ಮಂಜೇಶ್ವರ ವಿಧಾನಸಭಾ ಕ್ಷೇತ್ರ: ಎಸ್‌ಡಿಪಿಐ ಅಭ್ಯರ್ಥಿ ಅಶ್ರಫ್ ಬಡಾಜೆ ನಾಮಪತ್ರ ಸಲ್ಲಿಕೆ
ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಸ್‌ಡಿಪಿಐ ಅಭ್ಯರ್ಥಿ ಅಶ್ರಫ್ ಬಡಾಜೆ ಅವರು ಸೋಮವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಮಧ್ಯಾಹ್ನ ಸುಮಾರು 1.30ರ ವೇಳೆಗೆ ಉಪ್ಪಳ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಅವರು ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಅಭ್ಯರ್ಥಿಗೆ ಬೆಂಬಲ ಸೂಚಿಸಿದರು. ನಾಮಪತ್ರ ಸಲ್ಲಿಕೆಗೆ ಮುನ್ನ ಕಾರ್ಯಕರ್ತರು ಉಪ್ಪಳ ಪಟ್ಟಣದ ವಿವಿಧ ಭಾಗಗಳಲ್ಲಿ ಮೆರವಣಿಗೆ ನಡೆಸಿ ಘೋಷಣೆಗಳನ್ನು ಕೂಗಿದರು. ಪಕ್ಷದ…
