ಮನೆಯ ಆವರಣ ಗೋಡೆಗೆ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದ ಸ್ಕೂಟರ್ -ಸವಾರ ಸಾವು
ಉಳ್ಳಾಲ, ಆ. 13 : ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಸ್ಕೂಟರೊಂದು ರಸ್ತೆ ಬದಿಯ ಮನೆಯ ಆವರಣ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಸವಾರ ಸಾವನ್ನಪ್ಪಿದ ಘಟನೆ ಆಗಸ್ಟ್ 12ರ ರಾತ್ರಿ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆ ಎಂಬಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮೀ ಮಂದಿರ ಬಳಿಯ ನಿವಾಸಿ ರಾಘವೇಂದ್ರ ಸಾಲ್ಯಾನ್ ಯಾನೆ ರಘು (44) ಎಂದು ಗುರುತಿಸಲಾಗಿದೆ.ಖಾಸಗಿ ಕಂಪನಿಯೊಂದರಲ್ಲಿ ಇಲೆಕ್ಟಿಕಲ್ ಗುತ್ತಿಗೆದಾರರಾಗಿದ್ದ ರಾಘವೇಂದ್ರ ರಾಘವೇಂದ್ರ ಅವರು ಆ.12ರ…