ಬಿಲ್ಡರ್ ಜಿತೇಂದ್ರ ಕೊಟ್ಟಾರಿ ವಿರುದ್ಧ ಎಫ್‌ಐಆರ್ ದಾಖಲು ಸತ್ಯಕ್ಕೆ ಸಿಕ್ಕ ವಿಜಯ : ಉಜಿರೆ ತನುಷ್ ಶೆಟ್ಟಿ
ಮಂಗಳೂರಿನ ಬಿಲ್ಡರ್ ಜಿತೇಂದ್ರ ಕೊಟ್ಟಾರಿ ಮತ್ತು ಉಜಿರೆ ನಿವಾಸಿ ತನುಷ್ ಶೆಟ್ಟಿ ನಡುವಿನ ‘ರೋಡ್ ರೇಜ್’ ವಿವಾದ ಹೊಸ ತಿರುವು ಪಡೆದಿದೆ. ಒಂದೂವರೆ ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ, ಬಿಲ್ಡರ್ ಜಿತೇಂದ್ರ ಕೊಟ್ಟಾರಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿರುವುದು ಸಂತಸ ತಂದಿದ್ದು ಇದು ನ್ಯಾಯಕ್ಕೆ ಸಿಕ್ಕ ಜಯ ಎಂದು ತನುಷ್ ಶೆಟ್ಟಿ ಹೇಳಿದ್ದಾರೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 9, 2024 ರಂದು ಮಂಗಳೂರಿನಲ್ಲಿ ಕ್ರಿಕೆಟ್ ಪಂದ್ಯ ಮುಗಿಸಿ ಹಿಂತಿರುಗುತ್ತಿದ್ದಾಗ…
