10ನೇ ತರಗತಿವರೆಗೆ ಶಾಲೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಜಂಕ್ ಫುಡ್‌ಗೆ ನಿಷೇಧ: ಯು.ಟಿ. ಖಾದರ್
ಮಂಗಳೂರು: ಬರ್ಗರ್, ಪಿಜ್ಜಾ ಸೇರಿದಂತೆ ಜಂಕ್ ಫುಡ್‌ಗಳಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, 10ನೇ ತರಗತಿವರೆಗಿನ ಶಾಲೆಗಳು ಹಾಗೂ ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಇಂತಹ ಆಹಾರಗಳ ಮಾರಾಟವನ್ನು ನಿಷೇಧಿಸುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯ ಮಕ್ಕಳ ಆಸ್ಪತ್ರೆ ಸಭಾಂಗಣದಲ್ಲಿ ನಡೆದ ಅಭಿವೃದ್ಧಿ ಮತ್ತು ಕುಂದುಕೊರತೆ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಆಹಾರ ಸುರಕ್ಷತೆ ವ್ಯವಸ್ಥೆಯನ್ನು ಬಲಪಡಿಸಲು ಬೆಂಗಳೂರಿನ ಆಹಾರ ಪರೀಕ್ಷಾ…
