ನಂತೂರು ವೃತ್ತದಲ್ಲಿ ಭೀಕರ ಅಪಘಾತ: ಸ್ಕೂಟರ್‌ಗೆ ಬಸ್ ಡಿಕ್ಕಿ, ಯುವತಿ ಸ್ಥಳದಲ್ಲೇ ಸಾವು
ಮಂಗಳೂರು: ನಗರದ ನಂತೂರು ವೃತ್ತದ ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿದ್ದು ಹಿಂಬದಿ ಸವಾರೆಯಾಗಿದ್ದ ಯುವತಿಯ ಮೇಲೆ ಬಸ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಮೃತಪಟ್ಟ ಯುವತಿ. ಈಕೆ ತನ್ನ ಭಾವೀ ಪತಿಯೊಂದಿಗೆ ಶಿವಭಾಗ್ ಕಡೆಯಿಂದ ಸ್ಕೂಟರ್ ನಲ್ಲಿ ವಾಮಂಜೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ, ಕದ್ರಿ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಸಾಗುತ್ತಿದ್ದ ಬಸ್ ತಾಗಿದ್ದು ಹಿಂಬದಿಯಿದ್ದ ಸವಾರೆ ನೆಲಕ್ಕೆ ಬಿದ್ದಿದ್ದಾರೆ. ಈ ವೇಳೆ,…
