ಚುನಾವಣೆ ಸಮಯದಲ್ಲಿ ಮಾತ್ರ ರಾಜಕೀಯ, ಅಭಿವೃದ್ಧಿಗಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡೋಣ, ಉಳಿದ ಸಂದರ್ಭದಲ್ಲಿ ಅಭಿವೃದ್ಧಿ ಕಡೆಗಷ್ಟೆ ಗಮನ ಹರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ಬೈಂದೂರು ಉತ್ಸವದಲ್ಲಿ ಮಾತನಾಡಿದ ಸಚಿವರು, ಅಭಿವೃದ್ಧಿ ವಿಚಾರದಲ್ಲಿ ನಾನು ಎಂದಿಗೂ ರಾಜಕಾರಣ ಮಾಡಿಲ್ಲ, ಮಾಡುವುದೂ ಇಲ್ಲ, ಅಭಿವೃದ್ಧಿಗಷ್ಟೇ ಆದ್ಯತೆ ನೀಡುತ್ತೇನೆ ಎಂದರು. ಮಹಾತ್ಮ ಗಾಂಧಿಯವರ ಅವರ ಪರಿಕಲ್ಪನೆಯಂತೆ ಶಾಸಕ ಗುರುರಾಜ್ ಗಂಟಿಹೊಳೆ ಅವರು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮ ಸ್ವರಾಜ್,…

Read More

ಹಿಂಸಾತ್ಮಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿದರೆ ಕಠಿಣ ಕ್ರಮ ಖಚಿತ: ದಿನೇಶ್ ಗುಂಡೂರಾವ್

ಮಂಗಳೂರು:ಯಾವುದೇ ಶಕ್ತಿ ಅಥವಾ ವ್ಯಕ್ತಿ ತಮ್ಮ ವೈಯಕ್ತಿಕ ಲಾಭಕ್ಕಾಗಿ ಇಲ್ಲಿನ ಯುವಕರನ್ನು ದಾರಿ ತಪ್ಪಿಸಿ ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗಲು ಪ್ರೋತ್ಸಾಹಿಸುವುದನ್ನು ಸರ್ಕಾರ ಸಹಿಸುವುದಿಲ್ಲ. ಇಂತಹ ಕೃತ್ಯಗಳು ಕಂಡುಬಂದಲ್ಲಿ ಅವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಯಾವುದೇ ಹಿಂಜರಿಕೆಯನ್ನು ತೋರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಸ್ಪಷ್ಟಪಡಿಸಿದರು. ನಗರದ ನೆಹರೂ ಮೈದಾನದಲ್ಲಿ ಇಂದು ಜಿಲ್ಲಾ ಮಟ್ಟದ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದ ಅವರು .ಪ್ರತಿಯೊಬ್ಬರೂ ತಮ್ಮ ತಮ್ಮ ಧರ್ಮಗಳ…

Read More

ಮೂಡಬಿದ್ರೆಯಲ್ಲಿ ದಿಶಾ ಟ್ರಸ್ಟ್–ತೋಟಗಾರಿಕಾ ಇಲಾಖೆ ಜಂಟಿ ಬೆಳೆ ಸಂರಕ್ಷಣೆ ಮಾಹಿತಿ ಕಾರ್ಯಾಗಾರ

ಮಂಗಳೂರು:ದಿಶಾ ಟ್ರಸ್ಟ್ ರಿ. ಕೈಕಂಬ ಮಂಗಳೂರು ಮತ್ತು ಮಂಗಳೂರು ತಾಲೂಕು ತೋಟಗಾರಿಕಾ ಇಲಾಖೆ ಜಂಟಿ ಸಹಭಾಗಿತ್ವದಲ್ಲಿ  ಬೆಳೆ ಸಂರಕ್ಷಣೆ ಕುರಿತ ಮಾಹಿತಿ ಕಾರ್ಯಾಗಾರ ಮೂಡಬಿದ್ರೆಯಲ್ಲಿ ನಡೆಯಿತು.ಕೃಷಿಕರ ನೆಲ ಜಲ ಅಭಿವೃದ್ಧಿ ಸಂಘ ಶಿರ್ತಾಡಿ , ಮಕ್ಕಿ ಕಜೆ ಇವರ ಸಹಕಾರದೊಂದಿಗೆ   ಮೂಡಬಿದ್ರೆ ತಾಲೂಕಿನ  ಶಿರ್ತಾಡಿ  ಗ್ರಾಮ ಪಂಚಾಯತ್  ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು  ದಿಶಾ ಟ್ರಸ್ಟ್ ನ  ಯೋಜನಾ ನಿರ್ದೇಶಕರಾದ ಡಾ. ಐರಿನ್ ವೇಗಸ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮುಂದಿನ ಮೂರು ವರ್ಷಗಳಲ್ಲಿ  ನೈಸರ್ಗಿಕ ಸಂಪನ್ಯೂಲ   ಯೋಜನೆಯನ್ನು…

Read More

ಸಾಹಿತಿ, ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಂ ಅವರಿಗೆ ಪಂಚಮಿ ಪುರಸ್ಕಾರ ಪ್ರದಾನ

ಉಡುಪಿ: ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವುಗಳ ಸಹಕಾರದೊಂದಿಗೆ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಂಡ ಸಂಸ್ಕೃತಿ ಉತ್ಸವದ ಎರಡನೆ ದಿನದ ಕಾರ್ಯಕ್ರಮದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಪ್ರಾಯೋಜಿತ ಪಂಚಮಿ ಪುರಸ್ಕಾರವನ್ನು ಸಾಹಿತಿ, ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಂ ಅವರಿಗೆ ಪ್ರದಾನ ಮಾಡಲಾಯಿತು.ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಟಿ.ಎನ್. ಸೀತಾರಾಂ ಅವರು, ಕೃತಕ ಬುದ್ದಿಮತ್ತೆ ಸಾಹಿತ್ಯ, ಸಂಸ್ಕೃತಿಗಳ ಕ್ಷೇತ್ರಕ್ಕೆ ಕಾಲಿಟ್ಟರೆ ಸೃಷ್ಠಿಶೀಲ ಮನಸ್ಸುಗಳು ನಾಶವಾಗಿ ದೊಡ್ಡ ಅಪಾಯ ಉಂಟು ಮಾಡುವ…

Read More

ಮಂಜೇಶ್ವರ ಎಕ್ಸೈಸ್ ಚೆಕ್‌ಪೋಸ್ಟ್‌ನಲ್ಲಿ ಕೆಎಸ್ಸಾರ್ಟಿಸಿ ಬಸ್ ತಪಾಸಣೆ: ಲಹರಿಮರೆಯೊಂದಿಗೆ ಯುವಕ ಬಂಧನ

ಮಂಜೇಶ್ವರ ಎಕ್ಸೈಸ್ ಚೆಕ್‌ಪೋಸ್ಟ್ ಎದುರು ನಡೆಸಿದ ತಪಾಸಣೆಯಲ್ಲಿ ಕೆಎಸ್ಸಾರ್ಟಿಸಿ ಬಸ್‌ನಿಂದ ಲಹರಿಮರೆಯೊಂದಿಗೆ ಯುವಕನೊಬ್ಬನನ್ನು ಎಕ್ಸೈಸ್ ಅಧಿಕಾರಿಗಳು ಬಂಧಿಸಿದ್ದಾರೆ. ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ KL 15 – 9995 ಸಂಖ್ಯೆಯ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಈ ತಪಾಸಣೆ ನಡೆಸಲಾಯಿತು. ಹೊಸದುರ್ಗ ಪನಯಾಲ್ ನಿವಾಸಿ ರಾಜೀವನ್ ಅವರ ಪುತ್ರ ಗೋಕುಲ್ ರಾಜೀವ್ ಎಂಬಾತನಿಂದ 0.52 ಗ್ರಾಂ ಮೆಥಾಂಫೆಟಮಿನ್ ಹಾಗೂ 2.38 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.ಮಂಜೇಶ್ವರ ಎಕ್ಸೈಸ್ ಚೆಕ್‌ಪೋಸ್ಟ್‌ನ ಎಕ್ಸೈಸ್ ಇನ್ಸ್‌ಪೆಕ್ಟರ್ ಆದರ್ಶ್ ಜಿ. ಅವರ ನೇತೃತ್ವದ ತಂಡವು ಲಹರಿಮರೆಯನ್ನು ಪತ್ತೆಹಚ್ಚಿ ಆರೋಪಿಯನ್ನು…

Read More

ಜ.28, 29: ಸಂತ ಅಲೋಶಿಯಸ್ ವಿವಿಯಲ್ಲಿ ಅಂತ‌ರ್ ರಾಷ್ಟ್ರೀಯ ಸಮ್ಮೇಳನ …. !

ಮಂಗಳೂರು,:ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವ ವಿದ್ಯಾನಿಲಯದಲ್ಲಿ ಸ್ಕೂಲ್ ಆಫ್ ಆರ್ಟ್ಸ್ ಆಂಡ್ ಹ್ಯುಮಾನಿಟೀಸ್ ವತಿ ಯಿಂದ ‘ಸುಸ್ಥಿರ ಅಭಿವೃದ್ಧಿಗಾಗಿ ಶಾಂತಿ ಮತ್ತು ಸಮಾ ವೇಶಿತ ಸಮಾಜಗಳ ಉತ್ತೇಜನ’ ಎಂಬ ವಿಷಯ ದಲ್ಲಿ ಜ.28 ಮತ್ತು 29ರಂದು ಎರಡು ದಿನಗಳ ಅಂತ‌ರ್ ರಾಷ್ಟ್ರೀಯ ಸಮ್ಮೇಳನ ಆಯೋಜಿ ಸಲಾಗಿದೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮ್ಮೇಳನದ ಅಧ್ಯಕ್ಷೆ ಡಾ.ರೋಸ್‌ವೀರ ಡಿಸೋಜ, ಜ.28ರಂದು ಬೆಳಗ್ಗೆ 10ಕ್ಕೆ ಎಲ್.ಎಫ್.ರಸ್ಕಿನ್ಹಾ ಸಭಾಂ ಗಣದಲ್ಲಿ ಡಿಸಿ ಎಚ್.ವಿ. ದರ್ಶನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂತ ಅಲೋಶಿಯಸ್ ವಿವಿಯ…

Read More

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ವಿಬಿ–ಜಿ ರಾಮ್ ಜಿ” ಕುರಿತು ಕಾರ್ಯಾಗಾರ

ಮಂಗಳೂರು: ದಿನಾಂಕ 24.01.2026 ರಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕಾರ್ಯಾಗಾರ ನಡೆಯಿತು.ಕಾರ್ಯಾಗಾರದ ಉದ್ಘಾಟನೆ ನಂತರ ಮಾತನಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಕಾಂಗ್ರೇಸ್ ಗೆ ಈ ಯೋಜನೆಯನ್ನು ನೋಡಿ ಭ್ರಮನಿರಸನವಾಗಿದೆ. ಅದಕ್ಕೆ ಜನರ ಮಧ್ಯದಲ್ಲಿ ಅನೇಕ ಸುಳ್ಳುಗಳನ್ನು ಪಸರಿಸಲು ಹೊರಟಿದೆ ಎಂದು ಹೇಳಿದರು. ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, “ವಿಬಿ- ಜಿ ರಾಮ್ ಜಿ” ಅಂದರೆ ‘ವಿಕಸಿತ ಭಾರತ ಗ್ಯಾರಂಟಿ ರೋಜಗಾರ್ ಆಜೀವಿಕಾ ಮಿಷನ್ ಗ್ರಾಮೀಣ’ ಇದು ಗ್ರಾಮೀಣಾಭಿವೃದ್ಧಿ…

Read More

ರಾಜ್ಯಪಾಲರನ್ನು ಅಗೌರವಿಸಲೆಂದೇ ವಿಶೇಷ ಅಧಿವೇಶನನ್ನು ಕರೆಯಲಾಗಿದೆ , ಬಿ ಕೆ ಹರಿಪ್ರಸಾದ್ ಗೂಂಡಾ ವರ್ತನೆ ಸರಿಯಲ್ಲ : ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ

ಮಂಗಳೂರು: ಕಾಂಗ್ರೆಸ್ ಸಂವಿಧಾನಕ್ಕೆ ಅಗೌರವವನ್ನು ತೋರಿಸುವ ರೀತಿಯಲ್ಲಿ ಮೊನ್ನೆಯ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರನ್ನು ಅಗೌರವಿಸಿದ್ದಾರೆ ಎಂದು ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು . ಬರೀ ಬಾಯಿ ಮಾತಿನಲ್ಲಿ ಮಾತ್ರ ಸಂವಿಧಾನಕ್ಕೆ ಕಾಂಗ್ರೆಸಿಗರು ಗೌರವವನ್ನು ನೀಡುತ್ತಾರೆ . ಆದರೆ ಅದರ ಆಶಯಗಳಿಗೆ ಅವರು ಬದ್ದರಾಗುವುದಿಲ್ಲ . ರಾಜ್ಯಪಾಲರ ಮೇಲೆ ಸುಳ್ಳು ಆಪಾಧನೆಯನ್ನು ಅವರು ಮಾಡ್ತಾ ಇದ್ದಾರೆ . ಈ ಜಂಟಿ ಅಧಿವೇಶವನ್ನೇ ಕರೆದಿರುವುದೇ ರಾಜ್ಯಪಾಲರನ್ನು ಅಗೌರವಿಸಲು ಎಂದು ಅವರು ಹೇಳಿದರು…

Read More

ಪೀಸ್ ಕ್ರಿಯೇಟಿವ್ ಶಾಲಾ ವಿದ್ಯಾರ್ಥಿಗಳ ಮೈಸೂರು ಅಧ್ಯಯನ ಪ್ರವಾಸ: ಇತಿಹಾಸ–ವಿಜ್ಞಾನ–ಕಲೆಯ ಅನುಭವ

ಮಂಜೇಶ್ವರ: ಕೇರಳ–ಕರ್ನಾಟಕ ಗಡಿ ಪ್ರದೇಶದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿಕೊಂಡಿರುವ ಪೀಸ್ ಕ್ರಿಯೇಟಿವ್ ಕುಂಜತ್ತೂರು ಹಾಗೂ ಹೊಸಂಗಡಿಯ ಆಂಗ್ಲ ಮಾಧ್ಯಮ ಶಾಲೆಗಳ 3 ನೇ ತರಗತಿಯಿಂದ 9 ನೇ ತರಗತಿ ವಿದ್ಯಾರ್ಥಿಗಳು 2025–26ನೇ ಶೈಕ್ಷಣಿಕ ವರ್ಷದ ಅಧ್ಯಯನ ಪ್ರವಾಸದ ಅಂಗವಾಗಿ ಐತಿಹಾಸಿಕ ನಗರಿ ಮೈಸೂರಿನ ವಿವಿಧ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿ ಅಪಾರ ಮಾಹಿತಿಯನ್ನು ಸಂಗ್ರಹಿಸಿದರು. ಶಾಲಾ ಪ್ರಾಂಶುಪಾಲ ಅಬ್ದುಲ್ ಖಾದರ್, ಆಡಳಿತ ಮಂಡಳಿ ಹಾಗೂ ಶಿಕ್ಷಕರ ನೇತೃತ್ವದಲ್ಲಿ ನಡೆದ ಈ ಅಧ್ಯಯನ ಪ್ರವಾಸವು…

Read More

ಕಾರ್ಕಳ: ಭೀಕರ ರಸ್ತೆ ಅಪಘಾತ- ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ, 9 ಮಂದಿಗೆ ಗಾಯ

ಉಡುಪಿ: ಕಾರ್ಕಳ‌ ತಾಲೂಕಿನ ಮಿಯಾರು ಗ್ರಾಮದ ಕಂಬಳಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದ್ದು, ಮಗು ಸಹಿತ 9 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ತೂಫನ್ ವಾಹನ ಚಾಲಕ ಮಣ್ಣಪ್ಪ, ಚೇತನ್(27), ರೋಹಿತ್(28) ಹಾಗೂ ಮಲ್ಲಮ್ಮ(50) ಎಂದು ಗುರುತಿಸಲಾಗಿದೆ. ಸಂಗೀತ (40), ಕವಿತಾ(38), ಬಸವರಾಜ್(56), ಕಿಶೋರ್(28), ಲಕ್ಷ್ಮೀ(25), ಜ್ಯೋತಿ(25), ಜಯಲಕ್ಷ್ಮೀ(24), ಎರಡು ವರ್ಷದ ಮಗು ಕುಶಲ್ ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ. ಇವರೆಲ್ಲ ಗುಲ್ಬರ್ಗ ಜಿಲ್ಲೆಯವರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ…

Read More
error: Content is protected !!