ಜೈಪುರದಲ್ಲಿ ಭೀಕರ ಅಪಘಾತ: ನಟಿ ಹರ್ಷಿಲ್ ಕಾಲಿಯಾ ಮೃತ್ಯು
ಜೈಪುರ: ರಾಜಸ್ಥಾನದ ಜೈಪುರದಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಖ್ಯಾತ ನಟಿ ಹಾಗೂ ರೂಪದರ್ಶಿ ಹರ್ಷಿಲ್ ಕಾಲಿಯಾ (30) ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ ಶಿಪ್ರಾ ಪಾತ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 11:30ರ ವೇಳೆಗೆ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅವರ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದು ಎಡಬದಿಗೆ ಉರುಳುತ್ತಿರುವುದು ಕಾಣಿಸುತ್ತದೆ….
