ಫೆ.1ರಂದು ಹೊಸಂಗಡಿಯಲ್ಲಿ ರಾಷ್ಟ್ರ ಮಟ್ಟದ A ಗ್ರೇಡ್ ಕಬಡ್ಡಿ ಕ್ರೀಡಾಕೂಟ

ಕಾಸರಗೋಡು :ಕಾಸರಗೋಡಿನ ಕಬಡ್ಡಿ ಇತಿಹಾಸದಲ್ಲಿ ದಾಖಲೆಯನ್ನು ನಿರ್ಮಿಸಿದ ಶ್ರೀ ಅಯ್ಯಪ್ಪ ಕೃಪಾ ವೀರಮಾರುತಿ ವ್ಯಾಯಾಮ ಶಾಲೆ (ರಿ.), ಹೊಸಂಗಡಿ ಇವರ ವತಿಯಿಂದ ರಾಷ್ಟ್ರ ಮಟ್ಟದ A ಗ್ರೇಡ್ ಕಬಡ್ಡಿ ಕ್ರೀಡಾಕೂಟವು ದಿನಾಂಕ ಫೆಬ್ರವರಿ 1, 2026 ರಂದು ಆಯೋಜಿಸಲಾಗಿದೆ.ಕಬಡ್ಡಿ ಕ್ರೀಡಾಕೂಟವು ವೀರಮಾರುತಿ ವ್ಯಾಯಾಮ ಶಾಲೆ ಪರಿಸರದಲ್ಲಿ ನಡೆಯಲಿದ್ದು, ಕಾಸರಗೋಡು ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಇವರ ಸಹಯೋಗದೊಂದಿಗೆ ಅದ್ಧೂರಿಯಾಗಿ ಆಯೋಜಿಸಲಾಗುತ್ತಿದೆ. ಈ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಪ್ರೊ ಕಬಡ್ಡಿ ಆಟಗಾರರು ಸೇರಿದಂತೆ ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ…

Read More

ಕೋರ್ಟ್ ತೀರ್ಪು ಪ್ರಕಟಿಸುವ ಮೊದಲು ಆರಿಕ್ಕಾಡಿಯಲ್ಲಿ ಟೋಲ್ ವಸೂಲಿ ಆರಂಭ, ಕುಂಬಳೆ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಟೋಲ್ ವಸೂಲಿ ಯತ್ನ – ಸಂಘರ್ಷಕ್ಕೆ ತಿರುಗಿದ ಘಟನೆ

ಕುಂಬಳೆ : ಕುಂಬಳೆ ಟೋಲ್ ಬೂತ್ ಪ್ರಕರಣದ ತೀರ್ಪು ಮುಂದೂಡಲ್ಪಟ್ಟ ಹಿನ್ನಲೆಯಲ್ಲಿ, ಬುಧವಾರ ಸಂಜೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಆರಿಕ್ಕಾಡಿ ಟೋಲ್ ಪ್ಲಾಜಾದಲ್ಲಿ ಟೋಲ್ ವಸೂಲಿಯನ್ನು ಆರಂಭಿಸಿದೆ. ಪೊಲೀಸ್ ಭದ್ರತೆಯ ಮಧ್ಯೆ ಟೋಲ್ ವಸೂಲಿ ಆರಂಭವಾಗಿದ್ದು, ವಾಹನಗಳನ್ನು ನಿಲ್ಲಿಸಿ ಶುಲ್ಕ ವಸೂಲಿ ಮಾಡಲು ಪ್ರಾರಂಭಿಸಿದ ತಕ್ಷಣ ಸಮರ ಸಮಿತಿಯ ಪದಾಧಿಕಾರಿಗಳು ಟೋಲ್ ಬೂತ್ ಬಳಿ ಆಗಮಿಸಿದ್ದರು. ವಾಹನಗಳನ್ನು ತಡೆದು ಟೋಲ್ ವಸೂಲಿ ಆರಂಭಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನಗಳ ದೀರ್ಘ ಸಾಲುಗಳು ಕಂಡುಬಂದವು. ಸಂಜೆವರೆಗೆ…

Read More

ಅಗಸರ ಯಾನೆ ಮಡಿವಾಳರ ಸಂಘದಿಂದ ಸಮಾಜೋತ್ಸವ ಹಾಗೂ ಮಾಚಿದೇವ ಜಯಂತಿ ದಿನಾಚರಣೆ – ಫೆ.1ರಂದು

ಕಾಸರಗೋಡು : ಅಗಸರ ಯಾನೆ ಮಡಿವಾಳರ ಸಂಘ, ಕಾಸರಗೋಡು ಜಿಲ್ಲೆ ಇವರ ಆಶ್ರಯದಲ್ಲಿ ಸಮಾಜೋತ್ಸವ ಹಾಗೂ ಗುರು ಮಾಚಿದೇವ ಜಯಂತಿ ದಿನಾಚರಣೆ ಕಾರ್ಯಕ್ರಮವು ಫೆಬ್ರವರಿ 1, 2026 (ಭಾನುವಾರ) ರಂದು ಆಯೋಜಿಸಲಾಗಿದೆ.ಕಾರ್ಯಕ್ರಮವು ಕಣ್ಣೂರು, ಎಡನಾಡು ಸೇವಾ ಸಹಕಾರಿ ಬ್ಯಾಂಕ್ ಹಾಲ್, ಸೂರಂಬೈಲ್ನಲ್ಲಿ ನಡೆಯಲಿದ್ದು, ವಿವಿಧ ಘನಾತಿಥಿಗಳ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಮಾಜದ ಮಕ್ಕಳಿಂದ ನೃತ್ಯ ವೈವಿಧ್ಯ…

Read More

ದೈವಗಳ ಮೂರ್ತಿ ಕಳ್ಳತನ; ಇಬ್ಬರ ಬಂಧನ

ಮನೆಯಲ್ಲಿದ್ದ ದೈವಗಳ ಮೂರ್ತಿಗಳನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಮಂಗಳೂರಿನ ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.ಅಮಿತಾ ಎಂಬುವವರ ತಾಯಿ ಮನೆಯಲ್ಲಿ ದೈವಗಳ ಮೂರ್ತಿಗಳು ಹಾಗೂ ಅದಕ್ಕೆ ಸಂಬಂಧಪಟ್ಟ ಪೂಜಾ ಪರಿಕರಗಳು ಇತ್ತು. ಈ ಮನೆಯಲ್ಲಿ ಯಾರೂ ವಾಸವಿರದ ಕಾರಣ ಕೇವಲ ಪೂಜೆ ಮಾಡಿ ದೀಪ ಹಚ್ಚಿ ನಂತರ ಬೀಗ ಹಾಕಲಾಗುತ್ತಿತ್ತು. ದಿನಾಂಕ: 26-12-2025 ರಂದು ರಾತ್ರಿ ಸಮಯ ಯಾರೋ ಅಪರಿಚಿತರು ಮನೆಯ ಮೇಲ್ಚಾವಣಿಯ ಹಂಚು ತೆಗೆದು ಮನೆಯೊಳಗೆ ಪ್ರವೇಶಿಸಿ ಸುಮಾರು 1,00,000 ಮೌಲ್ಯದ 1 ಪಸಪ್ಪ ದೈವದ ತಾಮ್ರದ ಮೂರ್ತಿ,…

Read More

ಯುವ ಕವಿಗೋಷ್ಠಿಗೆ ಆಹ್ವಾನ

ಕಾಸರಗೋಡು : ಇಲ್ಲಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ಅಂಗಸಂಸ್ಥೆಯಾದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಅಂಗವಾಗಿ 2026 ಫೆ. 22ರಂದು ಬೆಳಗ್ಗೆ 7 ಗಂಟೆಯಿಂದ ಕನ್ನಡ ಭವನದ ಬಯಲು ರಂಗಮಂದಿರದಲ್ಲಿ ಕಾಸರಗೋಡು- ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಯುವ ಚುಟುಕು ಯುವ ಕವಿಗೋಷ್ಠಿಯಲ್ಲಿ ಭಾಗವಹಿಸುವ ಆಸಕ್ತರು ತಮ್ಮ ಹೆಸರನ್ನು ನೊಂದಾಯಿಸಬಹುದು. ಈ ವಿಭಾಗದಲ್ಲಿ ಭಾಗವಹಿಸುವವರು 18 ವರ್ಷಕ್ಕಿಂತ ಕೆಳಗಿನವರಾಗಿರಬೇಕು. ಒಬ್ಬರಿಗೆ…

Read More

ಬೆಂಗಳೂರು: ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ – ನಟ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್, ಕಾರು ವಶ

ಬೆಂಗಳೂರು : ತಡರಾತ್ರಿ ಕುಡಿದು ವಾಹನ ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣರಾಗಿದ್ದ ನಟ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಕಾರನ್ನು ವಶಕ್ಕೆ ಪಡೆಯಲಾಗಿದೆ. ನಿನ್ನೆ ತಡರಾತ್ರಿ ನಟ ಮಯೂರ್ ಪಟೇಲ್ ಕುಡಿದು ತಮ್ಮ ಫಾರ್ಚೂರನರ್ ಕಾರನ್ನು ವೇಗವಾಗಿ ಚಲಾಯಿಸಿ ರಸ್ತೆ ಬದಿಯಲ್ಲಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ್ದಾರೆ. ಈ ಸಂಬಂಧ ಮಯೂರ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ದೊಮ್ಮಲೂರು ಬಳಿಯ ಕಮಾಂಡೋ ಆಸ್ಪತ್ರೆ ಬಳಿ ಈ ಸರಣಿ ಅಪಘಾತ ನಡೆದಿದೆ. ಮಯೂರ್ ಪಟೇಲ್ ವಿಪರೀತ…

Read More

ನೆಲ್ಲಿಕಾರು: ಕಾರು–ಗೂಡ್ಸ್ ಟೆಂಪೋ ಮುಖಾಮುಖಿ ಢಿಕ್ಕಿ, ಮೂವರಿಗೆ ಗಾಯ

ಉಡುಪಿ: ನೆಲ್ಲಿಕಾರು-ಕಾರ್ಕಳ ಮುಖ್ಯ ರಸ್ತೆಯಲ್ಲಿ ಹೊಸ್ಮಾರು ಕಡೆಗೆ ಸಾಗುತ್ತಿದ್ದ ಗೂಡ್ಸ್ ಟೆಂಪೋ ಮತ್ತು ಎದುರಿನಿಂದ ಬರುತ್ತಿದ್ದ ಕಾರು ಮುಖಾಮುಖಿ ಢಿಕ್ಕಿ ಹೊಡೆದು ಮೂವರು ಗಾಯಗೊಂಡಿದ್ದಾರೆ. ಟೆಂಪೋ ಚಾಲಕ ಕೃಷ್ಣರಾಜ್, ಕಾರು ಚಾಲಕ ಲಲಿತೇಶ್ ಗೌಡ ಹಾಗೂ ಬಾಲಕ ಪ್ರವೀಣ್ ಗಾಯಗೊಂಡವರು. ಕಾರು ಹಾಗೂ ಟೆಂಪೋ ಎರಡೂ ಜಖಂಗೊಂಡಿವೆ. ಗೂಡ್ಸ್ ಟೆಂಪೋದಲ್ಲಿ ಕಾರ್ಕಳ ಕಡೆಯಿಂದ ಮನೆ ಖಾಲಿ ಮಾಡಿ ಸಾಮಗ್ರಿಗಳನ್ನು ಸ್ಥಳಾಂತರಿಸಲು ತೆರಳುತ್ತಿದ್ದ ಕುಟುಂಬ ಪ್ರಯಾಣಿಸುತ್ತಿತ್ತು. ಗಾಯಾಳುಗಳನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಸುಮಂತ್ ಸಾವು: ಗೃಹಸಚಿವರಿಗೆ ಹರೀಶ್ ಪೂಂಜಾ ಮನವಿ

ಬೆಳ್ತಂಗಡಿ – ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣದ ಬಗ್ಗೆ ಕೂಲಂಕುಷ ತನಿಖೆಗೆ ಶಾಸಕ ಹರೀಶ್ ಪೂಂಜಾ ಅವರು ಗೃಹಸಚಿವರಿಗೆ ಮನವಿ ಮಾಡಿದ್ದಾರೆ. ಧನುರ್ಮಾಸದ ಕೊನೆಯ ಪೂಜೆಗೆಂದು ಹೋಗಿದ್ದ ಬಾಲಕ ಸುಮಂತ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣದ ಕೂಲಂಕುಷವಾಗಿ ತನಿಖೆ ಮಾಡುವಂತೆ ಶಾಸಕ ಹರೀಶ್ ಪೂಂಜಾ ಅವರು ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಜನವರಿ 14 ರಂದು ಧನುರ್ಮಾಸ ಹಿನ್ನೆಲೆ ದೇಗುಲಕ್ಕೆಂದು ಮುಜಾನೆಯೇ ಮನೆಯಿಂದ ಹೊರಟಿದ್ದ ಸುಮುಂತ್ ನಿಗೂಢವಾಗಿ ನಾಪತ್ತೆಯಾಗಿದ್ದ, ಬಳಿಕ ಮನೆ…

Read More

ಮಂಗಳೂರು ನಗರದಲ್ಲಿ ಒಳಚರಂಡಿ ಸಮಸ್ಯೆ ಗಂಭೀರ – ಡಿಸಿ ಫೋನ್ ಇನ್‌ನಲ್ಲಿ ಬಹಿರಂಗ

ಮಂಗಳೂರು :ಮಳೆನೀರು ಚರಂಡಿಗೆ ಕೊಳಚೆ ನೀರು ಸೇರುವ ಬಗ್ಗೆ, ನಗರದ ಒಳಚರಂಡಿ ಅವ್ಯವಸ್ಥೆ ಬಗ್ಗೆ ಸರಣಿ ದೂರುಗಳು ಬುಧವಾರ ನಡೆದ ಮಂಗಳೂರಿನಲ್ಲಿ‌ ನಡೆದ ಜಿಲ್ಲಾಧಿಕಾರಿ ಫೋನ್ ಇನ್ ಕಾರ್ಯಕ್ರಮದಲ್ಲಿ‌‌ ಪ್ರಮುಖವಾಗಿ ಕೇಳಿ ಬಂದವು. ಜಿಲ್ಲಾಧಿಕಾರಿ ಅಧ್ಯಕ್ಷತೆಯ ೧ ಗಂಟೆಯ ಫೋನ್ ಇನ್ ಕಾರ್ಯಕ್ರಮದಲ್ಲಿ ಮಳೆ ನೀರು ಚರಂಡಿಯಲ್ಲಿ ಫ್ಲಾಟ್, ಅಪಾರ್ಟ್ಮೆಂಟ್‌ಗಳ ಕೊಳಚೆ ನೀರು (ಒಳಚರಂಡಿ) ಹರಿದು ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಹಲವು ದೂರುಗಳು ಸಲ್ಲಿಕೆಯಾಗಿವೆ.ಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅಧ್ಯಕ್ಷತೆಯಲ್ಲಿ ಬುಧವಾರ…

Read More

ಚುಟುಕು ಕವಿಗೋಷ್ಠಿಗೆ ಆಹ್ವಾನ

ಕಾಸರಗೋಡು : ಇಲ್ಲಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ಅಂಗಸಂಸ್ಥೆಯಾದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಅಂಗವಾಗಿ 2026 ಫೆ. 22ರಂದು ಬೆಳಗ್ಗೆ 7 ಗಂಟೆಯಿಂದ ಕನ್ನಡ ಭವನದ ಬಯಲು ರಂಗಮಂದಿರದಲ್ಲಿ ಕಾಸರಗೋಡು – ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಯುವ ಚುಟುಕು ಕವಿಗೋಷ್ಠಿಯಲ್ಲಿ ಭಾಗವಹಿಸುವ ಆಸಕ್ತರು ತಮ್ಮ ಹೆಸರನ್ನು ನೊಂದಾಯಿಸಬಹುದು. ಈ ವಿಭಾಗದಲ್ಲಿ ಭಾಗವಹಿಸುವವರು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು. ಒಬ್ಬರಿಗೆ…

Read More
error: Content is protected !!