ಬಿ.ಸಿ.ರೋಡ್‌ನಲ್ಲಿ ಯುವತಿಯ ಬರ್ಬರ ಹತ್ಯೆ: ಏಕಪಕ್ಷೀಯ ಪ್ರೀತಿಯ ಶಂಕೆ, ಆರೋಪಿ ಪರಾರಿ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದ ಭೀಕರ ಘಟನೆಯಲ್ಲಿ 21 ವರ್ಷದ ಯುವತಿ ಲಾವಣ್ಯ ಮಾರಕಾಸ್ತ್ರದ ದಾಳಿಗೆ ಬಲಿಯಾಗಿದ್ದಾರೆ. ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿಯು ಯುವತಿಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಲಾವಣ್ಯ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಚೇತನ್ ಎಂಬಾತ ಈ ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿ ಮೃತ ಯುವತಿಯ ದೂರದ…
