ಕುಂಬಳೆ–ಮುಳ್ಳೇರಿಯಾ ಕೆಎಸ್‌ಟಿಪಿ ರಸ್ತೆಯಲ್ಲಿ ಭೀಕರ ಅಪಘಾತ: ಕಾರು–ಖಾಸಗಿ ಬಸ್ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ
ಕಾಸರಗೋಡು: ಕುಂಬಳೆ–ಮುಳ್ಳೇರಿಯಾ ಕೆಎಸ್‌ಟಿಪಿ ರಸ್ತೆಯಲ್ಲಿ ಕಾರು ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಬಸ್ ಪ್ರಯಾಣಿಕರಲ್ಲೂ ಹಲವರಿಗೆ ಗಾಯಗಳಾಗಿವೆ.ಇಂದು ಬೆಳಗ್ಗೆ ಸುಮಾರು 8.30 ಗಂಟೆ ವೇಳೆಗೆ ಶಾಂತಿಪಳ್ಳದ ಎಕ್ಸೈಸ್ ಕಚೇರಿ ಸಮೀಪ ಈ ಅಪಘಾತ ಸಂಭವಿಸಿದೆ. ಬದಿಯಡ್ಕ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಕುಂಬಳೆಯ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಾಶಗೊಂಡಿದ್ದು, ಕಾರಿನೊಳಗಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕನ…
