ಯಕ್ಷಗಾನ ದಿಗ್ಗಜ ಸೂರಿಕುಮೇರು ಗೋವಿಂದ ಭಟ್ ನಿಧನ
ತೀರ್ಥಹಳ್ಳಿ: ತೆಂಕುತಿಟ್ಟು ಯಕ್ಷಗಾನದ ಅಗ್ರಗಣ್ಯ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ವೇಷಧಾರಿ ಸೂರಿಕುಮೇರು ಗೋವಿಂದ ಭಟ್ (86) ಅವರು ಶುಕ್ರವಾರ ರಾತ್ರಿ ಸುಮಾರು 9 ಗಂಟೆಗೆ ನಿಧನರಾದರು. ತೀರ್ಥಹಳ್ಳಿಯ ತಮ್ಮ ಹಿರಿಯ ಪುತ್ರನ ಮನೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಅವರು ಮೂವರು ಪುತ್ರರನ್ನು ಅಗಲಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ‘ನಡೆದಾಡುವ ವಿಶ್ವಕೋಶ’ ಹಾಗೂ ‘ದಶಾವತಾರಿ’ ಎಂದೇ ಪ್ರಸಿದ್ಧರಾಗಿದ್ದ ಗೋವಿಂದ ಭಟ್ ಅವರು ತೆಂಕುತಿಟ್ಟು ಯಕ್ಷಗಾನ ಕಂಡ ಶ್ರೇಷ್ಠ ಕಲಾವಿದರಲ್ಲಿ ಒಬ್ಬರಾಗಿದ್ದರು. 1951ರಲ್ಲಿ ಯಕ್ಷಗಾನ ಮೇಳಕ್ಕೆ ಸೇರ್ಪಡೆಯಾಗಿ ಸುಮಾರು…
