Headlines

ಉಡುಪಿಯಲ್ಲಿ ಧಾರಾಕಾರ ಮಳೆ; ಬಿಸಿಲಿನ ಬೇಗೆಯಿಂದ ಜನರಿಗೆ ನಿರಾಳತೆ

ಉಡುಪಿ, ಜು. 17: ಹಲವು ದಿನಗಳ ವಿರಾಮದ ಬಳಿಕ ಉಡುಪಿ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಆರಂಭವಾದ ಧಾರಾಕಾರ ಮಳೆ ಶುಕ್ರವಾರವೂ ಮುಂದುವರಿದಿದ್ದು, ಕಳೆದ ಹಲವು ದಿನಗಳಿಂದ ತೀವ್ರ ಬಿಸಿಲಿನ ತಾಪದಿಂದ ಬಳಲುತ್ತಿದ್ದ ಜನರಿಗೆ ನಿರಾಳತೆ ನೀಡಿದೆ. ಕಳೆದ ಸುಮಾರು ಹತ್ತು ದಿನಗಳಿಂದ ಜಿಲ್ಲೆಯಾದ್ಯಂತ ಉಷ್ಣಾಂಶ ಹೆಚ್ಚಾಗಿ ಬೇಸಿಗೆ ವಾತಾವರಣ ನಿರ್ಮಾಣವಾಗಿತ್ತು. ತೀವ್ರ ಬಿಸಿಲಿನಿಂದ ಜನಜೀವನ ಅಸ್ತವ್ಯಸ್ತವಾಗಿದ್ದರೆ, ಕೃಷಿಕರು ಮಳೆಯ ನಿರೀಕ್ಷೆಯಲ್ಲಿದ್ದರು.ಗುರುವಾರ ರಾತ್ರಿ ಸುರಿದ ಉತ್ತಮ ಮಳೆಯಿಂದ ವಾತಾವರಣ ತಂಪಾಗಿದ್ದು, ಭತ್ತ ನಾಟಿ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಹೊಸ…

Read More

ಮಂಗಳೂರು ಹೊರವಲಯದ ಸುರತ್ಕಲ್‌ ಬಳಿ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಪಲ್ಟಿ

ಮಂಗಳೂರು:ಮಂಗಳೂರು ಹೊರವಲಯದ ಸುರತ್ಕಲ್‌ ಬಳಿ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಪಲ್ಟಿಯಾಗಿದೆ.ನಾಡ ದೋಣಿಯಲ್ಲಿ ಮೀನುಗಾರರು ಮೀನುಗಾರಿಕೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಅಲೆಗಳ ರಭಸಕ್ಕೆ ದೋಣಿ ಅಡಿ ಮೇಲಾಯಿತು. ಈ ದೋಣಿ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿತ್ತು. ದೋಣಿಯಲ್ಲಿ 6 ಮಂದಿ ಮೀನುಗಾರರು ಇದ್ದರು.ಅವರನ್ನು ರಕ್ಷಿಸಲಾಗಿದೆ.ಸಮುದ್ರದ ಅಲೆಗಳ ಹೊಡೆತಕ್ಕೆ ದೋಣಿ ಮಗುಚಿದಾಗ ಅದರಲ್ಲಿದ್ದ ಆಂಧ್ರಪ್ರದೇಶದ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದರು. ಅವರನ್ನುಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.

Read More

ತಲಪಾಡಿಯಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಆರಂಭ

ತಲಪಾಡಿ : ಬಂಟರ ಸಂಘ ತಲಪಾಡಿ ಗ್ರಾಮ ಸಮಿತಿ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್‌ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ 133ನೇ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರವು ಇಂದು ಬಂಟರ ಸಂಘದ ಸಭಾಭವನದಲ್ಲಿ ಆರಂಭಗೊಂಡಿತು. ಶಿಬಿರವನ್ನು ಶ್ರೀ ಸುಧಾಕರ ಅಡ್ಯಂತಾಯ ತಲಪಾಡಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಮೇಶ್ ಆಳ್ವ ದೇವಿಪುರ ವಹಿಸಿದ್ದರು. ಮಾಹಿತಿ ನೀಡುವವರು ಕೆ. ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ,ಮುಖ್ಯ ಅತಿಥಿಗಳಾಗಿ ಶ್ರೀ ವಿನಯ್ ಕುಮಾರ್ ಶೆಟ್ಟಿ ನಾರ್ಲಾ ಹಾಗೂ ಶ್ರೀ…

Read More

ಮುರ್ಷಿದಾಬಾದ್‌ನಲ್ಲಿ ಭೀಕರ ರೈಲು ಅಪಘಾತ: ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸಾವು

ಮುರ್ಷಿದಾಬಾದ್, :ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಐದಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.ಬೆಳಿಗ್ಗೆ ಸುಮಾರು 7 ಗಂಟೆಗೆ ಬರ್ಹಾಂಪೋರ್ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಣಸುಬರ್ಣ ಹಾಗೂ ಗೋಬಿಂದಾಪುರ ರೈಲು ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್‌ನಲ್ಲಿ ಈ ದುರ್ಘಟನೆ ನಡೆದಿದೆ. ನಿಮ್ಟಿತಾ–ಕಟ್ವಾ ಮಾರ್ಗದಲ್ಲಿ ಸಂಚರಿಸುತ್ತಿದ್ದ ಪ್ಯಾಸೆಂಜರ್ ರೈಲು, ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವ್ಯಾನ್ ಹಾಗೂ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಅಪಘಾತದ…

Read More

ದೇಶದ ಮೊದಲ ಹೈಡೋಜನ್ ಇಂಧನ ಚಾಲಿತ ರೈಲಿಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ದೇಶದ ಮೊದಲ ಹೈಡೋಜನ್ ಇಂಧನ ಚಾಲಿತ ಪ್ರಯಾಣಿಕರ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚಾಲನೆ ನೀಡಿದರು. ಹರಿಯಾಣದ ಜಿಂದ್ ರೈಲು ನಿಲ್ದಾಣದಿಂದ ಆರಂಭವಾದ ‘ನಮೋ ಗ್ರೀನ್ ರೈಲ್’ ಸೋನಿಪತ್‌ವರೆಗೆ ಸುಮಾರು 89 ಕಿಲೋಮೀಟರ್ ದೂರ ಸಂಚರಿಸಲಿದೆ. ಸಂಪೂರ್ಣವಾಗಿ ಭಾರತದಲ್ಲೇ ನಿರ್ಮಾಣಗೊಂಡಿರುವ ಈ ರೈಲು ಸೇವೆ ಆರಂಭಿಸುವ ಮೂಲಕ ವಿಶ್ವದ ಅತಿ ಉದ್ದದ ಬ್ರಾಡ್‌ಗೇಜ್ ಹೈಡೋಜನ್ ರೈಲು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತೀಯ ರೈಲ್ವೆಯನ್ನು ಇಂಗಾಲ ಮುಕ್ತಗೊಳಿಸುವ ಮಹತ್ವಾಕಾಂಕ್ಷಿ ಯೋಜನೆಯಡಿ ಇದನ್ನು ಪ್ರಮುಖ ಮೈಲಿಗಲ್ಲಾಗಿ ಪರಿಗಣಿಸಲಾಗಿದೆ….

Read More

ಮಾನವ ಹಕ್ಕುಗಳ ರಕ್ಷಣೆ, ಸಮಾಜ ಸೇವೆಯೇ ಧ್ಯೇಯ: ಹ್ಯೂಮನ್ ರೈಟ್ಸ್ ಫೆಡರೇಷನ್ ಆಫ್ ಇಂಡಿಯಾ

ಮಂಗಳೂರು:ಕಳೆದ ಎರಡು ದಶಕಗಳಿಂದ ಮಾನವ ಹಕ್ಕುಗಳ ರಕ್ಷಣೆ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳ ಮೂಲಕ ರಾಜ್ಯ ಮತ್ತು ದೇಶದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹ್ಯೂಮನ್ ರೈಟ್ಸ್ ಫೆಡರೇಷನ್ ಆಫ್ ಇಂಡಿಯಾ (Human Rights Federation of India) ಜನಸೇವೆಯನ್ನು ಧ್ಯೇಯವಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಶೇಷಪ್ಪ ಬಂಬಿಲ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2002ರಲ್ಲಿ ಸಂಸ್ಥೆ ಆರಂಭಗೊಂಡಿದ್ದು, 2007ರಿಂದ ಅಧಿಕೃತವಾಗಿ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ….

Read More

ಬಂಟ್ವಾಳ ಯುವತಿ ಹತ್ಯೆ: ಮರಣೋತ್ತರ ಪರೀಕ್ಷೆ ಪೂರ್ಣ; ಲಾವಣ್ಯ ಮೃತದೇಹ ನಿವಾಸಕ್ಕೆ ರವಾನೆ

ಬಂಟ್ವಾಳದ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬರ್ಬರವಾಗಿ ಹತ್ಯೆಗೀಡಾದ ಲಾವಣ್ಯ ಅವರ ಮರಣೋತ್ತರ ಪರೀಕ್ಷೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಪೂರ್ಣಗೊಂಡಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಲಾವಣ್ಯ ಅವರ ಮೃತದೇಹವನ್ನು ಬಂಟ್ವಾಳ ತಾಲೂಕಿನ ಕಕ್ಯಪದವು ಗ್ರಾಮದ ಕೊಡಂಗೆಯಲ್ಲಿರುವ ಅವರ ನಿವಾಸಕ್ಕೆ ರವಾನೆ ಮಾಡಲಾಗಿದೆ. ಕುಟುಂಬಸ್ಥರು, ಬಂಧು-ಬಳಗ ಹಾಗೂ ಗ್ರಾಮಸ್ಥರು ಅಂತಿಮ ದರ್ಶನ ಪಡೆಯಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಗುರುವಾರ ಸಂಜೆ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ನಡೆದ ಚೂರಿ ದಾಳಿಯಲ್ಲಿ ಲಾವಣ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಈ ಘಟನೆ ಜಿಲ್ಲಾದ್ಯಂತ…

Read More

ಲಾವಣ್ಯ ಹತ್ಯೆ ಖಂಡನೆ: ಆರೋಪಿಗೆ ಕಠಿಣ ಶಿಕ್ಷೆಯಾಗಲಿ – ಶಾಸಕ ವೇದವ್ಯಾಸ ಕಾಮತ್

ಮಂಗಳೂರಿನ ಬಂಟ್ವಾಳದಲ್ಲಿ ಲಾವಣ್ಯ ಎಂಬ ಯುವತಿಯ ಬರ್ಬರ ಹತ್ಯೆ, ಮತ್ತೊಂದು ಪ್ರಕರಣದಲ್ಲಿ ಯುವತಿಯೊಬ್ಬಳ ಮೇಲೆ ಮಾರಣಾಂತಿಕ ಚೂರಿ ಇರಿತ ಘಟನೆಗಳು ರಾಜ್ಯದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಧೆ ಎಷ್ಟರಮಟ್ಟಿಗೆ ಹದಗೆಟ್ಟಿದೆ ಎಂಬುದರ ಸತ್ಯ ದರ್ಶನವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಕಳವಳ ವ್ಯಕ್ತಪಡಿಸಿದರು. ಆರೋಪಿಗಳಿಗೆ ಕಾನೂನಿನ ಯಾವುದೇ ಭಯವಿಲ್ಲದೇ ಹಾಡಹಗಲೇ ಮುಗ್ಧ ಜೀವಗಳನ್ನು ಬಲಿ ಪಡೆಯುವ ಧೈರ್ಯ ಬರಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಆಡಳಿತ ವ್ಯವಸ್ಥೆಯೇ ಕಾರಣ. ಬದುಕಿನಲ್ಲಿ ಅನೇಕ ಕನಸುಗಳನ್ನು…

Read More

ಕೇರಳದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್; ಮುಂದಿನ ಮೂರು ಗಂಟೆ ಭಾರೀ ಮಳೆ ಸಾಧ್ಯತೆ

ತಿರುವನಂತಪುರ: ಕೇರಳದಲ್ಲಿ ಆಟಿ ಮಾಸದ ಮಳೆ ತೀವ್ರಗೊಂಡಿದ್ದು, ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಬಿರುಗಾಳಿಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಬೆಳಿಗ್ಗೆ ಬಿಡುಗಡೆ ಮಾಡಿದ ನೌಕಾಸ್ಟ್ ಮುನ್ಸೂಚನೆಯಲ್ಲಿ ತಿಳಿಸಿದೆ. ಅಲಪ್ಪುಳ, ಕೋಟಾಯಂ, ಎರ್ನಾಕುಳಂ, ಮಲಪ್ಪುರಂ, ಕೋಝಿಕ್ಕೋಡು, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳ ಅವಧಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಈ ಜಿಲ್ಲೆಗಳ ಕೆಲವೆಡೆ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 50 ಕಿ.ಮೀ….

Read More

ಕೊಂಕಣ ರೈಲ್ವೆ ಭಾರತೀಯ ರೈಲ್ವೆಗೆ ವಿಲೀನಕ್ಕೆ ಶೀಘ್ರ ಕ್ರಮ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಂಡರೆ ಮಾತ್ರ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ದೊರೆಯಲಿದ್ದು, ಈ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಉಡುಪಿಯ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಕೊಂಕಣ ರೈಲ್ವೆ ವತಿಯಿಂದ ಸುಮಾರು ₹2.26 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಲಿಫ್ಟ್‌ನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಕೊಂಕಣ ರೈಲ್ವೆಯಲ್ಲಿ ಕರ್ನಾಟಕ, ಕೇರಳ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳು ಪಾಲುದಾರರಾಗಿವೆ. ಕೇರಳ ಮತ್ತು ಗೋವಾ ಸರ್ಕಾರಗಳು ತಮ್ಮ…

Read More
error: Content is protected !!