ಐದು ವರ್ಷಗಳ ಸೇವಾ ಪಯಣಕ್ಕೆ ಕೃತಜ್ಞತೆ ಸಲ್ಲಿಸಿದ: ಕೊಳ್ನಾಡು ಗ್ರಾ.ಪಂ. ನಿಕಟಪೂರ್ವ ಉಪಾಧ್ಯಕ್ಷೆ ಕೆ.ಎ. ಅಸ್ಮ ಹಸೈನಾರ್ ತಾಳಿತ್ತನೂಜಿ
ಕೊಳ್ನಾಡು ಗ್ರಾಮ ಪಂಚಾಯತ್‌ನ ಅತೀ ಕಿರಿಯ ಸದಸ್ಯೆಯಾಗಿ ಹಾಗೂ ಒಂದು ಅವಧಿಯ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ತಾಳಿತ್ತನೂಜಿ–ನಾರ್ಶದ ಪ್ರಜ್ಞಾವಂತ ಮತದಾರರು, ಪಕ್ಷದ ನಾಯಕರು, ಬೂತ್ ಮಟ್ಟದ ಕಾರ್ಯಕರ್ತರು ಹಾಗೂ ಗ್ರಾಮದ ಎಲ್ಲಾ ಹಿತೈಷಿ ನಾಗರೀಕರಿಗೆ,ಚುನಾಯಿತ ಮಹಿಳಾ ಪ್ರತಿನಿಧಿಗಳ ಸಂಘ (ಸುಗ್ರಾಮ)ಇವರಿಗೂ ಮೊಟ್ಟ ಮೊದಲನೆಯದಾಗಿ ತುಂಬು ಹೃದಯದ ಧನ್ಯವಾದಗಳು. ತಾಳಿತ್ತನೂಜಿ–ನಾರ್ಶ ವಾರ್ಡಿನ ಗ್ರಾಮ ಪಂಚಾಯತ್ ಸದಸ್ಯೆಯಾಗಿ ಹಾಗೂ ಜಿಲ್ಲೆಯ ದೊಡ್ಡ ಗ್ರಾಮ ಪಂಚಾಯತ್‌ಗಳಲ್ಲೊಂದಾದ ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸುವ ಅವಕಾಶವನ್ನು ಜವಾಬ್ದಾರಿಯಿಂದ ಸ್ವೀಕರಿಸಿ,…
