ಕುಂಬಳೆ ಟೋಲ್ ಗೇಟ್ ಅನಧಿಕೃತ ಟೋಲ್ ಸಂಗ್ರಹ ವಿರೋಧಿಸಿ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಎದುರು ಜನಪ್ರತಿನಿಧಿಗಳ ಪ್ರತಿಭಟನೆ
ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ ಕುಂಬಳೆ ಟೋಲ್ ಗೇಟ್ ಅನಧಿಕೃತ ಟೋಲ್ ಸಂಗ್ರಹದ ವಿರುದ್ಧ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಮುಂಬಾಗದಲ್ಲಿ ಜನಪ್ರತಿನಿಧಿಗಳ ಪ್ರತಿಭಟನಾ ಧರಣಿ ನಡೆಯಿತು.ಸೋಮವಾರದಂದು ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ರವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನಾ ಧರಣಿಗೆ ಕಾಸರಗೋಡು ಶಾಸಕ ಎನ್ ಎ ನೆಲ್ಲಿಕುನ್ನು ಚಾಲನೆ ನೀಡಿದರು. ಕೇಂದ್ರ ಸರಕಾರದ ನಿಬಂಧನೆಗಳನ್ನು ಉಲ್ಲಂಘಿಸಿ ನ್ಯಾಯಾಲಯದ ತೀರ್ಪು ಬರುವ ಮುನ್ನವೇ ಸಾರ್ವಜನಿಕರಿಂದ ಅನ್ಯಾಯವಾಗಿ ಟೋಲ್ ಸಂಗ್ರಹ ನಡೆಸುತ್ತಿರುವುದು ಟೋಲ್ ಅಧಿಕಾರಸ್ಥರ…
