Headlines

ರಾಜ್ಯಾದ್ಯಂತ 579 ಮದ್ಯದ ಸನ್ನದುಗಳ ಹಂಚಿಕೆಗೆ ಬೃಹತ್ ಇ-ಹರಾಜು

ಬೆಂಗಳೂರು :ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ಒಟ್ಟು 579 ಮದ್ಯದ ಸನ್ನದುಗಳನ್ನು (Licences) ಮುಂದಿನ 5 ವರ್ಷಗಳ ಅವಧಿಗೆ (ಅಂದರೆ 2026-27 ರಿಂದ 2030-31 ರ ವರೆಗೆ) ಎಲೆಕ್ಟ್ರಾನಿಕ್ ಇ-ಹರಾಜು ಮೂಲಕ ಹಂಚಿಕೆ ಮಾಡಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.ಈ ಸಂಬಂಧ ಬಿಡ್‌ದಾರರ ನೋಂದಣಿ ಪ್ರಕ್ರಿಯೆಯು ಈಗಾಗಲೇ ಜುಲೈ 3 ರಿಂದಲೇ ಆರಂಭವಾಗಿದ್ದು, ಜುಲೈ 24 ರಿಂದ ಜುಲೈ 31 ರವರೆಗೆ ವಿವಿಧ ಹಂತಗಳಲ್ಲಿ ನೇರ ಹರಾಜು (Live Bidding) ಪ್ರಕ್ರಿಯೆ ನಡೆಯಲಿದೆ. 483 ಸಿಎಲ್(2-ಎ) ಮತ್ತು 96 ಸಿಎಲ್(9-ಎ)…

Read More

ಲಾವಣ್ಯ ಹತ್ಯೆಯ ಆರೋಪಿ ಚೇತನ್ ಪರವಾಗಿ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಮನವಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ 16/7/26ರಂದು ಬಿಸಿರೋಡ್ ನಲ್ಲಿ ನಡೆದ ಲಾವಣ್ಯ ಎಂಬ ಮುಗ್ದ ಬಾಲಕಿಯನ್ನು ಬರ್ಬರವಾಗಿ ಹತ್ಯೆಯು ಅಂತ್ಯತ ಕ್ರೂರ ಮತ್ತು ಹೇಯ ಕೃತ್ಯವಾಗಿದ್ದು ಇಂತಹ ಭರ್ಜರ ಕೊಲೆ ಮಾಡಿದ ರಾಕ್ಷಸ ಮಾನಸಿಕತೆಯ ಚೇತನ್ ಎಂಬವನ ಪರವಾಗಿ ಗೌರವಾನ್ವಿತ ನ್ಯಾಯವಾದಿಗಳು ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಇಂದು ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ…

Read More

ಕೌಶಲ್ಯ ತರಬೇತಿ ಕಾರ್ಯಾಗಾರ ಆಗಸ್ಟ್ 12 ರಂದು

ಮಂಗಳೂರು: ಪ್ರಧಾನ ಮಂತ್ರಿ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ಜಾಬ್’ರೋಲ್’ಗಳಲ್ಲಿ ಕೌಶಲ್ಯ ತರಬೇತಿ ನೀಡುವ ಕಾರ್ಯಾಗಾರವನ್ನು ಆಗಸ್ಟ್ 12 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಉರ್ವಾ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿಯಲ್ಲಿ ಆಯೋಜಿಸಲಾಗಿದೆ. 18 ರಿಂದ 50 ವರ್ಷ ವಯಸ್ಸಿನವರು ಈ ತರಬೇತಿಗೆ ಹಾಜರಾಗಬಹುದು. ಆಸಕ್ತರು ಹೆಚ್ಚಿನ ಮಾಹಿತಿಗೆ ಕಛೇರಿ ದೂರವಾಣಿ ಸಂಖ್ಯೆ 0824-2453222 ಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.:

Read More

ಅಮೃತ ಪ್ರಕಾಶ ಪತ್ರಿಕೆಯ 13ನೇ ವರ್ಷದ ವಾರ್ಷಿಕೋತ್ಸವ ಜು. 21ರಂದು

ಮಂಗಳೂರು, ಜು. 18: ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ವತಿಯಿಂದ 13ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಜುಲೈ 21ರಂದು ಬೆಳಿಗ್ಗೆ 10.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕಾವೂರು ಬಂಟರ ಸಂಘದ ಅಧ್ಯಕ್ಷ ಶ್ರೀ ಆನಂದ ಶೆಟ್ಟಿ ಅಡ್ಯಾರ್ ಉದ್ಘಾಟಿಸಲಿದ್ದು, ಕರ್ನಾಟಕ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಸಮಾಜ ಸೇವಕಿ ಲಯನ್ ಆಶಾ ರಾವ್ ಆರೂರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕಾರ್ಯಕ್ರಮದ…

Read More

ಹಿರಿಯ ಪತ್ರಕರ್ತ ಪರಮಾನಂದ ಸಾಲ್ಯಾನ್‌ಗೆ ಭಾವಪೂರ್ಣ ನುಡಿನಮನ

ಮಂಗಳೂರು, ಜು. 18: ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ, ರಂಗಕರ್ಮಿ ಹಾಗೂ ತುಳು ಸಂಸ್ಕೃತಿಯ ಅಧ್ಯಯನಕಾರ ಪರಮಾನಂದ ಸಾಲ್ಯಾನ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, ಪರಮಾನಂದ ಸಾಲ್ಯಾನ್ ಅವರು ಪತ್ರಿಕೋದ್ಯಮದ ಜೊತೆಗೆ ತುಳು ರಂಗಭೂಮಿ, ಜಾನಪದ ಹಾಗೂ ಭೂತಾರಾಧನೆಯ ಕುರಿತು ಅಪಾರ ಜ್ಞಾನ ಹೊಂದಿದ್ದ…

Read More

ಬಹರೈನ್‌ನಲ್ಲಿನ ಅಮೆರಿಕ ಸೇನಾ ನೆಲೆ ಮೇಲೆ ಇರಾನ್ ಕ್ಷಿಪಣಿ ದಾಳಿ

ಹೊಸದಿಲ್ಲಿ, ಜು. 18: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದ್ದು, ಬಹರೈನ್‌ನಲ್ಲಿರುವ ಅಮೆರಿಕದ ಸೇನಾ ನೆಲೆ ಹಾಗೂ ಇಂಧನ ಸಂಗ್ರಹ ಟ್ಯಾಂಕ್‌ಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿರುವುದಾಗಿ ಇರಾನ್ ಸೇನೆ ಹೇಳಿಕೊಂಡಿದೆ. ಇರಾನ್‌ನ ತಸ್ನಿಂ ಸುದ್ದಿ ಸಂಸ್ಥೆ ವರದಿ ಪ್ರಕಾರ, ಬಹರೈನ್‌ನಲ್ಲಿನ ಅಮೆರಿಕದ ಸೇನಾ ನೆಲೆಯ ಮೇಲೆ ನಡೆದ ದಾಳಿಯಲ್ಲಿ ಯುಎಸ್ ಮಿಲಿಟರಿ ಸ್ವತ್ತುಗಳು ಹಾಗೂ ಇಂಧನ ಟ್ಯಾಂಕ್‌ಗಳಿಗೆ ಹಾನಿಯಾಗಿದೆ. ದಾಳಿಯಲ್ಲಿ ಶೇಖ್ ಈಸಾ ವಾಯುನೆಲೆಯ ವಿಮಾನ ನಿಲುಗಡೆ ಪ್ರದೇಶವೂ ಗುರಿಯಾಗಿತ್ತು ಎಂದು ತಿಳಿಸಲಾಗಿದೆ. ಜಾಗತಿಕ ದುರಹಂಕಾರದ ವಿರುದ್ಧದ…

Read More

ಭಾರತದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ

ಶ್ರೀಹರಿಕೋಟಾ, ಜು. 18: ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ ಖಾಸಗಿ ಕಕ್ಷಾ (ಆರ್ಬಿಟಲ್ ಕ್ಲಾಸ್) ರಾಕೆಟ್ ‘ವಿಕ್ರಮ್-1’ ಶನಿವಾರ ಯಶಸ್ವಿಯಾಗಿ ಉಡಾವಣೆಯಾಯಿತು. ಹೈದರಾಬಾದ್ ಮೂಲದ ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿರುವ ಈ ರಾಕೆಟ್‌ನ ಪರೀಕ್ಷಾ ಉಡಾವಣೆಗೆ ‘ಮಿಷನ್ ಆಗಮನ’ ಎಂದು ಹೆಸರಿಡಲಾಗಿದ್ದು, ಇದು ಭಾರತದ ವಾಣಿಜ್ಯ ಬಾಹ್ಯಾಕಾಶ ಕ್ಷೇತ್ರಕ್ಕೆ ಹೊಸ ಅಧ್ಯಾಯ ತೆರೆದಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ವೇದಿಕೆಯಿಂದ ಮಧ್ಯಾಹ್ನ 12.05ಕ್ಕೆ ನಾಲ್ಕು ಹಂತಗಳ ವಿಕ್ರಮ್-1…

Read More

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ: ಪ್ರಯಾಣಿಕರು ಅಪಾಯದಿಂದ ಪಾರು – ಕಾರಿನ ಮುಂಭಾಗ ಸಂಪೂರ್ಣ ಭಸ್ಮ

ಕಡಬ ನೆಲ್ಯಾಡಿ : ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಸುಟ್ಟುಹೋದ ಘಟನೆ ನಡೆದಿದೆ. ಸಮಯಪ್ರಜ್ಞೆ ಪ್ರದರ್ಶಿಸಿದ ಚಾಲಕ ಹಾಗೂ ಸ್ಥಳೀಯರ ಕಾರ್ಯಾಚರಣೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಗೋಳಿತ್ತೊಟ್ಟು ಶಿರಾಡಿಗುಡ್ಡೆ ಸಮೀಪ ತಲುಪುತ್ತಿದ್ದ ವೇಳೆ ಕಾರಿನ ಇಂಜಿನ್ ಭಾಗದಿಂದ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಬೆಂಗಳೂರು ನಿವಾಸಿ…

Read More

ಶಿಕ್ಷಣ ತಜ್ಞೆ, ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ, ಸಾಹಿತಿ ಡಾ ಅನುರಾಧ ಕುರುಂಜಿ ಸುಳ್ಯರಿಗೆ ರಾಷ್ಟ್ರೀಯ ಪ್ರಶಸ್ತಿ. … !

ಕಾಸರಗೋಡು : ಶಿಕ್ಷಣ ತಜ್ಞೆ, ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ, ಸಾಹಿತಿ ಹಾಗೂ ಸಮಾಜಸೇವಕಿ ಡಾ. ಅನುರಾಧ ಕುರುಂಜಿ ಅವರಿಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026” ಘೋಷಿಸಲಾಗಿದೆ. ಗಡಿನಾಡು ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಅವರ ಸಂಚಾಲಕತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಖ್ಯಾತ ಕನ್ನಡ ಭವನ ಮತ್ತು ಗ್ರಂಥಾಲಯ ಈ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯನ್ನು ಡಾ. ಅನುರಾಧ ಕುರುಂಜಿ ಅವರಿಗೆ ನೀಡಲು ಆಯ್ಕೆ ಮಾಡಿದೆ. ವೃತ್ತಿಯಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿರುವ ಡಾ. ಅನುರಾಧ ಕುರುಂಜಿ…

Read More

ಉರ್ವಾ ಸುಂಕದಕಟ್ಟೆಯಲ್ಲಿ ನೀರಿನ ಸಮಸ್ಯೆ: ಸ್ಥಳಕ್ಕೆ ಭೇಟಿ ನೀಡಿ ಪರಿಹಾರಕ್ಕೆ ಐವನ್ ಡಿ’ಸೋಜಾ ಸೂಚನೆ

ಮಂಗಳೂರು, ಜು. 18: ನಗರದ ಉರ್ವಾ ಸ್ಟೋರ್ ಸಮೀಪದ ಸುಂಕದಕಟ್ಟೆ ಪ್ರದೇಶದಲ್ಲಿ ಕುಡಿಯುವ ನೀರಿನ ಅಸಮರ್ಪಕ ಪೂರೈಕೆಯಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ನಿವಾಸಿಗಳಿಂದ ಅಹವಾಲು ಸ್ವೀಕರಿಸಿದ ಅವರು, ನೀರು ಸರಬರಾಜು ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿ ಸಮಸ್ಯೆಗೆ ತ್ವರಿತ ಪರಿಹಾರ ಕಲ್ಪಿಸುವಂತೆ ಸೂಚಿಸಿದರು. ಈ ವೇಳೆ ಸಾರ್ವಜನಿಕರು, ನಿರಂತರ ಮಳೆಯಾಗುತ್ತಿದ್ದರೂ ಪ್ರದೇಶದಲ್ಲಿ ಕುಡಿಯುವ ನೀರನ್ನು ರೇಷನಿಂಗ್ ಪದ್ಧತಿಯಲ್ಲಿ…

Read More
error: Content is protected !!