ಮಂಗಳೂರು ವಿಶ್ವವಿದ್ಯಾಲಯದಲ್ಲಿ 5ನೇ ರ‍್ಯಾಂಕ್ ಪಡೆದ ಐಷಾ: ಬರಕಾ ಸಂಸ್ಥೆಗೆ ಹೆಮ್ಮೆಯ ಕ್ಷಣ
ಆಡ್ಯಾರ್‌ನ ಬರಕಾ ಇಂಟರ್‌ನ್ಯಾಷನಲ್ ಶಾಲೆ ಹಾಗೂ ಕಾಲೇಜಿಗೆ ಮತ್ತೊಂದು ಹೆಮ್ಮೆಯ ಕ್ಷಣ ಲಭಿಸಿದೆ. ಸಂಸ್ಥೆಯ ಪದವಿ ಕಾಲೇಜಿನ ವಿದ್ಯಾರ್ಥಿನಿ ಐಷಾ ಅವರು ಮಂಗಳೂರು ವಿಶ್ವವಿದ್ಯಾಲಯದ ಬಿ.ಎ. ವಿಭಾಗದಲ್ಲಿ 5ನೇ ರ‍್ಯಾಂಕ್ ಗಳಿಸಿ ಸಂಸ್ಥೆಯ ಕೀರ್ತಿಪತಾಕೆಯನ್ನು ಮತ್ತೊಮ್ಮೆ ಎತ್ತಿಹಿಡಿದಿದ್ದಾರೆ.ಐಷಾ ಅವರು ಅಶ್ರಫ್ ಅಲಿ ಹಾಗೂ ರಮ್ಲತ್ ದಂಪತಿಯ ಪುತ್ರಿಯಾಗಿದ್ದು, ಅಲ್ತಾಫ್ ಉಮರ್ ಅವರ ಪತ್ನಿಯಾಗಿದ್ದಾರೆ. ಈಗಾಗಲೇ ಶೈಕ್ಷಣಿಕ ಸಾಧನೆಯಲ್ಲಿ ಮೆಚ್ಚುಗೆ ಗಳಿಸಿರುವ ಅವರು ಪ್ರಸ್ತುತ ಮಂಗಳೂರು ವಿಶ್ವವಿದ್ಯಾಲಯದಲ್ಲೇ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ (ಎಂ.ಎ.) ಅಭ್ಯಾಸ ಮಾಡುತ್ತಿದ್ದಾರೆ. ಅವರ…
