ಕನಿಷ್ಠ ವೇತನದ ಪುನರ್ ವಿಮರ್ಶೆ ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸಲು ಒತ್ತಾಯಿಸಿ ಸಹಿ ಸಂಗ್ರಹ ಚಳುವಳಿ
ಕನಿಷ್ಠ ವೇತನ ಪುನರ್ ವಿಮರ್ಶೆಗೆ ಆಗ್ರಹಿಸಿ ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳ ಸಂರಕ್ಷಿಸಲು ಒತ್ತಾಯಿಸಿ ನಗರದಲ್ಲಿಂದು ಸಾರ್ವಜನಿಕರ ಮಧ್ಯೆ ಸಹಿ ಸಂಗ್ರಹ ಚಳುವಳಿಯನ್ನು ನಡೆಸಲಾಯಿತು.ಕಾರ್ಮಿಕ ವರ್ಗದ ಆಶಾಕಿರಣವಾದ ಡಾ.ಬಿ ಆರ್ ಅಂಬೇಡ್ಕರ್ ರವರ ಜನ್ಮದಿನಾರಣೆಯ ದಿನದಂದು ಕರ್ನಾಟಕ ರಾಜ್ಯಾದ್ಯಂತ ಸಹಿ ಸಂಗ್ರಹ ಚಳುವಳಿಯನ್ನು ನಡೆಸಬೇಕೆಂಬ CITU ಕರೆಯ ಮೇರೆಗೆ CITU ದ.ಕ.ಜಿಲ್ಲಾ ಸಮಿತಿಯ ನೇತ್ರತ್ವದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಹಿ ಸಂಗ್ರಹ ಚಳುವಳಿಯನ್ನು ಉದ್ಘಾಟಿಸಿದ ದ.ಕ.ಜಿಲ್ಲೆಯ ಕಾರ್ಮಿಕ ಚಳುವಳಿಯ ಹಿರಿಯ ನೇತಾರರಾದ ಜೆ ಬಾಲಕೃಷ್ಣ ಶೆಟ್ಟಿಯವರು ಮಾತನಾಡಿ,…
