ಮಸೀದಿಯ ಕಾಣಿಕೆ ಹುಂಡಿ ಕಳ್ಳತನ : ಆರೋಪಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕಾಸರಗೋಡು : ಹೊಸದುರ್ಗದ ಕೋಟಚ್ಚೇರಿ ಟ್ರಾಫಿಕ್ ಸರ್ಕಲ್ ಸಮೀಪವಿರುವ ಬದ್ರಿಯಾ ಮಸೀದಿಯಲ್ಲಿ ಕಳ್ಳತನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಸೀದಿಯಲ್ಲಿ ಇರಿಸಲಾಗಿದ್ದ ಕಾಣಿಕೆ ಹುಂಡಿಯನ್ನು ದುಷ್ಕರ್ಮಿಯೊಬ್ಬ ಕೆಡವಿ, ಅದಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿದ್ದಾನೆ. ಈ ಕೃತ್ಯದ ದೃಶ್ಯಗಳು ಮಸೀದಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದ್ದು, ಇದರ ಆಧಾರದ ಮೇಲೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ವ್ಯಕ್ತಿಯ ದೃಶ್ಯವನ್ನು ಪೊಲೀಸರು ಇದೀಗ ಸಾರ್ವಜನಿಕವಾಗಿ ಬಿಡುಗಡೆ ಮಾಡಿದ್ದಾರೆ. ಈ ವ್ಯಕ್ತಿಯ ಕುರಿತು ಯಾವುದೇ ಸುಳಿವು ಅಥವಾ ಮಾಹಿತಿ ದೊರೆತರೆ,…
