ಮಾರ್ಚ್ 20ರಂದು ತುಳು ಭವನದಲ್ಲಿ ‘ಮೂರನೇ ವಿದ್ಯಾರ್ಥಿ ತುಳು ಸಮ್ಮೇಳನ’
ಮಂಗಳೂರು: ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡುವ ಉದ್ದೇಶದಿಂದ ತುಳು ಪರಿಷತ್ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಜಂಟಿಯಾಗಿ ಮಾರ್ಚ್ 20ರಂದು ನಗರದ ತುಳು ಭವನದಲ್ಲಿ ‘ಮೂರನೇ ವಿದ್ಯಾರ್ಥಿ ತುಳು ಸಮ್ಮೇಳನ’ವನ್ನು ಆಯೋಜಿಸಿವೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತುಳು ಪರಿಷತ್ ಅಧ್ಯಕ್ಷ ಶುಭೋದಯ್ ಆಳ್ವ, ಈ ಸಮ್ಮೇಳನ ಸಂಪೂರ್ಣವಾಗಿ ವಿದ್ಯಾರ್ಥಿಗಳನ್ನು ಕೇಂದ್ರವಾಗಿರಿಸಿಕೊಂಡಿದ್ದು, ಕಾರ್ಯಕ್ರಮದ ವಿವಿಧ ಭಾಗಗಳನ್ನು ವಿದ್ಯಾರ್ಥಿಗಳೇ ಮುನ್ನಡೆಸಲಿದ್ದಾರೆ ಎಂದು ಹೇಳಿದರು. ಈ ಬಾರಿ ಪ್ರತಿಭಾವಂತ ವಿದ್ಯಾರ್ಥಿಗಳೇ ಉದ್ಘಾಟಕರಾಗಿ…
