Headlines

ಉಪ್ಪೂರಿನ ನಂದಿನಿ ಡೇರಿಗೆ ಸಂಪರ್ಕಿಸುವ ರಸ್ತೆಯಲ್ಲಿ ಬಿರುಕು; ತಕ್ಷಣ ದುರಸ್ತಿಗೆ ಸಾರ್ವಜನಿಕರ ಆಗ್ರಹ

ಬ್ರಹ್ಮಾವರ: ಉಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಎಂಎಫ್ ನಂದಿನಿ ಡೇರಿಗೆ ಸಂಪರ್ಕಿಸುವ ಪ್ರಮುಖ ರಸ್ತೆಯ ಮಧ್ಯಭಾಗದಲ್ಲಿ ದೊಡ್ಡ ಬಿರುಕು ಉಂಟಾಗಿದ್ದು, ಯಾವುದೇ ಕ್ಷಣದಲ್ಲಿ ಭಾರಿ ಅನಾಹುತ ಸಂಭವಿಸುವ ಆತಂಕ ಎದುರಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ರಸ್ತೆಯ ಎರಡೂ ಬದಿಗಳಲ್ಲಿ ಆಳವಾದ ಕಂದಕಗಳಿದ್ದು, ಕಳೆದ ಒಂದು ವರ್ಷದಿಂದ ಈ ಸಮಸ್ಯೆ ಮುಂದುವರಿದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಮಾಜಸೇವಕ ಸತೀಶ್ ಪೂಜಾರಿ ಕೀಳಂಜೆ ದೂರಿದ್ದಾರೆ. ಪ್ರತಿದಿನ ನಂದಿನಿ ಡೇರಿಗೆ ಹಾಲು ಸಾಗಿಸುವ ಟ್ಯಾಂಕರ್‌ಗಳು, ಕಂಟೇನರ್‌ಗಳು ಸೇರಿದಂತೆ ಭಾರೀ…

Read More

ಕ್ರೀಡಾಪಟುಗಳಿಗೆ ಹಾಜರಾತಿ ವಿನಾಯಿತಿ, ಉದ್ಯೋಗ ಮೀಸಲಾತಿ: ಡಾ. ಜಿ. ಪರಮೇಶ್ವರ

ಬೆಂಗಳೂರು: ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಹಾಜರಾತಿಯಲ್ಲಿ ಶೇ.15 ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವವರಿಗೆ ಶೇ.25ರಷ್ಟು ವಿನಾಯಿತಿ ನೀಡುವ ಸರ್ಕಾರಿ ಆದೇಶ ಜಾರಿಗೊಳಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಜರಾತಿ ಕೊರತೆಯಿಂದ ಯಾವುದೇ ಕ್ರೀಡಾಪಟು ಪರೀಕ್ಷೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದರು. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಶೇ.2ರಷ್ಟು…

Read More

ಮಳೆಯ ಅಭಾವ ನಿವಾರಣೆಗೆ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ.

ಮಳೆಗಾಲದಲ್ಲಿ ಮಳೆಯ ಅಭಾವ ಬಿಸಿಲಿನ ಆರ್ಭಟ ಹೆಚ್ಚಾಗಿದ್ದು ಪರಿಸರ ಹಾಗೂ ತಪಮಾನ ದಲ್ಲಿ ಆಗುತ್ತಿರುವ ವ್ಯತ್ಯಾಸ, ಕೃಷಿಗೆ ನೀರಿನ ಅಭಾವ, ವಿದ್ಯುತ್ ಅಭಾವ ನಿಗಿಸಲು ಪರಿಸರ ರಕ್ಷಣೆ ಉದ್ದೇಶದಿಂದ ಮಳೆಗಾಗಿ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ಸಂಕ್ರಮಣ ದಿನ ಸಾರ್ವಜನಿಕ ವಿಶೇಷ ಪ್ರಾಥನೆ ನೆರವೇರಿಸಲಾಯಿತು. ಕ್ಷೇತ್ರದ ಅರ್ಚಕ ಶ್ರೀ ತಿರುಮಲೇಶ್ ಆಚಾರ್ಯ, ಗುರುಸ್ವಾಮಿ ಉದಯ ಪವಳ, ಕ್ಷೇತ್ರ ಪದಾಧಿಕಾರಿಗಳಾದ ಪದ್ಮನಾಭ ಕಡಪರ, ಆದರ್ಶ ಬಿ ಎಂ, ದೇವರಾಜ್, ಸುನಿಲ್ ಹೊಸಂಗಡಿ, ಅನುಪಮಾ, ಕೀರ್ತಿ ರಾಜ್, ನಂದ ಹೆಗ್ಡೆ…

Read More

ಮಳೆಗಾಗಿ ಕದ್ರಿ ದೇವಾಲಯದಲ್ಲಿ ಪರ್ಜನ್ಯ ಜಪ

ಮಂಗಳೂರು: ರಾಜ್ಯ ಸೇರಿದಂತೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದಲ್ಲಿ ಶುಕ್ರವಾರ ಪರ್ಜನ್ಯ ಜಪ ಹಾಗೂ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು. ಸಂಭಾವ್ಯ ಬರ ಪರಿಸ್ಥಿತಿ ನಿವಾರಣೆ, ಸಮರ್ಪಕ ಮಳೆ ಹಾಗೂ ನೀರಿನ ಕೊರತೆ ನೀಗಿಸುವಂತೆ ವರುಣ ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಕದ್ರಿ ದೇವಾಲಯದ ಗೋಮುಖ ತೀರ್ಥದಲ್ಲಿ ವೇದ ಪಾರಾಯಣದೊಂದಿಗೆ ಪರ್ಜನ್ಯ ಜಪ ನಡೆಯಿತು. ಈ ಕುರಿತು ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ಮಾತನಾಡಿ, ಕರಾವಳಿಯಲ್ಲಿ…

Read More

ಉಪ್ಪಿನಂಗಡಿಯಲ್ಲಿ ಖೋಟಾ ನೋಟು ಮುದ್ರಣ ಘಟಕ ಪತ್ತೆ: 8 ಮಂದಿ ಬಂಧನ, ಮುದ್ರಣ ಯಂತ್ರ ಸೇರಿ ಅಪಾರ ಸಾಮಗ್ರಿ ವಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಖೋಟಾ ನೋಟು ಮುದ್ರಣ ಘಟಕವನ್ನು ಜಿಲ್ಲಾ ಪೊಲೀಸರು ಭೇದಿಸಿದ್ದು, ಕಾರ್ಯಾಚರಣೆಯಲ್ಲಿ ಏಳು ಆರೋಪಿಗಳನ್ನು ಹಾಗೂ ಬಾಡಿಗೆ ಕಟ್ಟಡ ಒದಗಿಸಿದ್ದ ಸ್ಥಳೀಯ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆ ಅಧಿಕಾರಿಗಳು ಪದ್ಮುಂಜ ಗ್ರಾಮದ ಅಡೆಂಜದಲ್ಲಿರುವ ಬಾಡಿಗೆ ಕಟ್ಟಡದ ಮೇಲೆ ತಡರಾತ್ರಿ ದಾಳಿ ನಡೆಸಿದ ವೇಳೆ ಖೋಟಾ ನೋಟು ತಯಾರಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಸ್ಥಳದಲ್ಲಿದ್ದ ಆರೋಪಿಗಳನ್ನು…

Read More

ದೆಹಲಿ-ಮಂಗಳೂರು ಡ್ರಗ್ಸ್ ಜಾಲ ಭೇದಿಸಿದ ಸಿಸಿಬಿ: ₹5.20 ಕೋಟಿ ಮೌಲ್ಯದ 5.196 ಕೆಜಿ ಎಂಡಿಎಂಎ ವಶ, ಇಬ್ಬರ ಬಂಧನ

ಮಂಗಳೂರು: ನಗರ ಸಿಸಿಬಿ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ದೆಹಲಿಯಿಂದ ಎಂಡಿಎಂಎ (MDMA) ಮಾದಕ ವಸ್ತುವನ್ನು ಮಂಗಳೂರಿಗೆ ಸಾಗಿಸಿ ಕರಾವಳಿ ಭಾಗದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಸುಮಾರು ₹5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕ ವಸ್ತು, ಒಂದು ಕಾರು ಹಾಗೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸುದೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್…

Read More

ಮುನಿರಾಜು ಕೆ.ಸಿ.ಗೆ ‘ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್–2026’

ಮಂಗಳೂರು:ಕೋಲಾರ ಜಿಲ್ಲೆಯ ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ಅಧಿಕಾರಿ (ಸಿಆರ್‌ಪಿ) ಹಾಗೂ ಅತ್ಯುತ್ತಮ ಸಿಆರ್‌ಪಿ ಪ್ರಶಸ್ತಿ ಪುರಸ್ಕೃತ ಮುನಿರಾಜು ಕೆ.ಸಿ. ಅವರನ್ನು ಕನ್ನಡ ಭವನ ನೀಡುವ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್–2026’ಗೆ ಆಯ್ಕೆ ಮಾಡಲಾಗಿದೆ.ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ. ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ ನಡೆಯಲಿರುವ ‘ಕರ್ನಾಟಕ ಗಡಿನಾಡು…

Read More

ಬಂಟ್ವಾಳದಲ್ಲಿ ಆ. 9ರಂದು ಹಿರಿಯರ ಚಿಂತನಾ ಸಮಾವೇಶ

ಬಂಟ್ವಾಳ: ಆ. 9ರಂದು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದಿಂದ ಹಿರಿಯರ ಚಿಂತನಾ ಸಮಾವೇಶಬಂಟ್ವಾಳ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ (ರಿ.), ಮೆಲ್ಲಾರ್–ಬಂಟ್ವಾಳ ವತಿಯಿಂದ ಹಿರಿಯರಿಗಾಗಿ ವಿಶೇಷ ‘ಹಿರಿಯರ ಚಿಂತನಾ ಸಮಾವೇಶ’ವನ್ನು ಆಗಸ್ಟ್ 9ರಂದು ಐತಿಹಾಸಿಕ ಪ್ರಸಿದ್ಧ ಕ್ಷೇತ್ರವಾದ ಪಾಣೆಮಂಗಳೂರಿನ ಹಳೆ ಸೇತುವೆ ಸಮೀಪದ ನೇತ್ರಾವತಿ ನದಿ ತಟದಲ್ಲಿರುವ ಶ್ರೀ ಭಯಂಕೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್ ತಿಳಿಸಿದ್ದಾರೆ. ಈ ಕುರಿತು ಬಿಸಿರೋಡಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ…

Read More

ಡಾ. ಶರಣಪ್ಪ ಗಬ್ಬೂರಿಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ಮಂಗಳೂರು: ಸಾಹಿತಿ ಹಾಗೂ ಬೆಂಗಳೂರು ಕೆ.ಆರ್.ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಶರಣಪ್ಪ ಗಬ್ಬೂರು (ಕೋಲಾರ) ಅವರಿಗೆ ಕನ್ನಡ ಭವನ ನೀಡುವ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026” ಘೋಷಿಸಲಾಗಿದೆ. ಜುಲೈ 26ರಂದು ನಡೆಯಲಿರುವ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ…

Read More

ಎ. ಚಂದ್ರಶೇಖರ್‌ಗೆ ‘ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್–2026’

ಮಂಗಳೂರು, ಜು.16:ಕೋಲಾರದ ರಂಗ ನಿರ್ದೇಶಕ ಹಾಗೂ ಸಿನಿಮಾ ನಟ ಎ. ಚಂದ್ರಶೇಖರ್ ಅವರನ್ನು ಕನ್ನಡ ಭವನ ನೀಡುವ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್–2026’ಗೆ ಆಯ್ಕೆ ಮಾಡಲಾಗಿದೆ. ರಂಗಭೂಮಿ ಮತ್ತು ಚಲನಚಿತ್ರ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಹಾಗೂ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದ ಅಂಗವಾಗಿ ನಡೆಯುವ ಸಮಾರಂಭದಲ್ಲಿ ಎ. ಚಂದ್ರಶೇಖರ್ ಅವರಿಗೆ ಪ್ರಶಸ್ತಿ…

Read More
error: Content is protected !!