Headlines

ಬಿಸಿ ರೋಡ್ ಯುವತಿ ಹತ್ಯೆ ಖಂಡನೀಯ; ಆರೋಪಿಗೆ ಕಠಿಣ ಶಿಕ್ಷೆಯಾಗಲಿ: ಪವನ್ ಕುಮಾರ್ ಶಿರ್ವ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಸಿ ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಹತ್ಯೆ ಪ್ರಕರಣ ಅತ್ಯಂತ ಆಘಾತಕಾರಿ ಹಾಗೂ ಖಂಡನೀಯ ಘಟನೆ ಎಂದು ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಹೇಳಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಘಟನೆ ಸಮಾಜದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಸ್ವತಂತ್ರ ಬದುಕಿನ ಬಗ್ಗೆ ತೀವ್ರ ಆತಂಕ ಮೂಡಿಸಿದೆ ಎಂದು ಕಳವಳ ವ್ಯಕ್ತಪಡಿಸಿದರು. ಸಮಾಜದಲ್ಲಿ ಪ್ರತಿಯೊಬ್ಬ ಹೆಣ್ಣುಮಗಳನ್ನು ತಮ್ಮ ಮನೆಯ ಮಗಳು ಹಾಗೂ ಸಹೋದರಿಯಂತೆ…

Read More

ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ

ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ರಾಜ್ಯ ಸರ್ಕಾರವು ಮಹತ್ವದ ಉತ್ತೇಜನ ನೀಡಿದ್ದು, 2025-26ನೇ ಸಾಲಿನ 23 ಕಂಬಳಗಳಿಗೆ ತಲಾ ₹5 ಲಕ್ಷದಂತೆ ಒಟ್ಟು ₹1.15 ಕೋಟಿ ಅನುದಾನ ಮಂಜೂರು ಮಾಡಿದೆ. ಪ್ರವಾಸೋದ್ಯಮ ಇಲಾಖೆಯಿಂದ ಅನುದಾನದ ಹಣ ಬಿಡುಗಡೆಗೊಂಡಿದ್ದು, ಸರ್ಕಾರದ ನಿರ್ಧಾರವನ್ನು ಕಂಬಳ ಆಯೋಜಕರು ಹಾಗೂ ಸಂಘಟಕರು ಸ್ವಾಗತಿಸಿದ್ದಾರೆ. ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿದ್ದ ಭರವಸೆಯಂತೆ ಕಂಬಳಗಳಿಗೆ ಅನುದಾನ ಬಿಡುಗಡೆ ಮಾಡಿರುವುದು ಸಂತಸದ ಸಂಗತಿ…

Read More

ಅಧಿವೇಶನದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವರದಿ ಮಂಡನೆಗೆ ಆಗ್ರಹ

ಉಡುಪಿ: ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿ, ಅದರ ಕುರಿತು ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಒತ್ತಾಯಿಸಿದರು.ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಮುನ್ನ ದಿನ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರಿಂದ ವರದಿ ಸ್ವೀಕರಿಸಲಾಗಿದ್ದರೂ, ಹೊಸದಾಗಿ ಅಧಿಕಾರಕ್ಕೆ ಬಂದಿರುವ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ…

Read More

ಮಂಗಳೂರು ವಿವಿಯಲ್ಲಿ ಮಾತೃಭಾಷೆ ತುಳುವಿಗೆ ಉಳಿವಿಲ್ಲ: ಲತೇಶ್ ಬಾಕ್ರಬೈಲು

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಭಾರತೀಯ ಭಾಷಾ ವಿಭಾಗಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಹಾಗೂ ಅವುಗಳನ್ನು ಹಂತ ಹಂತವಾಗಿ ಮುಚ್ಚುತ್ತಿರುವ ಕ್ರಮವನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ತೀವ್ರವಾಗಿ ಖಂಡಿಸಿದೆ. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ತಿನ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಲತೇಶ್ ಬಾಕ್ರಬೈಲು, ಕರಾವಳಿ ಮತ್ತು ಮಲೆನಾಡು ಭಾಗದ ಉನ್ನತ ಶಿಕ್ಷಣದ ಪ್ರಮುಖ ಕೇಂದ್ರವಾಗಿರುವ ಮಂಗಳೂರು ವಿಶ್ವವಿದ್ಯಾನಿಲಯವು ಭಾಷೆ ಹಾಗೂ ಸಂಸ್ಕೃತಿಯ ಸಂರಕ್ಷಣೆಯಲ್ಲಿ ಮುಂಚೂಣಿಯಲ್ಲಿರಬೇಕಾದ ಸಂಸ್ಥೆಯಾಗಿದ್ದು, ಇತ್ತೀಚಿನ ಆಡಳಿತಾತ್ಮಕ ನಿರ್ಧಾರಗಳು ಶೈಕ್ಷಣಿಕ ವಾತಾವರಣಕ್ಕೆ ಗಂಭೀರ…

Read More

ವಿದ್ಯಾರ್ಥಿಗಳ ಕಣ್ಣೀರಿಗೆ ಮಾತ್ರವಲ್ಲ, ಹೋರಾಟಗಾರನ ಜೀವಕ್ಕೂ ಕೇಂದ್ರ ಸರ್ಕಾರ ನಿರ್ಲಕ್ಷ್ಯ’; ವಾಂಗ್ಚುಕ್ ಅವರ ಆರೋಗ್ಯದ ಬಗ್ಗೆ ಆತಂಕ: ಪಿಣರಾಯಿ ವಿಜಯನ್

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಹೋರಾಟ ಮುಂದುವರಿಸುತ್ತಿರುವ ಸೋನಂ ವಾಂಗ್ಚುಕ್ ಅವರಿಗೆ ವಿರೋಧ ಪಕ್ಷದ ನಾಯಕ ಪಿಣರಾಯಿ ವಿಜಯನ್ ಬೆಂಬಲ ವ್ಯಕ್ತಪಡಿಸಿದ್ದಾರೆ.ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಪಿಣರಾಯಿ ವಿಜಯನ್, ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ವಿದ್ಯಾರ್ಥಿಗಳ ಕಣ್ಣೀರಿಗೆ ಮಾತ್ರವಲ್ಲ, ಹೋರಾಟಗಾರನ ಜೀವಕ್ಕೂ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿದೆ” ಎಂದು ಅವರು ಬರೆದಿದ್ದಾರೆ. ಕಳೆದ 19 ದಿನಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಯುವಕರು ಈ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ…

Read More

ಆಮೀರ್ ಖಾನ್ ಅವರನ್ನು ಹತ್ಯೆ ಮಾಡುವವರಿಗೆ ₹5 ಕೋಟಿ ಬಹುಮಾನ ಘೋಷಿಸಿದ ಅಯೋಧ್ಯೆಯ ಧಾರ್ಮಿಕ ನಾಯಕ ಜಗದ್ಗುರು ಪರಮಹಂಸ ಆಚಾರ್ಯ.

ಬಾಲಿವುಡ್ ನಟ ಆಮೀರ್ ಖಾನ್ ಅವರು ತಮ್ಮ ದೀರ್ಘಕಾಲದ ಸಂಗಾತಿ ಗೌರಿ ಸ್ಪ್ರಾಟ್ ಅವರನ್ನು ವಿವಾಹವಾಗಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಈ ಘೋಷಣೆ ಮಾಡಲಾಗಿದೆ. ಈ ತಿಂಗಳ ಆರಂಭದಲ್ಲಿ ಮುಂಬೈನ ಬಾಂದ್ರಾದಲ್ಲಿರುವ ನಿವಾಸದಲ್ಲಿ ನಡೆದ ಸರಳ ನೋಂದಾಯಿತ ವಿವಾಹ ಸಮಾರಂಭದಲ್ಲಿ ಆಮೀರ್ ಖಾನ್ ಮತ್ತು ಗೌರಿ ಸ್ಪ್ರಾಟ್ ವಿವಾಹವಾದರು. ಸಮಾರಂಭದಲ್ಲಿ ಆಪ್ತ ಬಂಧುಗಳು ಮತ್ತು ಸ್ನೇಹಿತರು ಮಾತ್ರ ಭಾಗವಹಿಸಿದ್ದರು. ಆಮೀರ್ ಖಾನ್ ಈ ಹಿಂದೆ ಎರಡು ಬಾರಿ ವಿವಾಹವಾಗಿದ್ದರು. ಮೊದಲಿಗೆ ರೀನಾ ದತ್ತ ಅವರನ್ನು, ನಂತರ ಚಲನಚಿತ್ರ…

Read More

ಟ್ರಂಪ್‌ಗೆ ಜೀವ ಬೆದರಿಕೆ ಸಂದೇಶ: ಟೆಹ್ರಾನ್‌ನಲ್ಲಿ ಭಾರೀ ಹೋರ್ಡಿಂಗ್ ವೈರಲ್

ಟೆಹ್ರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರಿಯಾಗಿಸಿಕೊಂಡು ಇರಾನ್‌ನಲ್ಲಿ ಅಳವಡಿಸಲಾದ ದೈತ್ಯಾಕಾರದ ಜಾಹೀರಾತು ಫಲಕವೊಂದು ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಟ್ರಂಪ್ ಅವರನ್ನು ಶವಪೆಟ್ಟಿಗೆಯಲ್ಲಿ ಮಲಗಿರುವಂತೆ ಚಿತ್ರಿಸಿರುವ ಈ ಹೋರ್ಡಿಂಗ್‌ನಲ್ಲಿ ಪರ್ಷಿಯನ್ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ “We Will Kill Trump” ಎಂಬ ಸಂದೇಶ ಪ್ರದರ್ಶಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಮಧ್ಯ ಟೆಹ್ರಾನ್‌ನ ಎಂಗೆಲಾಬ್ (Enghelab) ಚೌಕದಲ್ಲಿ ಅಳವಡಿಸಲಾದ ಈ ಹೋರ್ಡಿಂಗ್‌ನಲ್ಲಿ ಟ್ರಂಪ್ ಅವರ ಕೂದಲು ಅಸ್ತವ್ಯಸ್ತವಾಗಿರುವುದು, ಕಣ್ಣು ಹಾಗೂ ಬಾಯಿ…

Read More

ಭಾರೀ ಮಳೆಗೆ ಮಂಜೇಶ್ವರದಲ್ಲಿ ಗುಡ್ಡ ಕುಸಿತ; ಬಾವಿ ಮಣ್ಣಿನಲ್ಲಿ ಸಂಪೂರ್ಣ ಮುಚ್ಚಳ

ಮಂಜೇಶ್ವರ: ನಿನ್ನೆ ಸುರಿದ ಭಾರೀ ಮಳೆಯ ಪರಿಣಾಮ ಮಂಜೇಶ್ವರದ ಪೊಯ್ಯೆ ಕಂಡ ಪ್ರದೇಶದಲ್ಲಿ ಗುಡ್ಡ ಕುಸಿದ ಘಟನೆ ನಡೆದಿದೆ.ಗುಡ್ಡದಿಂದ ಜರಿದು ಬಂದ ಅಪಾರ ಪ್ರಮಾಣದ ಮಣ್ಣು ಪುರುಷೋತ್ತಮ ಎಂಬವರ ಮನೆಯ ಬಾವಿಯೊಳಗೆ ನುಗ್ಗಿ, ಬಾವಿ ಸಂಪೂರ್ಣ ಮಣ್ಣಿನಿಂದ ಮುಚ್ಚಿಹೋಗಿದೆ. ಇದರಿಂದ ಬಾವಿಗೆ ಭಾರೀ ಹಾನಿಯಾಗಿದ್ದು, ಬಳಕೆಗೆ ಅಸಾಧ್ಯವಾಗಿದೆ. ಗುಡ್ಡ ಕುಸಿತ ಸಂಭವಿಸಿದ ಸ್ಥಳದ ಪಕ್ಕದಲ್ಲೇ ಮನೆ ಇದ್ದರೂ, ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.

Read More

ಇರಾನ್‌ ವಿರುದ್ಧ ಅಮೆರಿಕದ ನೌಕಾ ನಿರ್ಬಂಧ; ಮೂರು ವಾಣಿಜ್ಯ ಹಡಗುಗಳ ತಡೆ

ವಾಷಿಂಗ್ಟನ್: ಇರಾನ್ ವಿರುದ್ಧ ಜಾರಿಯಲ್ಲಿರುವ ನೌಕಾ ನಿರ್ಬಂಧವನ್ನು ಉಲ್ಲಂಘಿಸಿ ಸಂಚರಿಸಲು ಯತ್ನಿಸಿದ್ದ ಮೂರು ವಾಣಿಜ್ಯ ಹಡಗುಗಳನ್ನು ಅಮೆರಿಕದ ಪಡೆಗಳು ತಡೆದಿವೆ ಎಂದು ಅಮೆರಿಕದ ಕೇಂದ್ರೀಯ ಕಮಾಂಡ್ (CENTCOM) ತಿಳಿಸಿದೆ. ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಪ್ರಕಟಣೆ ನೀಡಿರುವ ಸೆಂಟ್‌ಕಾಮ್, ಎರಡು ಹಡಗುಗಳ ಮಾರ್ಗವನ್ನು ಬದಲಾಯಿಸಲಾಗಿದ್ದು, ಆದೇಶ ಪಾಲಿಸದ ಒಂದು ಹಡಗನ್ನು ನಿಷ್ಕ್ರಿಯಗೊಳಿಸಲಾಗಿದೆ. ಮತ್ತೊಂದು ಹಡಗನ್ನು ಪರಿಶೀಲನೆಗಾಗಿ ವಶಕ್ಕೆ ಪಡೆದು ನಿಯಮ ಪಾಲನೆ ಖಚಿತಪಡಿಸಲಾಗಿದೆ ಎಂದು ತಿಳಿಸಿದೆ. ಸೆಂಟ್‌ಕಾಮ್ ಮಾಹಿತಿ ಪ್ರಕಾರ, ಜುಲೈ 16ರಂದು ಒಮಾನ್ ಕೊಲ್ಲಿಯಲ್ಲಿ…

Read More

ಬಿ.ಸಿ.ರೋಡ್ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಬಂಧನ……?!!!

ಮಂಗಳೂರು, ಜು.17:* ಬಿ.ಸಿ.ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯಳನ್ನು ತಲ್ವಾರ್‌ನಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಚೇತನ್‌ನನ್ನು ಪೊಲೀಸರು ಶುಕ್ರವಾರ ಬೆಳಿಗ್ಗೆ ಮಂಗಳೂರು ಸಮೀಪ ಬಂಧಿಸಿರುವುದಾಗಿ ತಿಳಿದುಬಂದಿದೆ. ಬಂಧಿತ ಆರೋಪಿ ಚೇತನ್ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿಯಾಗಿದ್ದು, ಮೃತ ಲಾವಣ್ಯ (ಕಕ್ಯಪದವು ನಿವಾಸಿ) ಅವರನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಲಾವಣ್ಯ ಆತನ ಪ್ರೀತಿಯನ್ನು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗುರುವಾರ ಸಂಜೆ ಬಿ.ಸಿ.ರೋಡ್ ಸರ್ಕಾರಿ ಬಸ್…

Read More
error: Content is protected !!