ಸ್ಥಳೀಯ ಸಂಸ್ಥೆಗಳ ಚುನಾವಣೆ ತಕ್ಷಣ ನಡೆಸಿ: ಎಸ್‌ಡಿಪಿಐ ಆಗ್ರಹ
ರಾಜ್ಯದಲ್ಲಿ ಸ್ಥಳೀಯಾಡಳಿತ ಚುನಾವಣೆ ತಕ್ಷಣ ನಡೆಯಲಿ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹಿಸಿದ್ದಾರೆ. ಕರ್ನಾಟಕ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲು ತಕ್ಷಣ ಕ್ರಮಕೈ ಗೊಳ್ಳಬೇಕು ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಸುದ್ದಿ ಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ. 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಬಿಡುಗಡೆಯಾಗಬೇಕಿದ್ದ ಸುಮಾರು 2133 ಕೋಟಿ ರೂ. ಅನುದಾನ ವನ್ನು ಕೇಂದ್ರ ಸರ್ಕಾರ ಇನ್ನೂ ಬಿಡುಗಡೆ ಮಾಡಿಲ್ಲ. ನಾಲ್ಕು ಕಂತುಗಳಲ್ಲಿ ಬಿಡುಗಡೆಯಾಗಬೇಕಿದ್ದ ಹಣ ಮಾರ್ಚ್ ಅಂತ್ಯದವರೆಗೂ ಬಂದಿಲ್ಲ. ಇದರಿಂದ ಗ್ರಾಮ ಪಂಚಾಯಿತಿಗಳು…
