ಹೆಣ್ಣುಮಕ್ಕಳ ವಿರುದ್ಧ ಭೇದಭಾವ ತೊಡೆದುಹಾಕಿ: ಕಾರ್ಯಾಗಾರದಲ್ಲಿ ಕರೆ -ಡಾ. ಶಿವಪ್ರಕಾಶ್
ಮಂಗಳೂರು: ಲಿಂಗಾನುಪಾತ ಹದಗೆಡಲು ವರದಕ್ಷಿಣೆ ಎಂಬ ಸಾಮಾಜಿಕ ಪಿಡುಗು ಪ್ರಮುಖ ಕಾರಣವಾಗಿದ್ದು, ಈ ದುಷ್ಪ್ರಥೆಯನ್ನು ನಿರ್ಮೂಲನೆ ಮಾಡಬೇಕಾಗಿದೆ ಎಂದು ವೆನ್‍ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಶಿವಪ್ರಕಾಶ್ ಅಭಿಪ್ರಾಯಪಟ್ಟರು. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ–1994 ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆಣ್ಣು ಮಗು ಹುಟ್ಟಿದರೆ…
