ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ: ಪ್ರಯಾಣಿಕರು ಅಪಾಯದಿಂದ ಪಾರು – ಕಾರಿನ ಮುಂಭಾಗ ಸಂಪೂರ್ಣ ಭಸ್ಮ

ಕಡಬ ನೆಲ್ಯಾಡಿ : ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಸುಟ್ಟುಹೋದ ಘಟನೆ ನಡೆದಿದೆ. ಸಮಯಪ್ರಜ್ಞೆ ಪ್ರದರ್ಶಿಸಿದ ಚಾಲಕ ಹಾಗೂ ಸ್ಥಳೀಯರ ಕಾರ್ಯಾಚರಣೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಗೋಳಿತ್ತೊಟ್ಟು ಶಿರಾಡಿಗುಡ್ಡೆ ಸಮೀಪ ತಲುಪುತ್ತಿದ್ದ ವೇಳೆ ಕಾರಿನ ಇಂಜಿನ್ ಭಾಗದಿಂದ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಬೆಂಗಳೂರು ನಿವಾಸಿ…

Read More

ಶಿಕ್ಷಣ ತಜ್ಞೆ, ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ, ಸಾಹಿತಿ ಡಾ ಅನುರಾಧ ಕುರುಂಜಿ ಸುಳ್ಯರಿಗೆ ರಾಷ್ಟ್ರೀಯ ಪ್ರಶಸ್ತಿ. … !

ಕಾಸರಗೋಡು : ಶಿಕ್ಷಣ ತಜ್ಞೆ, ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ, ಸಾಹಿತಿ ಹಾಗೂ ಸಮಾಜಸೇವಕಿ ಡಾ. ಅನುರಾಧ ಕುರುಂಜಿ ಅವರಿಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026” ಘೋಷಿಸಲಾಗಿದೆ. ಗಡಿನಾಡು ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಅವರ ಸಂಚಾಲಕತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಖ್ಯಾತ ಕನ್ನಡ ಭವನ ಮತ್ತು ಗ್ರಂಥಾಲಯ ಈ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯನ್ನು ಡಾ. ಅನುರಾಧ ಕುರುಂಜಿ ಅವರಿಗೆ ನೀಡಲು ಆಯ್ಕೆ ಮಾಡಿದೆ. ವೃತ್ತಿಯಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿರುವ ಡಾ. ಅನುರಾಧ ಕುರುಂಜಿ…

Read More

ಉರ್ವಾ ಸುಂಕದಕಟ್ಟೆಯಲ್ಲಿ ನೀರಿನ ಸಮಸ್ಯೆ: ಸ್ಥಳಕ್ಕೆ ಭೇಟಿ ನೀಡಿ ಪರಿಹಾರಕ್ಕೆ ಐವನ್ ಡಿ’ಸೋಜಾ ಸೂಚನೆ

ಮಂಗಳೂರು, ಜು. 18: ನಗರದ ಉರ್ವಾ ಸ್ಟೋರ್ ಸಮೀಪದ ಸುಂಕದಕಟ್ಟೆ ಪ್ರದೇಶದಲ್ಲಿ ಕುಡಿಯುವ ನೀರಿನ ಅಸಮರ್ಪಕ ಪೂರೈಕೆಯಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ನಿವಾಸಿಗಳಿಂದ ಅಹವಾಲು ಸ್ವೀಕರಿಸಿದ ಅವರು, ನೀರು ಸರಬರಾಜು ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿ ಸಮಸ್ಯೆಗೆ ತ್ವರಿತ ಪರಿಹಾರ ಕಲ್ಪಿಸುವಂತೆ ಸೂಚಿಸಿದರು. ಈ ವೇಳೆ ಸಾರ್ವಜನಿಕರು, ನಿರಂತರ ಮಳೆಯಾಗುತ್ತಿದ್ದರೂ ಪ್ರದೇಶದಲ್ಲಿ ಕುಡಿಯುವ ನೀರನ್ನು ರೇಷನಿಂಗ್ ಪದ್ಧತಿಯಲ್ಲಿ…

Read More

ಮತದಾರರ ಪಟ್ಟಿ ಪರಿಷ್ಕರಣೆ ಅವ್ಯವಸ್ಥೆ ಆರೋಪ: ಐವನ್ ಡಿ’ಸೋಜಾ ನೇತೃತ್ವದಲ್ಲಿ ಡಿಸಿಗೆ ಮನವಿ

ಮಂಗಳೂರು, ಜು. 18: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹಾಗೂ ಎನ್ಯುಮರೇಷನ್ ಪ್ರಕ್ರಿಯೆಯಲ್ಲಿ ಅಕ್ರಮಗಳು ಮತ್ತು ಅವ್ಯವಸ್ಥೆಗಳು ನಡೆಯುತ್ತಿವೆ ಎಂದು ಆರೋಪಿಸಿ, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ನಿಯೋಗವು ಶುಕ್ರವಾರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಐವನ್ ಡಿ’ಸೋಜಾ, ಜಿಲ್ಲೆಯಾದ್ಯಂತ ಎಸ್‌ಐಆರ್ ಪ್ರಕ್ರಿಯೆ ಸಮರ್ಪಕವಾಗಿ ನಡೆಯಲು ಕಾಂಗ್ರೆಸ್ ಪಕ್ಷವು 1,750ಕ್ಕೂ ಅಧಿಕ ಬೂತ್ ಮಟ್ಟದ ಏಜೆಂಟರನ್ನು…

Read More

ಲಾವಣ್ಯ ಹತ್ಯೆ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ: ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ

ಮಂಗಳೂರು: ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನಲ್ಲಿ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣವನ್ನು ಖಂಡಿಸಿ ನವಸಹಜ ಸಮುದಾಯ ಸಂಘಟನೆಯ ನೇತೃತ್ವದಲ್ಲಿ ಶನಿವಾರ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಸದಸ್ಯರು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ನವಸಹಜ ಸಮುದಾಯ ಸಂಘಟನೆಯ ಅಧ್ಯಕ್ಷೆ ನಿಖಿಲಾ, “ಜುಲೈ 16ರಂದು ನಡೆದ ಅಮಾಯಕ ಯುವತಿಯ ಭೀಕರ ಹತ್ಯೆ ಇಡೀ ಸಮಾಜವನ್ನು ಬೆಚ್ಚಿಬೀಳಿಸಿದೆ. ಇಂತಹ ಅಮಾನುಷ ಕೃತ್ಯ ಎಸಗಿದವರಿಗೆ ಯಾವುದೇ ರೀತಿಯ…

Read More

ಸರಕಾರಿ ಆಸ್ಪತ್ರೆ ಕಡೆಗಣಿಸುವಲ್ಲಿ ಬಿಜೆಪಿ ಕಾಂಗ್ರೇಸನದ್ದು ಒಂದೇ ಬಗೆಯ ನೀತಿ – ಸುನೀಲ್ ಕುಮಾರ್ ಬಜಾಲ್

ಸರಕಾರಿ ಆಸ್ಪತ್ರೆಗಳನ್ನು ಸಕಲ ಮೂಲಭೂತ ಸೌಕರ್ಯಗಳ ಸಹಿತ ಮೇಲ್ದರ್ಜೆಗೇರಿಸುವ ಬದಲಾಗಿ ಖಾಸಗೀ ಆಸ್ಪತ್ರೆಗಳ ಹಿತಾಸಕ್ತಿಯನ್ನೇ ಬಯಸುವವರಲ್ಲಿ ಆಳುವ ಪಕ್ಷ ಕಾಂಗ್ರೇಸಾಗಲಿ ಅಥವಾ ಬಿಜೆಪಿಯಾಗಲಿ ಇವರಿಬ್ಬರು ಒಂದೇ ಬಗೆಯ ನೀತಿ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ ಮಾರ್ಕ್ಸ್‌ವಾದಿ (ಸಿಪಿಐಎಂ )ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನೀಲ್ ಕುಮಾರ್ ಬಜಾಲ್ ಅವರು ಇಂದು ( 18-7-26) ಪಡೀಲು ಜಂಕ್ಷನ್, ನಗರ ಆರೋಗ್ಯ ಕೇಂದ್ರದ ಬಳಿ ಸಿಪಿಐಎಂ ಬಜಾಲ್ ವಿಭಾಗ ಸಮಿತಿ ನೇತೃತ್ವದಲ್ಲಿ ನಡೆದ ಮಾನವ ಸರಪಳಿ ಪ್ರತಿಭಟನೆಯನ್ನು ಉದ್ದೇಶಿಸಿ…

Read More

ಪಂಪ್‌ವೆಲ್ ಆಧಾರ್ ಸೇವಾ ಕೇಂದ್ರಕ್ಕೆ ಐವನ್ ಡಿ’ಸೋಜಾ ದಿಢೀರ್ ಭೇಟಿ

ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ ಅವರು ಶನಿವಾರ ಮಂಗಳೂರು ನಗರದ ಪಂಪ್‌ವೆಲ್‌ನಲ್ಲಿರುವ ಆಧಾರ್ ಸೇವಾ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ, ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು.ಟೋಕನ್ ಪಡೆಯಲು ಸರದಿಯಲ್ಲಿ ನಿಂತಿದ್ದ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದ ಅವರು, ಸೇವಾ ಕೇಂದ್ರದಲ್ಲಿ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಅಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ಕೇಂದ್ರದ ಸೆಂಟ್ರಲ್ ಮ್ಯಾನೇಜರ್ ರಾಘವೇಂದ್ರ ಅವರನ್ನು ಭೇಟಿ ಮಾಡಿದ ಐವನ್ ಡಿ’ಸೋಜಾ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸುಗಮ, ಶೀಘ್ರ…

Read More

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ

ವಿಟ್ಲ: ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆವಿಟ್ಲ ಸಮೀಪದ ಉಕ್ಕುಡ ಬಳಿ ಜು.೧೭ರಂದು ರಾತ್ರಿ ನಡೆದಿದೆ.ಗಾಯಾಳುಗಳನ್ನು ಪುತ್ತೂರು ಮೂಲದ ದಿನೇಶ್ ಮತ್ತು ಅಂಕಿತ್ ಎಂದು ಗುರುತಿಸಲಾಗಿದೆ. ವಿಟ್ಲ-ಅಡ್ಯನಡ್ಕ ರಸ್ತೆಯ ಉಕ್ಕುಡ ದರ್ಬೆ ಎಂಬಲ್ಲಿನ ಅಪಾಯಕಾರಿ ರಸ್ತೆ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಉಕ್ಕುಡ ಕಡೆಯಿಂದ ಕುದ್ದುಪದವು ಕಡೆಗೆ ಸಂಚರಿಸುತ್ತಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಢಿಕ್ಕಿಯ…

Read More

ಮೂಡಬಿದಿರೆಯಲ್ಲಿ ವಿವಾಹಿತೆ ಮೃತ ಸ್ಥಿತಿಯಲ್ಲಿ ಪತ್ತೆ; ಪೊಲೀಸ್ ತನಿಖೆ

ಮಂಗಳೂರು :ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಅರ್ಚಕ ಗುರು ಭಟ್ ಅವರ ಪತ್ನಿ ಸ್ನೇಹಾ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ ಎಂದು ತಿಳಿದುಬಂದಿದೆ.

Read More

ಉರ್ವ ಮನೆ ಕಳವು ಪ್ರಕರಣಕ್ಕೆ ಟ್ವಿಸ್ಟ್ ;ಮೂವರು ಅಂತಾರಾಜ್ಯ ಕಳ್ಳರು ಅರೆಸ್ಟ್

ಮಂಗಳೂರು:ನಗರದ ಉರ್ವ ಮಾರ್ಕೆಟ್ ಸಮೀಪದ ಮಠದಕಣಿಯ ಮನೆಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಮೂವರು ಆರೋಪಿಗಳನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ನೇಪಾಳದ ತಿಲಕ್ ಕುಮಾರ್ ಖಡ್ಕ ಯಾನೆ ತಿಲಕ್ ಖಡ್ಕ (36) ಮತ್ತು ಅಶೋಕ್ ರಾಜ್ ಯಾನೆ ಅಶೋಕ್ ಸಿಂಗ್ ಯಾನೆ ಅಶೋಕ್ ಸಿಂಗ್ ಠಾಕುರಿ (33) ಹಾಗೂ ದಿಪೆಂದರ್ ರಸೈಲಿ (25) ಎಂದು ಗುರುತಿಸಲಾಗಿದೆ. ಜು.11ರಂದು ಸಂಜೆ 5:30ಕ್ಕೆ ಮನೆಮಂದಿ ಮನೆಗೆ ಲಾಕ್ ಮಾಡಿಕೊಂಡು ಬಂಟ್ವಾಳ ತಾಲೂಕಿನ ವಿಟ್ಲ ಕಡಂಬು ಎಂಬಲ್ಲಿರುವ ಸಂಬಂಧಿಕರ…

Read More
error: Content is protected !!