Headlines

ಸುಮಾರು 7,60,000/- ರೂ ಮೌಲ್ಯದ 76.59 ಗ್ರಾಂ ಎಂ ಡಿ ಎಂ ಎ ಹಾಗೂ ಗಾಂಜಾದೊಂದಿಗೆ ಆರೋಪಿ ಸೆರೆ:

ದಿನಾಂಕ: 29.07.2026 ರಂದು ರಾತ್ರಿ, ಬೆಳ್ತಂಗಡಿ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಆನಂದ ಎಂ ಮತ್ತು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿ ಬೆಳ್ತಂಗಡಿ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ತೆರಳಿದಾಗ, KA18 A 7203 ನೇ ಅಟೋ ರಿಕ್ಷಾದ ಬಳಿ ನಿಂತಿದ್ದ ವ್ಯಕ್ತಿಯೋರ್ವ ಅನುಮಾನಾಸ್ಪದಾಗಿ ವರ್ತಿಸುತ್ತಿರುವುದನ್ನು ಕಂಡು ಆತನನ್ನು ಹಿಡಿದು ವಿಚಾರಿಸಿದಾಗ, ಆತನು ಬೆಳ್ತಂಗಡಿ ಕುವೆಟ್ಟು ನಿವಾಸಿ ತ್ವಲಹ್ ಯಾನೆ ಅನ್ವರ್ ಯಾನೆ ಅನ್ಸರ್‌ (21) ಎಂಬುದಾಗಿ ತಿಳಿಸಿರುತ್ತಾನೆ. ಆತನ ವರ್ತನೆಯಿಂದ ಅನುಮಾನಗೊಂಡು ತಪಾಸಣೆ ನಡೆಸಲಾಗಿ, ಆತನ ಬಳಿ…

Read More

ಕೊತ್ವಾಲ್ ಪದ್ಮನಾಭ ಶೇರುಗಾರ್ ಗೆ “ಉದ್ಯೋಗ ರತ್ನ “ರಾಷ್ಟ್ರೀಯ ಪ್ರಶಸ್ತಿ

ಗಡಿನಾಡು ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಸ್ಥಾಪಕ ಸಂಚಾಲಕರಾಗಿರುವ ಖ್ಯಾತ ಕನ್ನಡಪರ ಸಂಸ್ಥೆ ಕನ್ನಡ ಭವನದ ರಜತ ಸಂಭ್ರಮ -ಸಮಾರೋಪ ಕಾರ್ಯಕ್ರಮದಲ್ಲಿ ಬೆಳ್ಳಾರಿಯ ಖ್ಯಾತ ವರ್ಷಿಣಿ ಎಂಟರ್ಪ್ರೈಸಸ್ ಮಾಲಿಕರಾದ, ಸುಮಾರು 3500 ಉದ್ಯೋಗಾರ್ಥಿಗಳಿಗೆ ಅನ್ನದಾತರಾಗಿರುವ, ಸಾಮಾಜಿಕ ಧಾರ್ಮಿಕ ಕ್ಷೇತ್ರ ಗಳಲ್ಲಿ ಸೇವಾ ನಿರತರಾಗಿರುವ ಶ್ರೀ ಕೊತ್ವಾಲ್ ಪದ್ಮನಾಭ ಶೇರುಗಾರ್ ಇವರೀಗೆ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ನಲ್ಲಿ “ಉದ್ಯೋಗ ರತ್ನ “ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಮ್ಮೇಳನ ಸರ್ವಾಧ್ಯಕ್ಷರಾದ ನಿವ್ರಿತ್ತ ಐ. ಎ….

Read More

ಉದ್ಯಾವರ ಮಾಡದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ: ಸಾವಿರಾರು ಜನರ ಭಾಗಿ

ಉದ್ಯಾವರ, ಜುಲೈ 30: ತೀಯಾ ಸಮಾಜ ಸಭಾಭವನ, ಉದ್ಯಾವರ ಮಾಡದಲ್ಲಿ ಗುರುವಾರ ಬೆಳಗ್ಗೆ 10 ಗಂಟೆಗೆ ಫೂಟ್ ಪಲ್ಸ್ ಥೆರಪಿ ವತಿಯಿಂದ ಉಚಿತ ಆರೋಗ್ಯ ಜಾಗೃತಿ ಹಾಗೂ ಫೂಟ್ ಪಲ್ಸ್ ಥೆರಪಿ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಆರೋಗ್ಯದ ಮಹತ್ವ, ಜೀವನಶೈಲಿಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಹಾಗೂ ಫೂಟ್ ಪಲ್ಸ್ ಥೆರಪಿಯ ಪ್ರಯೋಜನಗಳ ಕುರಿತು ಸವಿವರ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಶಂಭು ನಂಬೋದಾರಿ, ಅಣ್ಣ ದೈವದ ಪಾತ್ರಿ…

Read More

ಸರಕಾರಿ ಪ್ರೌಢಶಾಲೆ ಮಂಚಿ – ಕೊಳ್ನಾಡು : ಮಕ್ಕಳ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ ಇದರ ವತಿಯಿಂದ ಮಹಿಳಾ ಸಬಲೀಕರಣ ಮತ್ತು ಮತ್ತು ಮಕ್ಕಳ ಸುರಕ್ಷತೆ ಕುರಿತು ವಿದ್ಯಾರ್ಥಿಗಳಿಗಾಗಿ ಜಾಗೃತಿ ಕಾರ್ಯಕ್ರಮವು ಸರಕಾರಿ ಪ್ರೌಢಶಾಲೆ ಮಂಚಿ – ಕೊಳ್ನಾಡು ಇಲ್ಲಿ ದಿನಾಂಕ 30.07.2026 ರಂದು ಜರುಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಸಖಿ -1 ಸ್ಟಾಪ್ ಸೆಂಟರ್ ನ ಆಡಳಿತಾಧಿಕಾರಿ ಶ್ರೀಮತಿ ಪ್ರಿಯಾ ರಾಜ್ ಮೋಹನ್ ವಿದ್ಯಾರ್ಥಿಗಳ ಜೊತೆ ಮಾತನಾಡುತ್ತಾ, “ಹದಿಹರೆಯದ ಹುಡುಗಿಯರು ಮತ್ತು ಹುಡುಗರು ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಸನ್ನಡತೆಯಿಂದ ದೂರವಾಗಿ ಹಾದಿ…

Read More

ಕಾವೇರಿ ವಿವಾದ: ಆಗಸ್ಟ್ 2ರಂದು ಸರ್ವಪಕ್ಷ ಸಭೆ ಕರೆದ ಡಿ.ಕೆ. ಶಿವಕುಮಾರ್

ನವದೆಹಲಿ: ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. “ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ಮೇಲ್ಮನವಿ ಸಲ್ಲಿಸಿದ್ದು, ಮುಂದೆ ಈ ವಿಚಾರವನ್ನು ಹೇಗೆ ತೆಗೆದುಕೊಂಡು ಹೋಗಬೇಕು…

Read More

ಚಾವಣಿ ಕುಸಿದ ಮನೆಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ

ಬಂಟ್ವಾಳ : ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆಯಲ್ಲಿ ಬಿರುಗಾಳಿ ಹಾಗೂ ಭಾರೀ ಮಳೆಯಿಂದ ಜಯ ಸಪಲ್ಯ ಅವರ ಮನೆಯ ಛಾವಣಿ ಕುಸಿದು ಹಾನಿಗೊಳಗಾದ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಟುಂಬದ ಸದಸ್ಯರ ಯೋಗಕ್ಷೇಮ ವಿಚಾರಿಸಿದ ಶಾಸಕರು, ಸಂಭವಿಸಿದ ಹಾನಿಯನ್ನು ವೀಕ್ಷಿಸಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಸರ್ಕಾರದ ನಿಯಮಾನುಸಾರ ತುರ್ತು ಪರಿಹಾರ ಹಾಗೂ ಅಗತ್ಯ ನೆರವನ್ನು ಶೀಘ್ರವಾಗಿ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಗ್ರಾಮ ಆಡಳಿತಾಧಿಕಾರಿ (VA)…

Read More

ಉಡುಪಿ: ಶಾಸಕರ ಕಚೇರಿಗೆ ಮುತ್ತಿಗೆಗೆ ಯತ್ನ- ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ

ಉಡುಪಿ: ಶಾಸಕ ಯಶ್‌ಪಾಲ್ ಸುವರ್ಣ ಅವರು ರಾಹುಲ್ ಗಾಂಧಿ ಕುರಿತು ನೀಡಿದ ಹೇಳಿಕೆಯನ್ನು ವಿರೋಧಿಸಿ ಶಾಸಕರ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಗುರುವಾರ ನಗರದ ಜೋಡುಕಟ್ಟೆ ಬಳಿ ವಶಕ್ಕೆ ಪಡೆದರು. ದ್ವೇಷ ಭಾಷಣವನ್ನು ಖಂಡಿಸಿ ಶಾಸಕ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಯುವ ಕಾಂಗ್ರೆಸ್ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ನಗರದ ಜೋಡುಕಟ್ಟೆ ಹಾಗೂ ಶಾಸಕ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಮುತ್ತಿಗೆಯ ಮಾಹಿತಿ ತಿಳಿದ ಬಿಜೆಪಿ ಕಾರ್ಯಕರ್ತರು ಶಾಸಕ ಕಚೇರಿ…

Read More

ನೋಟಿಸ್‌ಗೆ ಹೆದರಲ್ಲ, ನನ್ನ ಹೇಳಿಕೆ ಬಗ್ಗೆ ನನಗೆ ಹೆಮ್ಮೆ ಇದೆ: ಯಶ್ಪಾಲ್ ಸುವರ್ಣ

ಉಡುಪಿ: ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಿದ್ದು, ಯಾವುದೇ ನೋಟಿಸ್ ನೀಡಿದರೂ ಅದನ್ನು ಸ್ವೀಕರಿಸಲು ತಾವು ಸಿದ್ಧನಿದ್ದೇನೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಯಾವುದೇ ದೇಶವಿರೋಧಿ ಚಟುವಟಿಕೆ ನಡೆಸಿಲ್ಲ. ಡಕಾಯಿತಿ ಅಥವಾ ದೊಂಬಿಯಲ್ಲಿ ಭಾಗಿಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಿದ್ದಕ್ಕೆ ಪ್ರತಿಕ್ರಿಯೆಯಾಗಿ ಮಾತನಾಡಿದ್ದು, ತಮ್ಮ ಹೇಳಿಕೆಯ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದರು.ವಿಶ್ವವೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ನೀಡುತ್ತಿರುವ ಸಂದರ್ಭದಲ್ಲಿ ಅವರ ಬಗ್ಗೆ ಹಗುರವಾಗಿ…

Read More

ಆ. 7, 8ರಂದು 16ನೇ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ

ಕುಂದಾಪುರ:ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುತ್ತಿರುವ ರಾಷ್ಟ್ರಮಟ್ಟದ ಉಚಿತ ಬೃಹತ್ ಉದ್ಯೋಗ ಮೇಳ ‘16ನೇ ಆಳ್ವಾಸ್ ಪ್ರಗತಿ–2026’* ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದ್ದು ಅದರ ಅಂತಿಮ ಹಂತದ ತಯಾರಿಯ ಬಗ್ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ ಆಳ್ವ ಮಾಹಿತಿಯನ್ನು ಹಂಚಿಕೊಂಡರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 15 ಉದ್ಯೋಗ ಮೇಳಗಳ ಮೂಲಕ 40,848 ಅಭ್ಯರ್ಥಿಗಳು ಸ್ಥಳದಲ್ಲೇ ಉದ್ಯೋಗ ಪಡೆದಿದ್ದು, 66,432 ಮಂದಿ ಮುಂದಿನ…

Read More

ಕೆಎಸ್‌ಒಯು ಪ್ರವೇಶಾತಿ ಆರಂಭ; ದೂರಶಿಕ್ಷಣಕ್ಕೆ ಅರ್ಜಿ ಆಹ್ವಾನ

ಮಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು) ದೂರಶಿಕ್ಷಣ ನೀಡಲು ರಾಜ್ಯದಲ್ಲಿ ಮಾನ್ಯತೆ ಪಡೆದ ಏಕೈಕ ವಿಶ್ವವಿದ್ಯಾಲಯವಾಗಿದ್ದು, 2026-27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಕುಲಪತಿ ಎ.ಪಿ. ಜ್ಞಾನಪ್ರಕಾಶ್ ಹೇಳಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ 38 ಪ್ರಾದೇಶಿಕ ಕೇಂದ್ರಗಳು ಹಾಗೂ 118 ಕಲಿಕಾರ್ಥಿ ಸಹಾಯ ಕೇಂದ್ರಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಕಳೆದ 31 ವರ್ಷಗಳಲ್ಲಿ…

Read More
error: Content is protected !!