ಬರ ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲಿ: ಜೆಡಿಎಸ್ ಎಂ ಎಲ್ ಸಿ ಎಸ್.ಎಲ್. ಬೋಜೇಗೌಡ
ಮಂಗಳೂರು:ರಾಜ್ಯದಲ್ಲಿ ಮಳೆ ಕೊರತೆಯಿಂದ ಬರದ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಜವಾಬ್ದಾರಿಯ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿರುವುದಾಗಿ ತಿಳಿಸಿದರು. ರಾಜ್ಯ ಸರ್ಕಾರ ಇದುವರೆಗೆ ಯಾವುದೇ ತಾಲೂಕು ಅಥವಾ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿಲ್ಲ. ಶ್ರಾವಣ…
