸ್ನೇಹಿತರಾದ ಅಲೆಕ್ಸ್ ಸಂತೋಷ್, ಸುಶಾಂತ್ ಮತ್ತು ನಿತಿನ್ ದುಷ್ಕೃತ್ಯ ಎಸಗಿದ ಆರೋಪಿಗಳೆಂದು ತಿಳಿದು ಬಂದಿದೆ. ಪ್ರಕರಣದ ತನಿಖೆ ಆರಂಭಿಸಿದ ಸುರತ್ಕಲ್ ಪೊಲೀಸ್ ನಿರೀಕ್ಷ ಪ್ರಮೋದ್ ಕುಮಾರ್ ನೇತೃತ್ವದ ಪೊಲೀಸ್ ತಂಡ, ಘಟನೆ ನಡೆಯುವ ಸಂದರ್ಭ ಸ್ಥಳದಲ್ಲಿದ್ದ ಸಂತ್ರಸ್ತರ ಸ್ನೇಹಿತನೊಬ್ಬನ…