ಪುತ್ತೂರು: “ನ್ಯಾಯ ಸಿಗದಿದ್ದರೆ ದೇವಸ್ಥಾನದ ಧ್ವಜಸ್ತಂಭದ ಮುಂದೆ ಪ್ರತಿಭಟನೆ” – ಸಂತ್ರಸ್ತೆಯ ತಾಯಿ ಎಚ್ಚರಿಕೆ
“ನನ್ನ ಮಗಳ ವಿಚಾರದಲ್ಲಿ ನ್ಯಾಯ ದೊರೆಯದಿದ್ದರೆ, ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ಧ್ವಜಸ್ತಂಭದ ಮುಂದೆ ಕುಳಿತು ಪ್ರತಿಭಟನೆ ನಡೆಸುತ್ತೇನೆ” ಎಂದು ಸಂತ್ರಸ್ತೆಯ ತಾಯಿ ನಮಿತಾ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ . ಪುತ್ತೂರಿನ ಪತ್ರಿಕಾಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ನಡೆದು ಒಂದು ವರ್ಷ ಕಳೆದಿದ್ದರೂ ಯಾವುದೇ ನ್ಯಾಯ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪಿ.ಜಿ. ಜಗನ್ನಿವಾಸ್ ರಾವ್ ಅವರು ಇಂದಿಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವುದನ್ನು ಅವರು ಪ್ರಶ್ನಿಸಿದರು. “ನನ್ನ ಮಗಳಿಗೆ ಆಗಿರುವ ಅನ್ಯಾಯದ ಬಗ್ಗೆ ಅವರು…
