ಎ ಟಿ ಎಂ ಕಳ್ಳತನದ ವಿಫಲ ಯತ್ನ ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ
ಉಳ್ಳಾಲ: ರಾತ್ರೋ ರಾತ್ರಿ ಕೋಟೆಕಾರು ಬೀರಿ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ದೆಹಲಿಯ ಕಾವಲು ವ್ಯವಸ್ಥೆಯ ಎಚ್ಚರಿಕೆಯ ಮೇರೆಗೆ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿಯ ನಿವಾಸಿ ನಾಗಪ್ಪ ಕೇರಳಟ್ಟಿ (41) ಎಂಬಾತನನ್ನು ಮುಂಜಾನೆ 3 ಗಂಟೆ ಸುಮಾರಿಗೆ ಎಸ್‌ಬಿಐ ಎಟಿಎಂನಲ್ಲಿದ್ದ ಕ್ಯಾಶ್ ಬಾಕ್ಸ್ ಒಡೆಯಲು ಯತ್ನಿಸುತ್ತಿದ್ದಾಗ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಪೊಲೀಸರ ಪ್ರಕಾರ, ನಾಗಪ್ಪ ಬೆಳಗಿನ ಜಾವ 2:30 ರ ಸುಮಾರಿಗೆ ಎಟಿಎಂ ಒಳಗೆ ಪ್ರವೇಶಿಸಿ, ತಾನು ತಂದಿದ್ದ ಉಪಕರಣಗಳನ್ನು…