ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ
ಹಳೆಯಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಕೇಂದ್ರ ಮಹಿಳಾ ಫಟಕದ ನವಮ ವಾರ್ಷಿಕೋತ್ಸವ ಪಾವಂಜೆ ದೇವಸ್ಥಾನದ ಆವರಣದಲ್ಲಿ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ಸುರತ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಅಶೋಕ್ ಶೆಟ್ಟಿ ತಡಂಬೈಲ್ ವಹಿಸಿದ್ದರು.ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಗುತ್ತು ಸತೀಶ್ ಶೆಟ್ಟಿ ಅವರು ಅಸಕ್ತ ಕಲಾವಿದರ ಬದುಕಿಗೆ ಶಕ್ತಿ ತುಂಬಿದ್ದಾರೆ. ಕಲಾವಿದರ ವೈಯಕ್ತಿಕ ಬದುಕಿನ ಸತ್ಯವನ್ನು ಶೋಧಿಸಿದ ಪಟ್ಲರವರು ಆ ಕಾರಣಕ್ಕಾಗಿಯೇ ಪಟ್ಲ ಫೌಂಡೇಶನ್…
