Headlines

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ದಿನಾಂಕ: 23.06.2025 ರಂದು ಅಪ್ರಾಪ್ತ ಪ್ರಾಯದ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ : 79/2025, ಕಲಂ: 11, 12 ಪೋಕ್ಸೋ ಆಕ್ಟ್ -2012 & ಕಲಂ : 75(i) (ii), 79 BNS-2023 ಪ್ರಕರಣದಲ್ಲಿ, ತನಿಖೆ ನಡೆಸಿದ ಪ್ರಕರಣದ ಅಂದಿನ ತನಿಖಾಧಿಕಾರಿಗಳಾದ ಕೀರಪ್ಪ ಘಟಕಾಂಬಳೆ, ಪಿಎಸ್ಐ ರವರು ಹಾಗೂ ಕೃಷ್ಣಕಾಂತ ಪಾಟೀಲ್ ಪಿ.ಎಸ್.ಐ ರವರು, ಪ್ರಕರಣದ ಆರೋಪಿತನಾದ ಮಣಿನಾಲ್ಕೂರು ನಿವಾಸಿ…

Read More

ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ: ನೇತ್ರಾವತಿ ನೀರಿನ ಮಟ್ಟ ಏರಿಕೆ, ಜನಜೀವನ ಅಸ್ತವ್ಯಸ್ತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರಿದಿದ್ದು, ಕಳೆದ ರಾತ್ರಿ ಆರಂಭವಾದ ಭಾರೀ ಮಳೆ ಶನಿವಾರವೂ ನಿರಂತರವಾಗಿ ಸುರಿಯುತ್ತಿದೆ. ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು ಹಾಗೂ ಕಚೇರಿಗಳಿಗೆ ತೆರಳುತ್ತಿದ್ದ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸಿದರು. ನಗರದ ಹಲವೆಡೆ ರಸ್ತೆಗಳಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ಕೆಲಕಾಲ ಸಂಚಾರ ನಿಧಾನಗೊಂಡಿತು. ನಿರಂತರ ಮಳೆಯಿಂದ ಜಿಲ್ಲೆಯ ಪ್ರಮುಖ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ನೇತ್ರಾವತಿ…

Read More

ಯುಡಿಎಫ್ ಸರ್ಕಾರ ಸ್ಥಳೀಯಡಳಿತ ಸಂಸ್ಥೆಗಳ ಅನುದಾನ ಕಡಿತಗೊಳಿಸಿರುವುದನ್ನು ಖಂಡಿಸಿ ಎಲ್‌ಡಿಎಫ್‌ನಿಂದ ಪೈವಳಿಕೆ ಗ್ರಾಮ ಪಂಚಾಯತ್‌ಗೆ ಪ್ರತಿಭಟನಾ ಮೆರವಣಿಗೆ

ಪೈವಳಿಕೆ : ಯುಡಿಎಫ್ ಸರ್ಕಾರ ಸ್ಥಸ್ಥಳೀಯಡಳಿತ ಸಂಸ್ಥೆಗಳಿಗೆ ನೀಡುವ ಅನುದಾನವನ್ನು ಕಡಿತಗೊಳಿಸಿರುವುದನ್ನು ಖಂಡಿಸಿ ಎಲ್‌ಡಿಎಫ್ ನೇತೃತ್ವದಲ್ಲಿ ಪೈವಳಿಗೆ ಗ್ರಾಮ ಪಂಚಾಯತ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪೈವಳಿಗೆ ಗ್ರಾಮ ಕಚೇರಿ (ವಿಲೇಜ್ ಆಫೀಸ್) ಆವರಣದಿಂದ ಆರಂಭವಾದ ಮೆರವಣಿಗೆ ಪಂಚಾಯತ್ ಕಚೇರಿ ಆವರಣದಲ್ಲಿ ಸಮಾಪ್ತಿಯಾಯಿತು. ಕಾರ್ಯಕ್ರಮವನ್ನು ಸಿಪಿಐ(ಎಂ) ಜಿಲ್ಲಾ ಸಮಿತಿ ಸದಸ್ಯ ಸಿ.ಎ. ಸುಬೈರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಂಚಾಯತ್‌ಗಳ ಅನುದಾನವನ್ನು ಕಡಿತಗೊಳಿಸುವ ಮೂಲಕ ಎಲ್‌ಡಿಎಫ್ ಸರ್ಕಾರ ಜಾರಿಗೆ ತಂದಿರುವ ಕಲ್ಯಾಣ ಯೋಜನೆಗಳನ್ನು ಹಾಳುಮಾಡಲು ಯುಡಿಎಫ್…

Read More

ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಸದಾ ಸ್ಮರಣೀಯ: ಬಿ. ಜಯಕರ ಶೆಟ್ಟಿ

ಉಡುಪಿ: ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ ಜನತೆ ಎಂದಿಗೂ ಮರೆಯಬಾರದು ಎಂದು ತುಳುಕೂಟ ಉಡುಪಿ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.ರೇಡಿಯೋ ಮಣಿಪಾಲ ಸಮುದಾಯ ಬಾನುಲಿ ಕೇಂದ್ರ ಹಾಗೂ ತುಳುಕೂಟ ಉಡುಪಿ ಸಹಯೋಗದಲ್ಲಿ ಉಡುಪಿಯ ಮುಕುಂದ ಕೃಪಾ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ನೆನಪಿನ ‘ಕಿನ್ಯ ಜೋಕ್ಲೆಡ್ದ್ ಸೊರ ಸಂಪು’ ಕಾರ್ಯಕ್ರಮವನ್ನು ಅವರು ಕಯ್ಯಾರ ಕಿಞ್ಞಣ್ಣ…

Read More

ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಡಾ. ಶಾಂತಾ ಪುತ್ತೂರಿಗೆ ನಾಡೋಜ ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಾಹಿತಿ, ಶಿಕ್ಷಕಿ,ಸಂಘಟಕಿ, ಸಂಪನ್ಮೂಲ ವ್ಯಕ್ತಿ ಆದ ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ ಡಾ.ಶಾಂತಾ ಪುತ್ತೂರು ರವರಿಗೆ ನಾಡೋಜ ಡಾ.ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ 2026ನ್ನು ಜುಲೈ 26ರಂದು ಗಡಿನಾಡು ಕಾಸರಗೋಡಿನ ಕನ್ನಡ ಭವನದರಜತ ಸಂಭ್ರಮದ ಸಮಾರೋಪ ಸಮಾರಂಭ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಶ್ರೀಮದ್ ಎಡನೀರು ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಹಸ್ತಗಳಿಂದ ಪ್ರದಾನ ಮಾಡಲಾಯಿತು. ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಕಾಸರಗೋಡು ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ.ವಾಮನ್ ರಾವ್…

Read More

ಕಾವೇರಿ ವಿವಾದ: ಕಾನೂನು ಗೌರವಿಸಿ, ಹೋರಾಟ ಶಾಂತಿಯುತವಾಗಿರಲಿ – ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮೈಸೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ನ್ಯಾಯಾಲಯದ ಆದೇಶವನ್ನು ಗೌರವಿಸುವುದರ ಜೊತೆಗೆ ಜನರ ಹಿತವನ್ನೂ ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳ ಹಿತವನ್ನು ಗಮನದಲ್ಲಿಟ್ಟುಕೊಂಡಿದೆ. ತಮಿಳುನಾಡಿಗೆ ನೀರು ಬಿಡುಗಡೆ ಸಂಬಂಧ ಅಂತಿಮ ನಿರ್ಧಾರವನ್ನು ಕಾನೂನು ತಜ್ಞರು, ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ನಾಯಕರೊಂದಿಗೆ ಚರ್ಚಿಸಿ ಕೈಗೊಳ್ಳಲಾಗುವುದು ಎಂದು…

Read More

ಎಡನೀರು ಮಠದಲ್ಲಿ ಕರ್ನಾಟಕ ಕೇರಳ ಸಾಂಸ್ಕೃತಿಕ ವೈಭವ ಕಾರ್ಯಕ್ರಮ

ಕಾಸರಗೋಡು: ದಿನಾಂಕ 25-07-2026 ರಂದು ಕಾಸರಗೋಡಿನ ಎಡನೀರು ಮಠದ ಶಾಲಾ ಸಭಾಂಗಣದಲ್ಲಿ ಜಾಗೃತಿ ಟ್ರಸ್ಟ್ ಬೆಂಗಳೂರು ಶ್ರೀಮದ್ ಎಡನೀರು ಮಠ ಹಾಗೂ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ (ರಿ.) ಕಾಸರಗೋಡು ಸಹಯೋಗದಲ್ಲಿ ನಡೆದ ಕರ್ನಾಟಕ ಕೇರಳ ಸಾಂಸ್ಕೃತಿಕ ವೈಭವ, ಮತ್ತು ಅಭಿನಂದನಾ ಸಮಾರಂಭ ಕಾರ್ಯಕ್ರಮವನ್ನು ಶ್ರೀಮದ್ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಉದ್ಘಾಟಿಸಿದರು.ಬೆಂಗಳೂರು ಕಿಮ್ಸ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ . ಶಿವಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ…

Read More

ಮಂಗಳೂರು ವಿಮಾನ ನಿಲ್ದಾಣದ ವಿರುದ್ಧ ಟ್ಯಾಕ್ಸಿ ಚಾಲಕರ ಪ್ರತಿಭಟನೆ ಆಗಸ್ಟ್‌ 4ರಂದು

ಮಂಗಳೂರು:ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಹಾಗೂ ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ವತಿಯಿಂದ ಆಗಸ್ಟ್‌ 4ರಂದು ಕಾವೂರು ಜಂಕ್ಷನ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ತಿಳಿಸಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ವಾಹನಗಳಿಗೆ ವಿಧಿಸಲಾಗುತ್ತಿರುವ ಹೆಚ್ಚುವರಿ ಪಾರ್ಕಿಂಗ್ ಶುಲ್ಕ ಹಾಗೂ ಖಾಸಗಿ ವಾಹನಗಳಿಗೆ ನೀಡಲಾಗುತ್ತಿರುವ ವಿಶೇಷ ಸೌಲಭ್ಯವನ್ನು ವಿರೋಧಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ತಿಳಿಸಿದೆ. ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಟ್ಯಾಕ್ಸಿ ಹಾಗೂ ಮ್ಯಾಕ್ಸಿ…

Read More

ಉಡುಪಿಯಲ್ಲಿ ಸೌಂದರ್ಯ ತಜ್ಞೆಯರಿಗಾಗಿ ಉಚಿತ ಬ್ಯೂಟಿ ಹೀಲಿಂಗ್ ಕಾರ್ಯಾಗಾರ

ಉಡುಪಿ: ಅಖಿಲ ಕರ್ನಾಟಕ ಸೌಂದರ್ಯ ತಜ್ಞೆಯರ ಸಂಘ ಉಡುಪಿ (ರಿ.) ಹಾಗೂ ನೇಚರ್ಸ್ ಪ್ರೊಫೆಷನಲ್ ಕಂಪನಿ ಸಹಯೋಗದಲ್ಲಿ ವೇದಾಸ್ ಬ್ಯೂಟಿ ಪಾರ್ಲರ್‌ನಲ್ಲಿ ಉಚಿತ ಕಾರ್ಯಾಗಾರ ನಡೆಯಿತು. ಕಾರ್ಯಾಗಾರದಲ್ಲಿ 7 ಚಕ್ರ ಹೀಲಿಂಗ್, ಕ್ಯಾಂಡಲ್ ಮಸಾಜ್ ಹಾಗೂ ನೇಚರ್ಸ್ ಪ್ರೊಫೆಷನಲ್ ಕಂಪನಿಯ ಅಡ್ವಾನ್ಸ್ ಪ್ರಾಡಕ್ಟ್‌ಗಳ ಕುರಿತು ಮಾಹಿತಿ ಮತ್ತು ತರಬೇತಿ ನೀಡಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸುಪ್ರಭಾ ಶೆಟ್ಟಿ ಉಪ್ಪಳ, ಸ್ವಾತಿ ಪುತ್ತೂರು ಹಾಗೂ ನೇಚರ್ಸ್ ಪ್ರೊಫೆಷನಲ್ ಕಂಪನಿಯ ಚೈತ್ರಾ ಬೆಂಗಳೂರು ಭಾಗವಹಿಸಿದ್ದರು. ವೇದಾಸ್ ಬ್ಯೂಟಿ ಪಾರ್ಲರ್ ಮಾಲಕಿ…

Read More

ವಂದೇ ಭಾರತ್‌ ರೈಲಿನಲ್ಲಿ ಮೊದಲ ಬಾರಿಗೆ ಜೀವಂತ ಹೃದಯ ಸಾಗಣೆ; ಅಂಗಾಂಗ ಕಸಿಗೆ ಹೊಸ ಮೈಲಿಗಲ್ಲು

ಅಹಮದಾಬಾದ್: ಭಾರತೀಯ ರೈಲ್ವೆ ದೇಶದಲ್ಲೇ ಮೊದಲ ಬಾರಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ಮೂಲಕ ಜೀವಂತ ಹೃದಯವನ್ನು ಯಶಸ್ವಿಯಾಗಿ ಸಾಗಿಸುವ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ. ಸೂರತ್‌ನಿಂದ ಅಹಮದಾಬಾದ್‌ನ ಯು.ಎನ್. ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಅಂಡ್ ರಿಸರ್ಚ್ ಸೆಂಟರ್‌ಗೆ ಹೃದಯವನ್ನು ಕಸಿ ಉದ್ದೇಶಕ್ಕಾಗಿ ಮುಂಬೈ ಸೆಂಟ್ರಲ್–ಗಾಂಧಿನಗರ ಕ್ಯಾಪಿಟಲ್ ವಂದೇ ಭಾರತ್ ಎಕ್ಸ್‌ಪ್ರೆಸ್ (20901) ಮೂಲಕ ಕಳುಹಿಸಲಾಯಿತು. ಸುಮಾರು 3 ಗಂಟೆ 45 ನಿಮಿಷಗಳಲ್ಲಿ (217 ನಿಮಿಷ) ಹೃದಯವನ್ನು ಅಹಮದಾಬಾದ್‌ಗೆ ತಲುಪಿಸಲಾಯಿತು. ರೈಲು ನಿಲ್ದಾಣದಿಂದ ಆಸ್ಪತ್ರೆಗೆ…

Read More
error: Content is protected !!